AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 5th Test: ಜೈಸ್ವಾಲ್ ಮುಂದಿನ ಟಾರ್ಗೆಟ್ ಪೂಜಾರ: ಇತಿಹಾಸ ಸೃಷ್ಟಿಸಲು ಸಜ್ಜಾದ ಯಶಸ್ವಿ

Yashasvi Jaiswal Record: ಭಾರತದ ಸ್ಟಾರ್ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮತ್ತೊಂದು ಬೃಹತ್ ಬ್ಯಾಟಿಂಗ್ ಮೈಲಿಗಲ್ಲನ್ನು ಸಾಧಿಸಲು ತುದಿಗಾಲಿನಲ್ಲಿದ್ದಾರೆ. ಇದುವರೆಗೆ ಆಡಿದ ಎಂಟು ಟೆಸ್ಟ್‌ಗಳಲ್ಲಿ 971 ರನ್ ಗಳಿಸಿರುವ ಎಡಗೈ ಬ್ಯಾಟರ್, ಒಂಬತ್ತು ಪಂದ್ಯಗಳಲ್ಲಿ 1000 ಟೆಸ್ಟ್ ರನ್ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆ ಸೃಷ್ಟಿಸುವ ಅವಕಾಶ ಹೊಂದಿದ್ದಾರೆ.

IND vs ENG 5th Test: ಜೈಸ್ವಾಲ್ ಮುಂದಿನ ಟಾರ್ಗೆಟ್ ಪೂಜಾರ: ಇತಿಹಾಸ ಸೃಷ್ಟಿಸಲು ಸಜ್ಜಾದ ಯಶಸ್ವಿ
Yashasvi Jaiswal
Vinay Bhat
|

Updated on: Mar 01, 2024 | 11:58 AM

Share

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತದ ಯಂಗ್ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ಬೊಂಬಾಟ್ ಪ್ರದರ್ಶನ ತೋರುತ್ತಿದ್ದಾರೆ. ಇಲ್ಲಿಯವರೆಗೆ ಆಡಿದ ನಾಲ್ಕು ಟೆಸ್ಟ್‌ಗಳಲ್ಲಿ ಎಡಗೈ ಬ್ಯಾಟರ್ 93.57 ರನ್ ಸರಾಸರಿಯಲ್ಲಿ 655 ರನ್ ಗಳಿಸಿದ್ದಾರೆ. ಅವರು ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ತವರಿನಲ್ಲಿ ತನ್ನ ಮೊದಲ ಟೆಸ್ಟ್ ಸರಣಿ ಆಡುತ್ತಿರುವ 22 ವರ್ಷದ ಕ್ರಿಕೆಟಿಗ, ಇದುವರೆಗೆ ಆಡಿದ ನಾಲ್ಕು ಟೆಸ್ಟ್‌ಗಳಲ್ಲಿ ಈಗಾಗಲೇ ಅನೇಕ ದಾಖಲೆಗಳನ್ನು ಮುರಿದಿದ್ದಾರೆ. ಇದೀಗ ಐದನೇ ಟೆಸ್ಟ್‌ನಲ್ಲಿ ಕೂಡ ಸಾಧನೆಯ ಶಿಖರವನ್ನೇರಲು ಸಜ್ಜಾಗಿದ್ದಾರೆ. ಗುರುವಾರ (ಮಾರ್ಚ್ 7) ಧರ್ಮಶಾಲಾದಲ್ಲಿ ಐದನೇ ಟೆಸ್ಟ್ ಆರಂಭವಾಗಲಿದೆ.

ಸದ್ಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ 29 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಟೆಸ್ಟ್‌ ಇತಿಹಾಸದಲ್ಲಿ ವೇಗವಾಗಿ 1000 ರನ್ ಗಳಿಸಿದ ಭಾರತೀಯ ಬ್ಯಾಟರ್ ಆಗಲಿದ್ದಾರೆ. ಸದ್ಯ ಈ ದಾಖಲೆ ಚೇತೇಶ್ವರ ಪೂಜಾರ ಅವರ ಹೆಸರಿನಲ್ಲಿದ್ದು, ಈ ಮೈಲುಗಲ್ಲು ತಲುಪಲು 11 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಇನ್ನಿಂಗ್ಸ್‌ ವಿಚಾರದಲ್ಲಿ ಈ ದಾಖಲೆ ವಿನೋದ್ ಕಾಂಬ್ಳಿ ಹೆಸರಿನಲ್ಲಿದೆ. ಮಾಜಿ ಎಡಗೈ ಬ್ಯಾಟರ್ 12 ಪಂದ್ಯಗಳ 14 ಇನ್ನಿಂಗ್ಸ್‌ಗಳಲ್ಲಿ ಟೆಸ್ಟ್‌ನಲ್ಲಿ 1000 ರನ್ ಪೂರೈಸಿದ್ದರು.

ಸ್ಮೃತಿ ಮಂಧಾನ ಸ್ಫೋಟಕ ಸಿಕ್ಸ್ ಕಂಡು ದಂಗಾದ ಆರ್​ಸಿಬಿ ಫ್ಯಾನ್ಸ್: ವಿಡಿಯೋ ನೋಡಿ

ಜೈಸ್ವಾಲ್ ಈಗ ಎಂಟು ಟೆಸ್ಟ್‌ಗಳ 15 ಇನ್ನಿಂಗ್ಸ್‌ಗಳಲ್ಲಿ 971 ರನ್ ಗಳಿಸಿದ್ದಾರೆ. ಲೆಜೆಂಡರಿ ಸರ್ ಡೊನಾಲ್ಡ್ ಬ್ರಾಡ್‌ಮನ್ ಏಳು ಪಂದ್ಯಗಳಲ್ಲಿ 1000 ಟೆಸ್ಟ್ ರನ್‌ಗಳನ್ನು ಪೂರೈಸಿದ ಸಾಧನೆ ಮಾಡಿದ್ದರು. ಉಳಿದ ಮೂರು ಬ್ಯಾಟರ್‌ಗಳು – ಇಂಗ್ಲೆಂಡ್‌ನ ಹರ್ಬರ್ಟ್ ಸಟ್‌ಕ್ಲಿಫ್, ಎವರ್ಟನ್ ವೀಕ್ಸ್ ಮತ್ತು ಜಾರ್ಜ್ ಹೆಡ್ಲಿ ಈ ಸಾಧನೆಯನ್ನು ಮಾಡಲು ಒಂಬತ್ತು ಟೆಸ್ಟ್‌ಗಳನ್ನು ತೆಗೆದುಕೊಂಡಿದ್ದರು. ಜೈಸ್ವಾಲ್ ಐದನೇ ಟೆಸ್ಟ್‌ನಲ್ಲಿ 1000 ರನ್‌ಗಳ ಗಡಿಯನ್ನು ತಲುಪಲು ಯಶಸ್ವಿಯಾದರೆ, ಅವರು ಟೆಸ್ಟ್‌ನಲ್ಲಿ 1000 ರನ್ ಪೂರೈಸಿದ ಇತಿಹಾಸದಲ್ಲಿ ಜಂಟಿ ಎರಡನೇ ವೇಗದ ಬ್ಯಾಟರ್ ಆಗಲಿದ್ದಾರೆ.

ಇದಲ್ಲದೆ, ಜೈಸ್ವಾಲ್ ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ 700 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಇತಿಹಾಸದ ಮೊದಲ ಭಾರತೀಯ ಬ್ಯಾಟರ್ ಮತ್ತು ಒಟ್ಟಾರೆ ಮೂರನೇ ಆಟಗಾರನಾಗುವ ಅವಕಾಶಹೊಂದಿದ್ದಾರೆ. ಸದ್ಯಕ್ಕೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಗ್ರಹಾಂ ಗೂಚ್ ಹೆಸರಿನಲ್ಲಿದೆ, ಅವರು 1990 ರಲ್ಲಿ ಇಂಗ್ಲೆಂಡ್‌ನಲ್ಲಿ ಆಡಿದ ಸರಣಿಯಲ್ಲಿ ಒಟ್ಟು 752 ರನ್ ಗಳಿಸಿದ್ದರು. ಜೈಸ್ವಾಲ್​ಗೆ ಈ ದಾಖಲೆ ಮುರಿಯಲು 98 ರನ್ ಅಗತ್ಯವಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!