AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Isuru Udana Retirement: ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಶ್ರೀಲಂಕಾ ತಂಡದ ಇಸುರು ಉದಾನ

Isuru Udana: ಒಟ್ಟು 21 ಏಕದಿನ ಪಂದ್ಯಗಳನ್ನು ಆಡಿರುವ ಇಸುರು ಉದಾನ ಒಂ ದು ಅರ್ಧಶತಕ ಸಹಿತ 237 ರನ್ ಗಳಿಸಿ 18 ವಿಕೆಟ್ ಕಿತ್ತಿದ್ದರು.

Isuru Udana Retirement: ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಶ್ರೀಲಂಕಾ ತಂಡದ ಇಸುರು ಉದಾನ
Isuru Udana
TV9 Web
| Updated By: Vinay Bhat|

Updated on:Jul 31, 2021 | 12:32 PM

Share

ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಇಸುರು ಉದಾನ ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಐಲ್ಯಾಂಡ್ ಕ್ರಿಕೆಟ್ ಮಾಹಿತಿ ನೀಡಿದೆ. ಉದಾನ ಅವರು 2012 ರಲ್ಲಿ ಭಾರತ ವಿರುದ್ಧ ಆಡುವ ಮೂಲಕ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಇದಕ್ಕೂ ಮುನ್ನ 2009 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ-20 ಪಂದ್ಯ ಆಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟಿದ್ದರು.

ಒಟ್ಟು 21 ಏಕದಿನ ಪಂದ್ಯಗಳನ್ನು ಆಡಿರುವ ಇಸುರು ಉದಾನ ಒಂದು ಅರ್ಧಶತಕ ಸಹಿತ 237 ರನ್ ಗಳಿಸಿ 18 ವಿಕೆಟ್ ಕಿತ್ತಿದ್ದರು. ಟಿ-20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 34 ಮ್ಯಾಚ್ ಆಡಿದ್ದು 256 ರನ್ ಬಾರಿಸಿ 27 ವಿಕೆಟ್ ಪಡೆದಿದ್ದಾರೆ. ಐಪಿಎಲ್​ನಲ್ಲೂ ಇವರು ಆರ್​ಸಿಬಿ ಪರ ಆಡಿದ್ದರು.

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಉದಾನ ಕಣಕ್ಕಿಳಿದಿದ್ದರು. ಐಪಿಎಲ್ 2020 ರಲ್ಲಿ ಆರ್​ಸಿಬಿ ಇವರನ್ನು 50 ಲಕ್ಷಕ್ಕೆ ಹರಾಜಿನಲ್ಲಿ ಕೊಂಡುಕೊಂಡಿತ್ತು. ಆದರೆ, ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲಿಲ್ಲ. ಆಡಿದ 10 ಪಂದ್ಯಗಳಲ್ಲಿ 9.75 ಎಕಾನಿಮಿ ರನ್ ನೀಡಿದ್ದರು. ಹೀಗಾಗಿ ಈ ವರ್ಷ ಉದಾನರನ್ನು ಕೈಬಿಟ್ಟಿತ್ತು.

Published On - 12:04 pm, Sat, 31 July 21

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ