ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ಆಸೆ ಕೂಡ ಬಹುತೇಕ ಕಮರಿದೆ. ಇದಾಗ್ಯೂ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ಗೆದ್ದು, ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಜಯ ಸಾಧಿಸಿದರೆ ನೆಟ್ ರನ್ ರೇಟ್ ಆಧಾರದಲ್ಲಿ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಸಿಗಲಿದೆ. ಅಂದರೆ ಭಾರತ ತಂಡ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ ಅದುವೇ ಪವಾಡವಾಗಲಿದೆ ಎಂದು ಪಾಕಿಸ್ತಾನ್ ಮಾಜಿ ಆಲ್ರೌಂಡರ್ ಶಹೀದ್ ಅಫ್ರಿದಿ ಅಣುಕಿಸಿದ್ದಾರೆ.
ಭಾರತಕ್ಕೆ ಇನ್ನೂ ಸೆಮೀಸ್ ಅರ್ಹತೆ ಪಡೆಯುವ ಅವಕಾಶವಿದೆ. ಆದರೆ ಅವರು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದದ ಪಂದ್ಯಗಳನ್ನು ಹೇಗೆ ಆಡಿದ್ದಾರೆ ಎಂದು ನಾವು ನೋಡಿದ್ದೇವೆ. ಹೀಗಾಗಿ ಅವರು ಸೆಮಿಫೈನಲ್ಗೆ ಅರ್ಹತೆ ಪಡೆದರೆ ಅದೊಂದು ಪವಾಡವಾಗಿರಲಿದೆ ಎಂದು ಅಫ್ರಿದಿ ತಿಳಿಸಿದ್ದಾರೆ.
ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು. ಇಲ್ಲಿ ನ್ಯೂಜಿಲೆಂಡ್ಗೆ ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ಎದುರಾಳಿಗಳು. ಅಂದರೆ ಇಲ್ಲಿ ಅಫ್ಘಾನ್ ಮಾತ್ರ ಬಲಿಷ್ಠ ತಂಡ. ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಮುಂದಿನ ಪಂದ್ಯಗಳಲ್ಲಿ ಭಾರತ ಭರ್ಜರಿ ನೆಟ್ ರನ್ ರೇಟ್ನೊಂದಿಗೆ ಜಯ ಸಾಧಿಸಿದರೆ ಸೆಮಿಫೈನಲ್ಗೆ ಪ್ರವೇಶಿಸುವ ಅವಕಾಶ ಇರಲಿದೆ.
ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ
ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?
ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ
(It will be a miracle to see India qualify: Afridi)