AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 584 ರನ್​ಗಳಿಸಿದ ಜಮ್ಮು-ಕಾಶ್ಮೀರ: ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ

Ranji Trophy Final 2026, Karnataka vs Jammu and Kashmir: ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಈವರೆಗೆ 8 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ 9ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಅತ್ತ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಫೈನಲ್ ಆಡುತ್ತಿರುವುದು ಇದೇ ಮೊದಲ ಬಾರಿ. ಈ ಮೂಲಕ ಚೊಚ್ಚಲ ಬಾರಿ ಚಾಂಪಿಯನ್ ಆಗುವ ವಿಶ್ವಾಸದಲ್ಲಿದೆ.

ಬರೋಬ್ಬರಿ 584 ರನ್​ಗಳಿಸಿದ ಜಮ್ಮು-ಕಾಶ್ಮೀರ: ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ
Kar Vs Jk
ಝಾಹಿರ್ ಯೂಸುಫ್
|

Updated on:Feb 26, 2026 | 12:08 PM

Share

ಹುಬ್ಬಳ್ಳಿಯ ಕೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಜಮ್ಮು-ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 584 ರನ್​ಗಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜಮ್ಮು-ಕಾಶ್ಮೀರ ಪರ ಆರಂಭಿಕನಾಗಿ ಕಣಕ್ಕಿಳಿದ ಯಾವರ್ ಹಸನ್ 88 ರನ್ ಬಾರಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭಂ ಪುಂಡಿರ್ 121 ರನ್​ ಗಳಿಸಿದ್ದರು.

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಪರಸ್ ಡೋಗ್ರಾ 70 ರನ್​ಗಳ ಇನಿಂಗ್ಸ್ ಆಡಿದರು. ಮತ್ತೊಂದೆಡೆ ಅಬ್ದುಲ್ ಸಮದ್ 61 ರನ್​ಗಳ ಕೊಡುಗೆ ನೀಡಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಕನ್ಹಯ್ಯಾ 70 ರನ್ ಬಾರಿಸಿದರೆ, ಸಾಹಿಲ್ ಲೋಟ್ರಾ 78 ರನ್​ಗಳ ಇನಿಂಗ್ಸ್ ಆಡಿದರು.

ಈ ಮೂಲಕ ಜಮ್ಮು-ಕಾಶ್ಮೀರ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 584 ರನ್​ಗಳಿಸಿ ಆಲೌಟ್ ಆಗಿದೆ. ಕರ್ನಾಟಕ ಪರ ಉತ್ತಮ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣ 34.1 ಓವರ್​ಗಳಲ್ಲಿ 98 ರನ್​ ನೀಡಿ 5 ವಿಕೆಟ್ ಕಬಳಿಸಿದ್ದಾರೆ.

ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ:

ಜಮ್ಮು-ಕಾಶ್ಮೀರದ ಇನಿಂಗ್ಸ್ ಮುಕ್ತಾಯದ ಬೆನ್ನಲ್ಲೇ ಕರ್ನಾಟಕ ತಂಡ ಮೊದಲ ಇನಿಂಗ್ಸ್ ಶುರು ಮಾಡಿದ್ದಾರೆ. ಇದೀಗ ಮೂರನೇ ದಿನದಾಟ ನಡೆಯುತ್ತಿರುವುದರಿಂದ ಪ್ರಥಮ ಇನಿಂಗ್ಸ್ ಕರ್ನಾಟಕ ತಂಡಕ್ಕೆ ನಿರ್ಣಾಯಕ. ಏಕೆಂದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದರೆ ಮಾತ್ರ ಈ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಗೆಲುವು ದಕ್ಕಬಹುದು.

ಅದಕ್ಕೂ ಮುನ್ನ ಕರ್ನಾಟಕ ತಂಡವು ಆಲೌಟ್ ಆದರೆ ಈ ಪಂದ್ಯವನ್ನು ಜಮ್ಮು-ಕಾಶ್ಮೀರ ಡ್ರಾನಲ್ಲಿ ಅಂತ್ಯಗೊಳಿಸಲಿದೆ. ಏಕೆಂದರೆ ರಣಜಿ ಟೂರ್ನಿಯ ಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯವಾದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.

ಹೀಗಾಗಿ ಕರ್ನಾಟಕ ತಂಡವು ಮೂರನೇ ಮತ್ತು ನಾಲ್ಕನೇ ದಿನದಾಟಗಳಲ್ಲಿ ಬ್ಯಾಟಿಂಗ್ ಕಾಯ್ದುಕೊಳ್ಳುವ ಮೂಲಕ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಲೇಬೇಕು. ಏಕೆಂದರೆ ಮೂರನೇ ದಿನದಾಟದಲ್ಲಿ ಮೊದಲ ಇನಿಂಗ್ಸ್ ಶುರುವಾಗಿರುವ ಕಾರಣ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚು.

ಹೀಗಾಗಿ ಕರ್ನಾಟಕ ತಂಡವು ಇನ್ನೆರಡು ದಿನದಾಟಗಳ ಕಾಲ ಬ್ಯಾಟಿಂಗ್ ಮುಂದುವರೆಸುವ ಮೂಲಕ 585 ರನ್​ಗಳಿಸುವುದು ಅನಿವಾರ್ಯ. ಈ ಮೂಲಕ ಪಂದ್ಯವನ್ನು ಡ್ರಾಗೊಳಿಸಿ ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಚಾಂಪಿಯನ್ ಪಟ್ಟಕ್ಕೇರಬಹುದು. ಇಲ್ಲದಿದ್ದರೆ ಜಮ್ಮು-ಕಾಶ್ಮೀರ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಶತಾಯಗತಾಯ ಈ ಮ್ಯಾಚ್​ ಅನ್ನು ಡ್ರಾನಲ್ಲಿ ಅಂತ್ಯಗೊಳಿಸಲು ಪ್ರಯತ್ನಿಸಲಿದೆ.

ಜಮ್ಮು ಮತ್ತು ಕಾಶ್ಮೀರ ಪ್ಲೇಯಿಂಗ್ XI: ಕಮ್ರಾನ್ ಇಕ್ಬಾಲ್, ಯಾವರ್ ಹಸನ್, ಶುಭಂ ಪುಂಡೀರ್, ಪರಸ್ ಡೋಗ್ರಾ (ನಾಯಕ), ಅಬ್ದುಲ್ ಸಮದ್, ಕನ್ಹಯ್ಯಾ ವಾಧವನ್ (ವಿಕೆಟ್ ಕೀಪರ್), ಅಬಿದ್ ಮುಷ್ತಾಕ್, ಆಖಿಬ್ ನಬಿ ದಾರ್, ಯುದ್ವೀರ್ ಸಿಂಗ್ ಚರಕ್, ಸಾಹಿಲ್ ಲೋತ್ರಾ, ಸುನೀಲ್ ಕುಮಾರ್.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

ಕರ್ನಾಟಕ ಪ್ಲೇಯಿಂಗ್ XI: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್ (ನಾಯಕ), ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ವಿದ್ಯಾಧರ್ ಪಾಟೀಲ್, ವಿಜಯ್ ಕುಮಾರ್ ವೈಶಾಕ್, ಶಿಖರ್ ಶೆಟ್ಟಿ, ಪ್ರಸಿದ್ಧ್ ಕೃಷ್ಣ.

Published On - 11:46 am, Thu, 26 February 26

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ