AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಪಾದಾರ್ಪಣೆ ಪಂದ್ಯದ ಮೊದಲ ಎಸೆತದಲ್ಲೇ ಸಂಜು ವಿಕೆಟ್ ಕಿತ್ತ ಭಾರತೀಯ

Jai Mundhra's Dream T20 Debut: ಐರ್ಲೆಂಡ್ ವಿರುದ್ಧದ ಮೊದಲ T20 ಪಂದ್ಯದಲ್ಲಿ ಭಾರತ ಮೂಲದ ಜೈ ಮುಂಧ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯದ ಮೊದಲ ಎಸೆತದಲ್ಲೇ ಭಾರತದ ಅನುಭವಿ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ನಿರ್ಮಿಸಿದರು.

IND vs IRE: ಪಾದಾರ್ಪಣೆ ಪಂದ್ಯದ ಮೊದಲ ಎಸೆತದಲ್ಲೇ ಸಂಜು ವಿಕೆಟ್ ಕಿತ್ತ ಭಾರತೀಯ
Jai Moondra
ಪೃಥ್ವಿಶಂಕರ
|

Updated on:Jun 26, 2026 | 10:29 PM

Share

ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಐರ್ಲೆಂಡ್ (India vs Ireland) ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್ ನಿಯಮಿತ ಅಂತರದಲ್ಲಿ ವಿಕಟ್ ಕಳೆದುಕೊಂಡರೂ, ಬಂದ ಬಂದವರೆಲ್ಲ ಹೊಡಿಬಡಿ ಆಟವನ್ನು ಪ್ರದರ್ಶಿಸಿದರು. ಇದರ ಫಲವಾಗಿ ಭಾರತದ ಬಲಿಷ್ಠ ಬೌಲಿಂಗ್​ನೆಂದರು ಐರ್ಲೆಂಡ್ 20 ಓವರ್​ಗಳಲ್ಲಿ 183 ರನ್ ಕಲೆಹಾಕಿತು. ಭಾರತದ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ನೋಡಿದವರು ಇದು ಸುಲಭ ಗುರಿಯಾಗುತ್ತದೆ ಎಂದೇ ಭಾವಿಸಿದ್ದರು. ಆದರೆ ಇದಕ್ಕೆ ಐರ್ಲೆಂಡ್ ಅವಕಾಶ ಮಾಡಿಕೊಡಲಿಲ್ಲ. ಐರ್ಲೆಂಡ್ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಭಾರತದ ಮೂಲದ ಜೈ ಮುಂಧ್ರಾ (Jai Moondra) ತಾವು ಬೌಲ್ ಮಾಡಿದ ಮೊದಲ ಓವರ್ ಮೊದಲ ಎಸೆತದಲ್ಲೇ ಭಾರತಕ್ಕೆ ಶಾಕ್ ನೀಡಿದರು.

ರಾಜಸ್ಥಾನ ಮೂಲ

ರಾಜಸ್ಥಾನ ಮೂಲದ ಬೌಲಿಂಗ್‌ ಆಲ್‌ರೌಂಡರ್ ಜೈ ಮುಂಧ್ರಾ ತಮ್ಮ ಮೊದಲ ಎಸೆತದಲ್ಲೇ ಇತಿಹಾಸ ನಿರ್ಮಿಸಿ ಭಾರತದ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಬೌಲ್ಡ್ ಮಾಡಿದರು. ಇನ್ನಿಂಗ್ಸ್‌ನ ಎರಡನೇ ಓವರ್ ಮತ್ತು ಅವರ ಅಂತರರಾಷ್ಟ್ರೀಯ ವೃತ್ತಿಜೀವನದ ಮೊದಲ ಓವರ್ ಬೌಲಿಂಗ್ ಮಾಡಲು ಬಂದ ಜೈ ಮುಂಧ್ರಾ, ಸಂಜು ಸ್ಯಾಮ್ಸನ್ ಅವರ ವಿಕೆಟ್ ಪಡೆದು ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಮ್ಮ ವಿಕೆಟ್​ಗಳ ಖಾತೆಯನ್ನು ತೆರೆದರು.

ಎರಡನೇ ಐರಿಶ್ ಬೌಲರ್

ಇದರೊಂದಿಗೆ, ಜೈ ಮುಂಧ್ರಾ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಟಿ20 ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಎರಡನೇ ಐರಿಶ್ ಬೌಲರ್ ಎನಿಸಿಕೊಂಡರು. ಇದಕ್ಕೂ ಮೊದಲು, ಮ್ಯಾಥ್ಯೂ ಹಂಫ್ರೀಸ್ ಈ ಸಾಧನೆ ಮಾಡಿದ್ದರು. ಪಂಜಾಬ್ ಮೂಲದ ಸಿಮಿ ಸಿಂಗ್ ನಂತರ ಐರ್ಲೆಂಡ್ ಪರ ಆಡಿದ ಎರಡನೇ ಭಾರತೀಯ ಮೂಲದ ಕ್ರಿಕೆಟಿಗ ಜೈ ಮುಂಧ್ರಾ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ.

IND vs IRE: 34 ರನ್​ಗಳಿಂದ ಹೀನಾಯವಾಗಿ ಸೋಲಿಸಿ ಟೀಂ ಇಂಡಿಯಾದ ಅಹಂ ಮುರಿದ ಐರ್ಲೆಂಡ್

ರಾಜಸ್ಥಾನ ಪರ ರಾಜ್ಯ ಮಟ್ಟದ ಕ್ರಿಕೆಟ್

ಜನವರಿ 10, 1997 ರಂದು ರಾಜಸ್ಥಾನದ ಟೋಂಕ್‌ನಲ್ಲಿ ಜನಿಸಿದ ಜೇ ಮುಂಧ್ರಾ ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಒಲವು ಹೊಂದಿದ್ದರು. ಹೀಗಾಗಿ ಅವರು ರಾಜಸ್ಥಾನ ಪರ 14 ವರ್ಷದೊಳಗಿನವರ ಕ್ರಿಕೆಟ್ ಕೂಡ ಆಡಿದ್ದು, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಆಡಿದ್ದರು. ನಂತರ ತಮ್ಮ ಎಂ.ಟೆಕ್ ಅನ್ನು ಮುಂದುವರಿಸಲು ವಿದ್ಯಾರ್ಥಿ ವೀಸಾದಲ್ಲಿ ಐರ್ಲೆಂಡ್‌ಗೆ ತೆರಳಿದ ಜೇ ಮುಂಧ್ರಾ ಅಲ್ಲಿ ಕ್ರಿಕೆಟ್ ಆಡುವುದನ್ನು ಮುಂದುವರೆಸಿದರು. ಡಬ್ಲಿನ್‌ನಲ್ಲಿರುವ ಪ್ರಸಿದ್ಧ ಲೀನ್‌ಸ್ಟರ್ ಕ್ರಿಕೆಟ್ ಕ್ಲಬ್‌ ಪರ ಆಡಲು ಪ್ರಾರಂಭಿಸಿದ ಜೇ ಮುಂಧ್ರಾ 2023 ರಲ್ಲಿ ಐರಿಶ್ ಸೀನಿಯರ್ ಕಪ್ ವಿಜೇತ ತಂಡದ ಭಾಗವಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Fri, 26 June 26

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ