AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವೆಸ್ಟ್​ ಇಂಡೀಸ್ ಸ್ಟಾರ್ ಆಲ್‌ರೌಂಡರ್

Jason Holder Retires from ODIs: ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಜೇಸನ್ ಹೋಲ್ಡರ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ವೆಸ್ಟ್ ಇಂಡೀಸ್ ಮುಖ್ಯ ಕೋಚ್ ಡ್ಯಾರೆನ್ ಸ್ಯಾಮಿ ದೃಢಪಡಿಸಿದ್ದಾರೆ. 138 ODI ಪಂದ್ಯಗಳನ್ನಾಡಿರುವ ಹೋಲ್ಡರ್, 2237 ರನ್ ಗಳಿಸಿ 159 ವಿಕೆಟ್ ಕಬಳಿಸಿದ್ದಾರೆ. ಅವರು ಇನ್ನು ಮುಂದೆ ಟೆಸ್ಟ್ ಮತ್ತು ಫ್ರಾಂಚೈಸ್ ಕ್ರಿಕೆಟ್ ಆಡುವುದನ್ನು ಮುಂದುವರಿಸಲಿದ್ದಾರೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯಿಂದ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವೆಸ್ಟ್​ ಇಂಡೀಸ್ ಸ್ಟಾರ್ ಆಲ್‌ರೌಂಡರ್
Jason Holder
ಪೃಥ್ವಿಶಂಕರ
|

Updated on:Jul 11, 2026 | 4:37 PM

Share

2026 ರ ಐಪಿಎಲ್‌ನಲ್ಲಿ (IPL 2026) ಗುಜರಾತ್ ಟೈಟಾನ್ಸ್ ಪರ ಅದ್ಭುತ ಪ್ರದರ್ಶನ ನೀಡಿದ್ದ ವೆಸ್ಟ್ ಇಂಡೀಸ್​ನ ಸ್ಟಾರ್ ಆಲ್‌ರೌಂಡರ್ ಜೇಸನ್ ಹೋಲ್ಡರ್ (Jason Holder) ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೋಲ್ಡರ್ ಅವರ ಈ ನಿರ್ಧಾರವನ್ನು ವೆಸ್ಟ್ ಇಂಡೀಸ್ ತಂಡದ ಮುಖ್ಯ ಕೋಚ್ ಡ್ಯಾರೆನ್ ಸ್ಯಾಮಿ ದೃಢಪಡಿಸಿದ್ದಾರೆ. ಹೋಲ್ಡರ್ ಏಕದಿನ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ, ಆದರೆ ಟೆಸ್ಟ್ ಕ್ರಿಕೆಟ್‌ ಆಡುವುದನ್ನು ಮುಂದುವರೆಸುತ್ತಾರೆ ಎಂದು ಸ್ಯಾಮಿ ವಿಸ್ಡನ್ ಕ್ರಿಕೆಟ್ ಪಾಡ್‌ಕ್ಯಾಸ್ಟ್‌ನಲ್ಲಿ ಹೇಳಿದ್ದಾರೆ. ಆದಾಗ್ಯೂ ಜೇಸನ್ ಹೋಲ್ಡರ್ ಅವರ ಈ ನಿವೃತ್ತಿ ವಿಚಾರವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯಾಗಲಿ ಅಥವಾ ಹೋಲ್ಡರ್ ಆಗಲಿ ಇದುವರೆಗೂ ಖಚಿತಪಡಿಸಿಲ್ಲ.

ಏಕದಿನಕ್ಕೆ ಹೋಲ್ಡರ್ ನಿವೃತ್ತಿ

2027 ರ ಏಕದಿನ ವಿಶ್ವಕಪ್​ಗೆ ವೆಸ್ಟ್ ಇಂಡೀಸ್‌ ತಂಡದ ಯೋಜನೆಗಳಲ್ಲಿ ಹೋಲ್ಡರ್ ಅವರ ಪಾತ್ರ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಡ್ಯಾರೆನ್ ಸ್ಯಾಮಿ, ‘ಜೇಸನ್ ಹೋಲ್ಡರ್ ಏಕದಿನ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಆದರೆ ಅವರು ಟೆಸ್ಟ್ ತಂಡದ ಭಾಗವಾಗಿರಲಿದ್ದಾರೆ. ಅವರಿಗೆ ಟೆಸ್ಟ್ ಆಡಲು ಆಸಕ್ತಿಯೂ ಇದೆ. ಇದರ ಜೊತೆಗೆ ಹೋಲ್ಡರ್ ಫ್ರಾಂಚೈಸ್ ಕ್ರಿಕೆಟ್ ಆಡುವುದನ್ನು ಮುಂದುವರೆಸಲಿದ್ದಾರೆ. ಆದ್ದರಿಂದ ಏಕದಿನ ತಂಡಕ್ಕೆ ಅವರ ಲಭ್ಯತೆ ದೊಡ್ಡ ಪ್ರಶ್ನೆಯಾಗಿದೆ’ ಎಂದು ಸ್ಯಾಮಿ ಹೇಳಿದ್ದಾರೆ.

ಜೇಸನ್ ಹೋಲ್ಡರ್ ಏಕದಿನ ವೃತ್ತಿಜೀವನ

ಜೇಸನ್ ಹೋಲ್ಡರ್ 2013 ರಿಂದ 2023 ರವರೆಗಿನ ತಮ್ಮ 10 ವರ್ಷಗಳ ವೃತ್ತಿಜೀವನದಲ್ಲಿ ಒಟ್ಟು 138 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ, ಅವರು 24.85 ರ ಸರಾಸರಿಯಲ್ಲಿ 2237 ರನ್ ಗಳಿಸಿದ್ದಾರೆ. ಇದರಲ್ಲಿ ಅವರ ಅತ್ಯಧಿಕ ಸ್ಕೋರ್ 99 ಆಗಿದೆ. ಕೆಳ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿರುವ ಹೋಲ್ಡರ್, ತಮ್ಮ ಏಕದಿನ ವೃತ್ತಿಜೀವನದಲ್ಲಿ ಒಮ್ಮೆಯೂ ಶತಕದ ಗಡಿ ದಾಟಲು ಸಾಧ್ಯವಾಗಿಲ್ಲ. ಆದರೆ ಅವರು 11 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಜೇಸನ್ ಹೋಲ್ಡರ್​ಗೆ ಸತತ ಎರಡನೇ ಪಂದ್ಯದಲ್ಲೂ ಕೈಕೊಟ್ಟ ಅದೃಷ್ಟ; ತಂಡಕ್ಕೆ ಹ್ಯಾಟ್ರಿಕ್ ಸೋಲು

86 ಪಂದ್ಯಗಳಲ್ಲಿ ನಾಯಕ

ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಹೋಲ್ಡರ್ ತಮ್ಮ ಏಕದಿನ ವೃತ್ತಿಜೀವನದಲ್ಲಿ 36.96 ಸರಾಸರಿಯಲ್ಲಿ 159 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಅವಧಿಯಲ್ಲಿ ಅವರು ಎರಡು ಬಾರಿ ಐದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆಲ್‌ರೌಂಡರ್ ಆಗಿರುವುದರ ಜೊತೆಗೆ, ಹೋಲ್ಡರ್ ಒಬ್ಬ ಅತ್ಯುತ್ತಮ ಫೀಲ್ಡರ್ ಕೂಡ ಆಗಿದ್ದರು, ತಮ್ಮ ಏಕದಿನ ವೃತ್ತಿಜೀವನದಲ್ಲಿ 65 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಜೇಸನ್ ಹೋಲ್ಡರ್ ತಮ್ಮ ಏಕದಿನ ವೃತ್ತಿಜೀವನದಲ್ಲಿ 86 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Sat, 11 July 26

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ