AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಕಮಿಂಗ್ ಹೋಮ್…ಕಂಬ್ಯಾಕ್ ಘೋಷಿಸಿದ ಜಸ್​ಪ್ರೀತ್​ ಬುಮ್ರಾ

Team India: ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಜಸ್​ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಗಳಿವೆ.

Jasprit Bumrah: ಕಮಿಂಗ್ ಹೋಮ್...ಕಂಬ್ಯಾಕ್ ಘೋಷಿಸಿದ ಜಸ್​ಪ್ರೀತ್​ ಬುಮ್ರಾ
Jasprit Bumrah
TV9 Web
| Edited By: |

Updated on: Jul 18, 2023 | 4:09 PM

Share

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಭಾರತ ತಂಡಕ್ಕೆ ಶೀಘ್ರದಲ್ಲೇ ಕಂಬ್ಯಾಕ್ ಮಾಡುವುದನ್ನು ಘೋಷಿಸಿದ್ದಾರೆ. ಅದು ಕೂಡ ಖ್ಯಾತ ಗಾಯಕಿ ಸ್ಕೈಲರ್ ಗ್ರೇ ಅವರ ಕಮಿಂಗ್ ಹೋಮ್…ಗೀತೆಯ ಮೂಲಕ ಎಂಬುದು ವಿಶೇಷ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಬುಮ್ರಾ ಹಂಚಿಕೊಂಡಿದ್ದು, ಈ ಮೂಲಕ ಶೀಘ್ರದಲ್ಲೇ ತಂಡಕ್ಕೆ ಪುನರಾಗಮನ ಮಾಡುವುದಾಗಿ ತಿಳಿಸಿದ್ದಾರೆ.

ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಕೊನೆಯ ಬಾರಿ ಕಣಕ್ಕಿಳಿದಿದ್ದು ಸೆಪ್ಟೆಂಬರ್ 19, 2022. ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅವರು ಬೆನ್ನು ನೋವಿಗೆ ತುತ್ತಾಗಿದ್ದರು. ಇದಾದ ಬಳಿಕ ಬುಮ್ರಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇದರಿಂದಾಗಿ  ಪ್ರಮುಖ ಟೂರ್ನಿಗಳಾದ ಏಷ್ಯಾಕಪ್, ಟಿ20 ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಗಳನ್ನು ಜಸ್​ಪ್ರೀತ್ ಬುಮ್ರಾ ತಪ್ಪಿಸಿಕೊಂಡಿದ್ದರು. ಇದೀಗ ಟೀಮ್ ಇಂಡಿಯಾ ಮತ್ತೊಂದು ಏಷ್ಯಾಕಪ್​ ಹೊಸ್ತಿಲಲ್ಲಿದೆ.

ಆಗಸ್ಟ್ 31 ರಿಂದ ಏಷ್ಯಾಕಪ್ 2023 ಶುರುವಾಗಲಿದ್ದು, ಅದಕ್ಕೂ ಮುನ್ನ ಜಸ್​ಪ್ರೀತ್ ಬುಮ್ರಾ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವುದು ಶುಭ ಸುದ್ದಿ ಎನ್ನಬಹುದು. ಏಕೆಂದರೆ ಏಷ್ಯಾಕಪ್​ ಬೆನ್ನಲ್ಲೇ ಏಕದಿನ ವಿಶ್ವಕಪ್ ಕೂಡ ಶುರುವಾಗಲಿದೆ.

ಅದಕ್ಕೂ ಮುನ್ನ ಜಸ್​ಪ್ರೀತ್ ಬುಮ್ರಾ ಭಾರತ ತಂಡವನ್ನು ಕೂಡಿಕೊಳ್ಳುವ ನಿರೀಕ್ಷೆಯಿದೆ. ಇತ್ತ ಯಾರ್ಕರ್ ಸ್ಪೆಷಲಿಸ್ಟ್ ಆಗಮನದೊಂದಿಗೆ ಟೀಮ್ ಇಂಡಿಯಾದ ಬೌಲಿಂಗ್ ಲೈನಪ್ ಕೂಡ ಮತ್ತಷ್ಟು ಬಲಿಷ್ಠಗೊಳ್ಳಲಿದೆ. ಹೀಗಾಗಿಯೇ ಜಸ್​ಪ್ರೀತ್ ಬುಮ್ರಾ ಕಂಬ್ಯಾಕ್ ಅನ್ನು ಅಭಿಮಾನಿಗಳು ಕೂಡ ಎದುರು ನೋಡುತ್ತಿದ್ದಾರೆ.

View this post on Instagram

A post shared by jasprit bumrah (@jaspritb1)

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ​ 10 ತಂಡಗಳು ಫೈನಲ್

ಐರ್ಲೆಂಡ್ ಸರಣಿಯಲ್ಲಿ ಕಂಬ್ಯಾಕ್?

ಸದ್ಯ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಜಸ್​ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಗಳಿವೆ. ಆಗಸ್ಟ್ 18 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೂರು ಟಿ20 ಪಂದ್ಯಗಳನ್ನಾಡಲಿದೆ. ಹೀಗಾಗಿ ಏಷ್ಯಾಕಪ್​ಗೂ ಮುನ್ನ ಬುಮ್ರಾ ಐರ್ಲೆಂಡ್​ ಸರಣಿಯಲ್ಲಿ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ