IND vs ENG: 6 ಎಸೆತಗಳಲ್ಲಿ ವಿಶ್ವದಾಖಲೆ ಬರೆದ ಬಮ್ರಾ; ಕೊಹ್ಲಿ- ದ್ರಾವಿಡ್ ಸೆಲೆಬ್ರೇಷನ್ ಹೇಗಿತ್ತು ಗೊತ್ತಾ?

IND vs ENG: ಇಂದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ, ಒಂದು ಓವರ್‌ನಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಲಾಯಿತು.

IND vs ENG: 6 ಎಸೆತಗಳಲ್ಲಿ ವಿಶ್ವದಾಖಲೆ ಬರೆದ ಬಮ್ರಾ; ಕೊಹ್ಲಿ- ದ್ರಾವಿಡ್ ಸೆಲೆಬ್ರೇಷನ್ ಹೇಗಿತ್ತು ಗೊತ್ತಾ?
ಕೊಹ್ಲಿ ಸಂಭ್ರಮಾಚರಣೆ
Follow us
| Updated By: ಪೃಥ್ವಿಶಂಕರ

Updated on: Jul 02, 2022 | 9:52 PM

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇದಕ್ಕೂ ಮುನ್ನ ಪಂತ್ ಮತ್ತು ಜಡೇಜಾ (Ravindra Jadeja) ಶತಕ ಬಾರಿಸಿದ್ದರು. ಆ ನಂತರ ಜಸ್ಪ್ರೀತ್ ಬುಮ್ರಾ (Jasprit Bumrah) ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾವನ್ನು ಟೆಸ್ಟ್‌ನಲ್ಲಿ ಬಲಿಷ್ಠ ಸ್ಥಾನದಲ್ಲಿ ನಿಲ್ಲಿಸಿದರು. ಇಂಗ್ಲೆಂಡ್ ವಿರುದ್ಧದ ಎರಡನೇ ದಿನ (IND vs ENG) ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 416 ರನ್‌ಗಳಿಗೆ ಆಲೌಟ್ ಆಗಿತ್ತು. ಬುಮ್ರಾ 16 ಎಸೆತಗಳಲ್ಲಿ 31 ರನ್ ಗಳಿಸಿದರು. 4 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸಿದರು. ಈ ಮಧ್ಯೆ, ಅವರು ಸ್ಟುವರ್ಟ್ ಬ್ರಾಡ್ ಅವರ ಒಂದು ಓವರ್‌ನಲ್ಲಿ 35 ರನ್ ಗಳಿಸಿದರು. ಇದು ವಿಶ್ವ ದಾಖಲೆಯಾಯಿತು.

ಟೆಸ್ಟ್ ಕ್ರಿಕೆಟ್‌ನ 145 ವರ್ಷಗಳ ಇತಿಹಾಸದಲ್ಲಿ ಇದು ಅತ್ಯಂತ ದುಬಾರಿ ಓವರ್ ಎಂದು ಹೇಳಲಾಗುತ್ತದೆ. ಬುಮ್ರಾ 4 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸಿದರು. ಇದಾದ ಬಳಿಕ ಬೌಲಿಂಗ್ ಮಾಡುವಾಗ ನಾಯಕ ಬುಮ್ರಾ ಲೀಸ್ ಮತ್ತು ಜಾಕ್ ಕ್ರೌಲಿ ಹಾಗೂ ಪೋಪ್ ಅವರ ವಿಕೆಟ್ ಕಬಳಿಸಿ ತಂಡಕ್ಕೆ ಅಮೋಘ ಯಶಸ್ಸು ತಂದುಕೊಟ್ಟರು. ಮಳೆ ನಿಲ್ಲುವವರೆಗೂ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 60 ರನ್ ಗಳಿಸಿದೆ. ಏತನ್ಮಧ್ಯೆ, ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ ಬುಮ್ರಾ ಅವರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. ಜೊತೆಗೆ ಬುಮ್ರಾ ಆಟ ನೋಡುತ್ತಿದ್ದ ಮಾಜಿ ನಾಯಕ ಕೊಹ್ಲಿ ಹಾಗೂ ದ್ರಾವಿಡ್, ಬುಮ್ರಾ ಅಬ್ಬರಕ್ಕೆ ಡಗ್​ಔಟ್​ನಲ್ಲಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ಇದನ್ನೂ ಓದಿ
Image
Virat Kohli: ಶತಕವಿಲ್ಲ, ಇತ್ತ ರನ್​ಗಳು ಬರುತಿಲ್ಲ; ಮುಗಿಯಿತಾ ಕೊಹ್ಲಿ ಕೆರಿಯರ್? 3 ವರ್ಷದ ಲೆಕ್ಕಾಚಾರ ಹೀಗಿದೆ
Image
IND vs ENG: ಆಂಗ್ಲರ ವಿರುದ್ಧ ಅಬ್ಬರದ ಶತಕ ಸಿಡಿಸಿದ ಪಂತ್​ಗೆ ಕ್ರಿಕೆಟ್​ ದಂತೆಕಥೆಗಳ ಶಹಬ್ಬಾಸ್​ಗಿರಿ..!

ಸ್ಟುವರ್ಟ್ ಬ್ರಾಡ್ ಅವರ ಓವರ್‌ನ 5 ನೇ ಎಸೆತದಲ್ಲಿ ಜಸ್ಪ್ರೀತ್ ಬುಮ್ರಾ ಸಿಕ್ಸರ್ ಬಾರಿಸಿದರು. ಈ ಮೂಲಕ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ನಿರ್ಮಿಸಿದರು. ಡ್ರೆಸ್ಸಿಂಗ್ ರೂಂನಲ್ಲಿ ಕುಳಿತು ಕೋಚ್ ರಾಹುಲ್ ದ್ರಾವಿಡ್ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಅದೇ ಸಮಯದಲ್ಲಿ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಒಳಗೆ ಓಡಿ ನಗುತ್ತಾ ಚಪ್ಪಾಳೆ ತಟ್ಟಿದರು. ಇದೇ ವೇಳೆ ಬುಮ್ರಾ ಜತೆ ಬ್ಯಾಟಿಂಗ್ ಮಾಡುತ್ತಿದ್ದ ಸಿರಾಜ್ ಅವರನ್ನು ಅಪ್ಪಿಕೊಂಡರು. ಟೆಸ್ಟ್ ಇತಿಹಾಸದಲ್ಲಿ ಹಿಂದೆಂದೂ ಒಂದು ಓವರ್‌ನಲ್ಲಿ 30 ರನ್ ಗಳಿಸಿಲ್ಲ.

ಇತಿಹಾಸದಲ್ಲಿ ಮೊದಲ ಬಾರಿಗೆ

ಇಂದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ, ಒಂದು ಓವರ್‌ನಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಲಾಯಿತು. 84ನೇ ಓವರ್‌ನ ಮೊದಲ ಎಸೆತದಲ್ಲಿ ಜಸ್ಪ್ರೀತ್ ಬುಮ್ರಾ 4 ರನ್ ಗಳಿಸಿದರು. ಎರಡನೇ ಬಾಲ್ ವೈಡ್ ಆಗಿದ್ದು ಅದರಲ್ಲಿ 4 ರನ್ ಬಂತು. ಎರಡನೇ ಎಸೆತದಲ್ಲಿ ಬುಮ್ರಾ ಮತ್ತೊಮ್ಮೆ ಸಿಕ್ಸರ್ ಬಾರಿಸಲು ಯತ್ನಿಸಿದರಾದರೂ ಬಾಲ್ ನೋಬಾಲ್ ಆಗಿತ್ತು. ಮುಂದಿನ 3 ಎಸೆತಗಳಲ್ಲಿ ಬುಮ್ರಾ ಬ್ರಾಡ್ ಮೇಲೆ ಸತತ 3 ಬೌಂಡರಿ ಬಾರಿಸಿದರು. ಅವರು ಐದನೇ ಎಸೆತದಲ್ಲಿ ಬ್ಯಾಕ್‌ವರ್ಡ್ ಸ್ಕ್ವೇರ್ ಲೆಗ್‌ನಲ್ಲಿ ಸಿಕ್ಸರ್ ಬಾರಿಸಿದರು. ಕೊನೆಯ ಎಸೆತದಲ್ಲಿ 1 ರನ್ ಬಂತು. ಹೀಗಾಗಿ ಆ ಓವರ್‌ನಲ್ಲಿ ಒಟ್ಟು 35 ರನ್‌ಗಳು ಬಂದವು. ಬ್ರಾಡ್ ಈ ಓವರ್‌ನಲ್ಲಿ ಒಟ್ಟು 8 ಎಸೆತಗಳನ್ನು ಎಸೆದರು.

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ