AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರ ಕಂಬ್ಯಾಕ್

Team India: ಟೀಮ್ ಇಂಡಿಯಾ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್

Team India: ಟೀಮ್ ಇಂಡಿಯಾಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರ ಕಂಬ್ಯಾಕ್
Team India
TV9 Web
| Updated By: ಝಾಹಿರ್ ಯೂಸುಫ್|

Updated on: Jan 03, 2023 | 5:42 PM

Share

India vs Sri Lanka: ಶ್ರೀಲಂಕಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ (Team India) ಶುಭ ಸುದ್ದಿ ಸಿಕ್ಕಿದೆ. ಕಳೆದ ಕೆಲ ತಿಂಗಳುಗಳಿಂದ ತಂಡದಿಂದ ಹೊರಗುಳಿದಿದ್ದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಏಕದಿನ ತಂಡಕ್ಕೆ ಮರಳಿದ್ದಾರೆ. ಭಾರತ-ಶ್ರೀಲಂಕಾ ನಡುವಣ ಟಿ20 ಸರಣಿ ಜನವರಿ 3 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಬುಮ್ರಾ ಕಣಕ್ಕಿಳಿಯುತ್ತಿಲ್ಲ. ಬದಲಾಗಿ ಜನವರಿ 10 ರಿಂದ ಆರಂಭವಾಗಲಿರುವ ಏಕದಿನ ಸರಣಿಯ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಜಸ್​ಪ್ರೀತ್ ಬುಮ್ರಾ ಸೆಪ್ಟೆಂಬರ್‌ನಲ್ಲಿ ಕೊನೆಯ ಪಂದ್ಯವನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಆ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ ಬುಮ್ರಾ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದರು. ಇದಾದ ಬಳಿಕ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಚಿಕಿತ್ಸೆಗೆ ಒಳಗಾಗಿದ್ದರು.

ಇದೀಗ ಸಂಪೂರ್ಣ ಫಿಟ್ ಆಗಿರುವ ಕಾರಣ ಅವರನ್ನು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದೆ. ಅದರಂತೆ ಜನವರಿ 10 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಬುಮ್ರಾ ಕಣಕ್ಕಿಳಿಯಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇದನ್ನೂ ಓದಿ
Image
IPL 2023: 2 ದೇಶಗಳಿಂದ ಐಪಿಎಲ್​ಗೆ ಆಯ್ಕೆಯಾದ ಏಕೈಕ ಕ್ರಿಕೆಟಿಗ
Image
IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…
Image
IPL 2023: ಐಪಿಎಲ್​ಗೆ ನಮೀಬಿಯಾ, ಐರ್ಲೆಂಡ್, ಜಿಂಬಾಬ್ವೆ ಆಟಗಾರರು ಎಂಟ್ರಿ
Image
IPL 2023 RCB Team: RCB ಹೊಸ ತಂಡ ಹೀಗಿದೆ

ಇದನ್ನೂ ಓದಿ: Yusuf Pathan: ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಹೊಸ ತಂಡಕ್ಕೆ ಯೂಸುಫ್ ಪಠಾಣ್ ಆಯ್ಕೆ..!

ಟೀಮ್ ಇಂಡಿಯಾ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಏಕದಿನ ಸರಣಿ ವೇಳಾಪಟ್ಟಿ:-

  • ಜನವರಿ 10: ಮೊದಲ ಏಕದಿನ ಪಂದ್ಯ (ಸ್ಥಳ- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗೌಹಾಟಿ)
  • ಜನವರಿ 12: ಎರಡನೇ ಏಕದಿನ ಪಂದ್ಯ (ಸ್ಥಳ- ಈಡನ್ ಗಾರ್ಡನ್ಸ್, ಕೋಲ್ಕತ್ತಾ)
  • ಜನವರಿ 15: ಮೂರನೇ ಏಕದಿನ ಪಂದ್ಯ (ಗ್ರೀನ್‌ಫೀಲ್ಡ್ ಸ್ಟೇಡಿಯಂ, ತಿರುವನಂತಪುರಂ)