T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ
Kohli-afridi
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 01, 2021 | 4:09 PM

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ಆಸೆ ಕೂಡ ಬಹುತೇಕ ಕಮರಿದೆ. ಇದಾಗ್ಯೂ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ಗೆದ್ದು, ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಜಯ ಸಾಧಿಸಿದರೆ ನೆಟ್​ ರನ್​ ರೇಟ್ ಆಧಾರದಲ್ಲಿ ಟೀಮ್​ ಇಂಡಿಯಾಗೆ ಸೆಮಿಫೈನಲ್​ ಪ್ರವೇಶಿಸುವ ಅವಕಾಶ ಸಿಗಲಿದೆ. ಅಂದರೆ ಭಾರತ ತಂಡ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ ಅದುವೇ ಪವಾಡವಾಗಲಿದೆ ಎಂದು ಪಾಕಿಸ್ತಾನ್ ಮಾಜಿ ಆಲ್​ರೌಂಡರ್ ಶಹೀದ್ ಅಫ್ರಿದಿ ಅಣುಕಿಸಿದ್ದಾರೆ.

ಭಾರತಕ್ಕೆ ಇನ್ನೂ ಸೆಮೀಸ್​ ಅರ್ಹತೆ ಪಡೆಯುವ ಅವಕಾಶವಿದೆ. ಆದರೆ ಅವರು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದದ ಪಂದ್ಯಗಳನ್ನು ಹೇಗೆ ಆಡಿದ್ದಾರೆ ಎಂದು ನಾವು ನೋಡಿದ್ದೇವೆ. ಹೀಗಾಗಿ ಅವರು ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಅದೊಂದು ಪವಾಡವಾಗಿರಲಿದೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು. ಇಲ್ಲಿ ನ್ಯೂಜಿಲೆಂಡ್​ಗೆ ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ಎದುರಾಳಿಗಳು. ಅಂದರೆ ಇಲ್ಲಿ ಅಫ್ಘಾನ್ ಮಾತ್ರ ಬಲಿಷ್ಠ ತಂಡ. ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಮುಂದಿನ ಪಂದ್ಯಗಳಲ್ಲಿ ಭಾರತ ಭರ್ಜರಿ ನೆಟ್​ ರನ್​ ರೇಟ್​ನೊಂದಿಗೆ ಜಯ ಸಾಧಿಸಿದರೆ ಸೆಮಿಫೈನಲ್​ಗೆ ಪ್ರವೇಶಿಸುವ ಅವಕಾಶ ಇರಲಿದೆ.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(It will be a miracle to see India qualify: Afridi)

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ