James Anderson: ಜೇಮ್ಸ್ ಅ್ಯಂಡರ್ಸನ್ ವಿದಾಯ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್
James Anderson: 2003 ರಲ್ಲಿ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ ಜೇಮ್ಸ್ ಅ್ಯಂಡರ್ಸನ್ ಈವರೆಗೆ 348 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಇದೇ ವೇಳೆ ಒಟ್ಟು 700 ವಿಕೆಟ್ಗಳನ್ನು ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ ಲಾರ್ಡ್ಸ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ಅ್ಯಂಡರ್ಸನ್ ಮುಂದಾಗಿದ್ದಾರೆ.
ವಿಶ್ವ ಕ್ರಿಕೆಟ್ನ ಸರ್ವಶ್ರೇಷ್ಠ ವೇಗದ ಬೌಲರ್ ಜೇಮ್ಸ್ ಅ್ಯಂಡರ್ಸನ್ ವಿದಾಯಕ್ಕೆ ವೇದಿಕೆ ಸಿದ್ಧವಾಗಿದೆ. ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂಲಕ ಅ್ಯಂಡರ್ಸನ್ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಇಂಗ್ಲೆಂಡ್ ಪ್ಲೇಯಿಂಗ್ XI: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಶೋಯೆಬ್ ಬಶೀರ್, ಗಸ್ ಅಟ್ಕಿನ್ಸನ್, ಜೇಮ್ಸ್ ಅ್ಯಂಡರ್ಸನ್.
ವೆಸ್ಟ್ ಇಂಡೀಸ್ ಪ್ಲೇಯಿಂಗ್ XI: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಮೈಕೈಲ್ ಲೂಯಿಸ್, ಕಿರ್ಕ್ ಮೆಕೆಂಜಿ, ಅಲಿಕ್ ಅಥಾನಾಝ್, ಕವೆಮ್ ಹಾಡ್ಜ್, ಜೇಸನ್ ಹೋಲ್ಡರ್, ಜೋಶುವಾ ಡ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಶಮರ್ ಜೋಸೆಫ್, ಜೇಡನ್ ಸೀಲ್ಸ್.
ವೃತ್ತಿಜೀವನದ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ಅ್ಯಂಡರ್ಸನ್:
For the final time, welcome to the arena Jimmy 🐐#ENGvWI pic.twitter.com/wzHnkGFx5e
— England’s Barmy Army 🏴🎺 (@TheBarmyArmy) July 10, 2024
ಅಚ್ಚರಿಯ ಅ್ಯಂಡರ್ಸನ್:
ಇಂಗ್ಲೆಂಡ್ ಪರ 187 ಟೆಸ್ಟ್ ಪಂದ್ಯಗಳನ್ನಾಡಿರುವ 41ರ ಹರೆಯದ ಜೇಮ್ಸ್ ಅ್ಯಂಡರ್ಸನ್ ಈವರೆಗೆ ಒಟ್ಟು 39877 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18568 ರನ್ ನೀಡುವ ಮೂಲಕ ಒಟ್ಟು 700 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್ ಎಂಬ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ: Team India: ಕೊನೆಯ 10 ಓವರ್ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
ಶೇನ್ ದಾಖಲೆ ಶೇಕಿಂಗ್:
ತಮ್ಮ ವೃತ್ತಿಜೀವನದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಜೇಮ್ಸ್ ಅ್ಯಂಡರ್ಸನ್ಗೆ ಲೆಜೆಂಡ್ ಶೇನ್ ವಾರ್ನ್ ಅವರ ವಿಶ್ವ ದಾಖಲೆ ಮುರಿಯಲು ಅವಕಾಶವಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಎರಡು ಇನಿಂಗ್ಸ್ಗಳಲ್ಲಿ ಒಟ್ಟು 9 ವಿಕೆಟ್ ಕಬಳಿಸಿದರೆ ವಾರ್ನ್ ಅವರನ್ನು ಹಿಂದಿಕ್ಕಬಹುದು.
- ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ಗಳ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅಗ್ರಸ್ಥಾನದಲ್ಲಿದ್ದಾರೆ. ಮುರಳೀಧರನ್ 133 ಟೆಸ್ಟ್ ಪಂದ್ಯಗಳಿಂದ ಒಟ್ಟು 800 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
- ಆಸ್ಟ್ರೇಲಿಯಾದ ಶೇನ್ ವಾರ್ನ್ 145 ಟೆಸ್ಟ್ ಪಂದ್ಯಗಳಿಂದ ಒಟ್ಟು 708 ವಿಕೆಟ್ ಉರುಳಿಸಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.
- ಇದೀಗ 700 ವಿಕೆಟ್ಗಳೊಂದಿಗೆ ಮೂರನೇ ಸ್ಥಾನದಲ್ಲಿರುವ ಜೇಮ್ಸ್ ಅ್ಯಂಡರ್ಸನ್ ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿದ್ದಾರೆ.
Published On - 3:32 pm, Wed, 10 July 24