Jasprit Bumrah: ಇಡೀ ಪಂದ್ಯದ ಚಿತ್ರಣ ಬದಲಿಸಿದ ಜಸ್​ಪ್ರೀತ್ ಬುಮ್ರಾ

T20 World Cup 2024 Final: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್​ಗಳಿಸಿ 7 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ.

Jasprit Bumrah: ಇಡೀ ಪಂದ್ಯದ ಚಿತ್ರಣ ಬದಲಿಸಿದ ಜಸ್​ಪ್ರೀತ್ ಬುಮ್ರಾ
Jasprit Bumrah
Follow us
ಝಾಹಿರ್ ಯೂಸುಫ್
|

Updated on: Jun 30, 2024 | 9:09 AM

T20 World Cup 2024: ಟಿ20 ವಿಶ್ವಕಪ್​ನ 9ನೇ ಆವೃತ್ತಿಯಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿದಿದೆ. ಈ ಪಂದ್ಯದ ಗೆಲುವಿನ ರೂವಾರಿಗಳೆಂದರೆ ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ. 76 ರನ್​ಗಳ ಕೊಡುಗೆಯೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾ 176 ರನ್​ ಪೇರಿಸಲು ನೆರವಾದರೆ, ಈ ಗುರಿಯನ್ನು ಬೆನ್ನತ್ತದಂತೆ ತಡೆಯುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾದರು. ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ಬುಮ್ರಾ ಎಸೆದ 2 ಓವರ್​ಗಳು ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತು.

ಏಕೆಂದರೆ 15 ಓವರ್​ಗಳಲ್ಲಿ ಸೌತ್ ಆಫ್ರಿಕಾ ತಂಡವು 147 ರನ್​ ಬಾರಿಸಿ ಗೆಲುವಿನತ್ತ ಮುಖ ಮಾಡಿತ್ತು. ಅಲ್ಲದೆ ಕೊನೆಯ 30 ಎಸೆತಗಳಲ್ಲಿ ಬೇಕಿದದ್ದು ಕೇವಲ 30 ರನ್​ಗಳು ಮಾತ್ರ. ಈ ಹಂತದಲ್ಲಿ ದಾಳಿಗಿಳಿದ ಬುಮ್ರಾ ಸೌತ್ ಆಫ್ರಿಕಾ ಬ್ಯಾಟರ್​ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

16ನೇ ಓವರ್​ನಲ್ಲಿ ಜಸ್​ಪ್ರೀತ್ ಬುಮ್ರಾ ನೀಡಿದ್ದು ಕೇವಲ 4 ರನ್​ಗಳು ಮಾತ್ರ. ಇದರಿಂದ ಒತ್ತಡಕ್ಕೆ ಸಿಲುಕಿದ ಹೆನ್ರಿಕ್ ಕ್ಲಾಸೆನ್ 17ನೇ ಓವರ್​ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಅಲ್ಲದೆ ಈ ಓವರ್​ನಲ್ಲಿ ಪಾಂಡ್ಯ ನೀಡಿದ್ದು ಕೇವಲ 4 ರನ್​ಗಳು ಮಾತ್ರ.

ಇದಾದ ಬಳಿಕ 18ನೇ ಓವರ್​ನಲ್ಲಿ ಬಿಗಿ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ ಮಾರ್ಕೊ ಯಾನ್ಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಈ ಓವರ್​ನಲ್ಲಿ ಬುಮ್ರಾ ನೀಡಿದ್ದು ಕೇವಲ 2 ರನ್​ಗಳು ಮಾತ್ರ.

ಅಂದರೆ ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದ ಕೊನೆಯ ಎರಡು ಓವರ್​ಗಳಲ್ಲಿ ಜಸ್​ಪ್ರೀತ್ ಬುಮ್ರಾ ಕೇವಲ 6 ರನ್​ಗಳನ್ನು ಮಾತ್ರ ನೀಡಿದ್ದರು. ಪರಿಣಾಮ ಸೌತ್ ಆಫ್ರಿಕಾ ತಂಡದ ಗುರಿ ಅಂತಿಮ 2 ಓವರ್​ಗಳಲ್ಲಿ 20 ರನ್​ಗಳಿಗೆ ಬಂದು ನಿಂತಿತು.

ಈ ಹಂತದಲ್ಲಿ 19ನೇ ಓವರ್​ ಎಸೆದ ಅರ್ಷದೀಪ್ ಸಿಂಗ್ 4 ರನ್ ಮಾತ್ರ ನೀಡಿದರು. ಅದರಂತೆ ಕೊನೆಯ ಓವರ್​ನಲ್ಲಿ 16 ರನ್ ಗುರಿ ಪಡೆದ ಸೌತ್ ಆಫ್ರಿಕಾ ತಂಡಕ್ಕೆ ಡೇವಿಡ್ ಮಿಲ್ಲರ್ ಗೆಲುವಿನ ಭರವಸೆ ಮೂಡಿಸಿದ್ದರು.

ಆದರೆ ಹಾರ್ದಿಕ್ ಪಾಂಡ್ಯ ಎಸೆದ 20ನೇ ಓವರ್​ನ ಮೊದಲ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಡೇವಿಡ್ ಮಿಲ್ಲರ್ ಇನಿಂಗ್ಸ್ ಅಂತ್ಯಗೊಂಡಿತು. ಅಲ್ಲದೆ ಕೊನೆಯ ಓವರ್​ನಲ್ಲಿ ಕೇವಲ 8 ರನ್ ನೀಡಿ ಪಾಂಡ್ಯ ಭಾರತ ತಂಡಕ್ಕೆ 7 ರನ್​ಗಳ ರೋಚಕ ಜಯ ತಂದು ಕೊಟ್ಟರು.

ಇದನ್ನೂ ಓದಿ: Virat Kohli – Rohit Sharma: T20I ಕ್ರಿಕೆಟ್​ಗೆ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ

ಇಲ್ಲಿ ಅಂತಿಮ ಓವರ್​ಗಳಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಸಾಂಘಿಕ ಪ್ರದರ್ಶನ ನೀಡಿದ್ದು ಗೆಲುವಿಗೆ ಪ್ರಮುಖ ಕಾರಣವಾಯಿತು. ಅದರಲ್ಲೂ 4 ಓವರ್​ಗಳಲ್ಲಿ ಕೇವಲ 18 ರನ್ ನೀಡಿ 2 ವಿಕೆಟ್ ಕಬಳಿಸಿದ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ