ಕೆಎಲ್ ರಾಹುಲ್ ಕ್ರಮಾಂಕ ಬದಲಿಸಿ, ಇಶಾನ್ ಕಿಶನ್​ಗೆ ಚಾನ್ಸ್​ ನೀಡಲು ಮಾಜಿ ಕ್ರಿಕೆಟಿಗನ ಸಲಹೆ

Team India Playing 11: ಮುಂಬೈ ಇಂಡಿಯನ್ಸ್ ಪರ ಉತ್ತಮ ಇನ್ನಿಂಗ್ಸ್ ಆಡಿದ್ದಾರೆ. ಐಪಿಎಲ್‌ನ ಕೊನೆಯಲ್ಲಿ ಮತ್ತು ಅಭ್ಯಾಸ ಪಂದ್ಯದಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಕೆಎಲ್ ರಾಹುಲ್ ಕ್ರಮಾಂಕ ಬದಲಿಸಿ, ಇಶಾನ್ ಕಿಶನ್​ಗೆ ಚಾನ್ಸ್​ ನೀಡಲು ಮಾಜಿ ಕ್ರಿಕೆಟಿಗನ ಸಲಹೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 27, 2021 | 7:59 PM

T20 World Cup 2021: ಟೀಮ್ ಇಂಡಿಯಾ (Team India) ಟಿ20 ವಿಶ್ವಕಪ್ 2021 ರ 2ನೇ ಪಂದ್ಯದಲ್ಲಿ ನ್ಯೂಜಿಲೆಂಡ್ (India vs New Zealand) ವಿರುದ್ದ ಆಡಲಿದೆ. ಉಭಯ ತಂಡಗಳು ಮೊದಲ ಪಂದ್ಯದಲ್ಲಿ ಸೋತಿರುವ ಕಾರಣ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ ಬಲಿಷ್ಠ ಬಳಗವನ್ನು ರೂಪಿಸಬೇಕೆಂದು ಸಲಹೆ ನೀಡಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಹರ್ಭಜನ್ ಸಿಂಗ್. ಅಕ್ಟೋಬರ್ 31 ರಂದು ನಡೆಯಲಿರುವ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಬೇಕು. ಅದರಂತೆ ಇಶಾನ್ ಕಿಶನ್ (Ishan Kishan)​ ಅವರಿಗೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಸ್ಥಾನ ನೀಡಬೇಕೆಂದು ತಿಳಿಸಿದ್ದಾರೆ.

ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ತಂಡಕ್ಕೆ ಸ್ಫೋಟಕ ಆರಂಭವನ್ನು ನೀಡಬಲ್ಲರು. ಇತ್ತೀಚೆಗೆ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಪ್ಲೇಯಿಂಗ್​ ಇಲೆವೆನ್​ನಲ್ಲಿರಬೇಕು ಎಂದು ನಾನು ಭಾವಿಸುತ್ತೇನೆ ಎಂದು ಭಜ್ಜಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ರೋಹಿತ್ ಶರ್ಮಾ ಜೊತೆ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯಬೇಕು ಎಂದಿದ್ದಾರೆ. ಇದರಿಂದ ಟೀಮ್ ಇಂಡಿಯಾ ಸ್ಪೋಟಕ ಆರಂಭ ಪಡೆಯಬಹುದು ಎಂದಿದ್ದಾರೆ.

ಏಕೆಂದರೆ ಕಿಶನ್ ಸ್ಫೋಟಕ ಬ್ಯಾಟ್ಸ್‌ಮನ್. ಯಾವುದೇ ಬೌಲರ್ ಮೇಲೆ ಒತ್ತಡ ಹೇರಬಲ್ಲರು. ಮುಂಬೈ ಇಂಡಿಯನ್ಸ್ ಪರ ಉತ್ತಮ ಇನ್ನಿಂಗ್ಸ್ ಆಡಿದ್ದಾರೆ. ಐಪಿಎಲ್‌ನ ಕೊನೆಯಲ್ಲಿ ಮತ್ತು ಅಭ್ಯಾಸ ಪಂದ್ಯದಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಳಿಯಬೇಕೆಂದು ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರೆ ಉತ್ತಮ ಎಂದಿರುವ ಹರ್ಭಜನ್, ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿ ಹಾಗೂ ಕೆಎಲ್ ರಾಹುಲ್ 4 ರಲ್ಲಿಯೂ ಬ್ಯಾಟ್ ಮಾಡಬಹುದು. ಇದರಿಂದ ಟಾಪ್ 4 ಅನ್ನು ಬಲಿಷ್ಠವಾಗಿಸಬಹುದು ಎಂದರು. ಇನ್ನು 5ನೇ ಕ್ರಮಾಂಕದಲ್ಲಿ ರಿಷಬ್ ಪಂತ್ ಮುಂದುವರೆಯಬೇಕೆಂದು ತಿಳಿಸಿದರು. ಹಾಗೆಯೇ ಭುವನೇಶ್ವರ್ ಕುಮಾರ್ ಬದಲಿಗೆ ಶಾರ್ದೂಲ್ ಠಾಕೂರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದಿರುವ ಭಜ್ಜಿ, ಡೆತ್​ ಓವರ್​ಗಳಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸುವ ಪಾಂಡ್ಯ ಅವರನ್ನು ತಂಡದಲ್ಲಿ ಇರಿಸಿಕೊಳ್ಳೋದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2021: ನ್ಯೂಜಿಲೆಂಡ್ ತಂಡಕ್ಕೆ ಬಿಗ್ ಶಾಕ್: ವಿಶ್ವಕಪ್​ನಿಂದ ಪ್ರಮುಖ ಆಟಗಾರ ಹೊರಕ್ಕೆ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

ಇದನ್ನೂ ಓದಿ: T20 World Cup 2021: 90 ಕೆ.ಜಿ ವಿಕೆಟ್ ಕೀಪರ್: ಅದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಶಹಝಾದ್

(It is necessary that Ishan Kishan be in Team India- Harbhajan Singh)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ