AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಒಂದೇ ಓವರ್‌ನಲ್ಲಿ 3 ವಿಕೆಟ್‌; ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

IPL 2025: ಒಂದೇ ಓವರ್‌ನಲ್ಲಿ 3 ವಿಕೆಟ್‌; ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

ಪೃಥ್ವಿಶಂಕರ
|

Updated on: Apr 27, 2025 | 8:53 PM

Jasprit Bumrah's 4-Wicket Haul: ಐಪಿಎಲ್ 2025ರ 45ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅದ್ಭುತ ಜಯ ಸಾಧಿಸಿತು. ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ 4 ವಿಕೆಟ್‌ಗಳನ್ನು ಪಡೆದು ಲಕ್ನೋವನ್ನು 161 ರನ್‌ಗಳಿಗೆ ಸೀಮಿತಗೊಳಿಸಿದರು. ಬುಮ್ರಾ ಒಂದೇ ಓವರ್‌ನಲ್ಲಿ 3 ವಿಕೆಟ್‌ಗಳನ್ನು ಪಡೆಯುವ ಮೂಲಕ ಐಪಿಎಲ್‌ನಲ್ಲಿ ಅತ್ಯಧಿಕ ಬೌಲ್ಡ್ ಔಟ್‌ಗಳನ್ನು ಪಡೆದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದರು. ಅಲ್ಲದೆ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 24ನೇ ಬಾರಿ ಒಂದೇ ಪಂದ್ಯದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಮಾಡಿದರು.

ಐಪಿಎಲ್ 2025 ರ 45 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಬೃಹತ್ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮುಂಬೈ ಮೊದಲು ಬ್ಯಾಟಿಂಗ್ ಮಾಡಿ 200 ಕ್ಕೂ ಹೆಚ್ಚು ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಲಕ್ನೋ ಬುಮ್ರಾ ದಾಳಿಗೆ ತತ್ತರಿಸಿ 161 ರನ್​ಗಳಿಗೆ ಆಲೌಟ್ ಆಯಿತು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ತಮ್ಮ 4 ಓವರ್‌ಗಳಲ್ಲಿ 5.50 ಎಕಾನಮಿಯಲ್ಲಿ 22 ರನ್‌ಗಳನ್ನು ನೀಡಿ 4 ವಿಕೆಟ್‌ಗಳನ್ನು ಪಡೆದರು.

ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಇನ್ನಿಂಗ್ಸ್‌ನ 16 ನೇ ಓವರ್‌ನಲ್ಲಿ ಜಸ್ಪ್ರೀತ್ ಬುಮ್ರಾ ಒಟ್ಟು 3 ವಿಕೆಟ್‌ಗಳನ್ನು ಪಡೆದರು. ಆ ಓವರ್‌ನ ಎರಡನೇ ಎಸೆತದಲ್ಲಿ ಅವರು ಡೇವಿಡ್ ಮಿಲ್ಲರ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಇದಾದ ನಂತರ, ಅವರು 5 ನೇ ಎಸೆತದಲ್ಲಿ ಅಬ್ದುಲ್ ಸಮದ್ ಅವರ ವಿಕೆಟ್ ಹಾಗೂ ಓವರ್‌ನ ಕೊನೆಯ ಎಸೆತದಲ್ಲಿ ಆವೇಶ್ ಖಾನ್​ರನ್ನು ಬಲಿ ಪಡೆದರು. ಅಬ್ದುಲ್ ಸಮದ್ ಮತ್ತು ಆವೇಶ್ ಖಾನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಲು ಮೂಲಕ ಬುಮ್ರಾ ಐಪಿಎಲ್‌ನಲ್ಲಿ ಇದುವರೆಗೆ 41 ಬೌಲ್ಡ್ ಮಾಡಿದ್ದು, ಅತ್ಯಧಿಕ ಬೌಲ್ಡ್ ಔಟ್ ಮಾಡಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 63 ಬೌಲ್ಡ್ ಔಟ್‌ಗಳೊಂದಿಗೆ ಲಸಿತ್ ಮಾಲಿಂಗ ಮೊದಲ ಸ್ಥಾನದಲ್ಲಿದ್ದಾರೆ.

ಈ ಪಟ್ಟಿಯಲ್ಲಿ ಬುಮ್ರಾಗೆ ಅಗ್ರಸ್ಥಾನ

ಜಸ್ಪ್ರೀತ್ ಬುಮ್ರಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 24 ನೇ ಬಾರಿಗೆ ಒಂದೇ ಪಂದ್ಯದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆಯುವ ಮೂಲಕ ಈ ವಿಚಾರದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಪ್ರಸ್ತುತ ಸೀಸನ್​ನಲ್ಲಿ ಬುಮ್ರಾ ಆಡಿರುವ 6 ಪಂದ್ಯಗಳಲ್ಲಿ 9 ವಿಕೆಟ್‌ಗಳನ್ನು ಪಡೆದಿದ್ದಾರೆ.