ವಿಶ್ವ ಕ್ರಿಕೆಟ್ನ ಸರ್ವಶ್ರೇಷ್ಠ ವೇಗದ ಬೌಲರ್ ಜೇಮ್ಸ್ ಅ್ಯಂಡರ್ಸನ್ ವಿದಾಯಕ್ಕೆ ವೇದಿಕೆ ಸಿದ್ಧವಾಗಿದೆ. ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂಲಕ ಅ್ಯಂಡರ್ಸನ್ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಇಂಗ್ಲೆಂಡ್ ಪ್ಲೇಯಿಂಗ್ XI: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಶೋಯೆಬ್ ಬಶೀರ್, ಗಸ್ ಅಟ್ಕಿನ್ಸನ್, ಜೇಮ್ಸ್ ಅ್ಯಂಡರ್ಸನ್.
ವೆಸ್ಟ್ ಇಂಡೀಸ್ ಪ್ಲೇಯಿಂಗ್ XI: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಮೈಕೈಲ್ ಲೂಯಿಸ್, ಕಿರ್ಕ್ ಮೆಕೆಂಜಿ, ಅಲಿಕ್ ಅಥಾನಾಝ್, ಕವೆಮ್ ಹಾಡ್ಜ್, ಜೇಸನ್ ಹೋಲ್ಡರ್, ಜೋಶುವಾ ಡ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಶಮರ್ ಜೋಸೆಫ್, ಜೇಡನ್ ಸೀಲ್ಸ್.
For the final time, welcome to the arena Jimmy 🐐#ENGvWI pic.twitter.com/wzHnkGFx5e
— England’s Barmy Army 🏴🎺 (@TheBarmyArmy) July 10, 2024
ಇಂಗ್ಲೆಂಡ್ ಪರ 187 ಟೆಸ್ಟ್ ಪಂದ್ಯಗಳನ್ನಾಡಿರುವ 41ರ ಹರೆಯದ ಜೇಮ್ಸ್ ಅ್ಯಂಡರ್ಸನ್ ಈವರೆಗೆ ಒಟ್ಟು 39877 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18568 ರನ್ ನೀಡುವ ಮೂಲಕ ಒಟ್ಟು 700 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್ ಎಂಬ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ: Team India: ಕೊನೆಯ 10 ಓವರ್ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
ತಮ್ಮ ವೃತ್ತಿಜೀವನದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಜೇಮ್ಸ್ ಅ್ಯಂಡರ್ಸನ್ಗೆ ಲೆಜೆಂಡ್ ಶೇನ್ ವಾರ್ನ್ ಅವರ ವಿಶ್ವ ದಾಖಲೆ ಮುರಿಯಲು ಅವಕಾಶವಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಎರಡು ಇನಿಂಗ್ಸ್ಗಳಲ್ಲಿ ಒಟ್ಟು 9 ವಿಕೆಟ್ ಕಬಳಿಸಿದರೆ ವಾರ್ನ್ ಅವರನ್ನು ಹಿಂದಿಕ್ಕಬಹುದು.
Published On - 3:32 pm, Wed, 10 July 24