South Africa vs India: ಏಕದಿನ ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಗುಡ್ ನ್ಯೂಸ್: ಸ್ಟಾರ್ ಆಟಗಾರ ಕಮ್​ಬ್ಯಾಕ್

Mohammed Siraj: ಭಾರತಕ್ಕೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಟೆಸ್ಟ್ ಸರಣಿ ವೇಳೆ ಇಂಜುರಿಗೆ ತುತ್ತಾಗಿ ತಂಡದಿಂದ ಹೊರಬಿದ್ದ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್ ಇದೀಗ ಏಕದಿನ ಸರಣಿಗೆ ಲಭ್ಯರಿದ್ದಾರೆ. ಈ ಬಗ್ಗೆ ಜಸ್​ಪ್ರೀತ್ ಬುಮ್ರಾ ಖಚಿತ ಮಾಹಿತಿ ನೀಡಿದ್ದಾರೆ.

South Africa vs India: ಏಕದಿನ ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಗುಡ್ ನ್ಯೂಸ್: ಸ್ಟಾರ್ ಆಟಗಾರ ಕಮ್​ಬ್ಯಾಕ್
Indian Cricket team and Jasprit Bumrah
Follow us
TV9 Web
| Updated By: Vinay Bhat

Updated on:Jan 18, 2022 | 8:25 AM

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿ ಅಂತ್ಯಕಂಡಿದ್ದು ಇದೀಗ ಏಕದಿನ ಸರಣಿಗೆ ಸಜ್ಜಾಗುತ್ತಿದೆ. 1-2 ಅಂತರದಿಂದ ಟೀಮ್ ಇಂಡಿಯಾ ಟೆಸ್ಟ್ ಸರಣಿಯಲ್ಲಿ ಸೋಲು ಕಂಡಿದ್ದು, ಐತಿಹಾಸಿಕ ಗೆಲುವು ಸಾಧಿಸುವಲ್ಲಿ ಎಡವಿತು. ಬುಧವಾರದಂದು ಮೂರು ಪಂದ್ಯಗಳ ಏಕದಿನ ಸರಣಿ ಪೈಕಿ ಮೊದಲ ಮ್ಯಾಚ್ ಶುರುವಾಗಲಿದೆ. ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ಜಸ್​ಪ್ರೀತ್ ಬುಮ್ರಾ ಉಪ ನಾಯಕನಾಗಿದ್ದಾರೆ. ಹೀಗಿರುವಾಗ ಭಾರತಕ್ಕೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಟೆಸ್ಟ್ ಸರಣಿ ವೇಳೆ ಇಂಜುರಿಗೆ ತುತ್ತಾಗಿ ತಂಡದಿಂದ ಹೊರಬಿದ್ದ ಸ್ಟಾರ್ ಬೌಲರ್ ಇದೀಗ ಏಕದಿನ ಸರಣಿಗೆ ಲಭ್ಯರಿದ್ದಾರೆ. ಈ ಬಗ್ಗೆ ಜಸ್​ಪ್ರೀತ್ ಬುಮ್ರಾ (Jasprit Bumrah) ಖಚಿತ ಮಾಹಿತಿ ನೀಡಿದ್ದಾರೆ.

ಹೌದು, ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ವೇಳೆ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದರಿಂದಾಗಿ ಮೂರನೇ ಟೆಸ್ಟ್​ಗೆ ಅಲಭ್ಯರಾಗಿದ್ದರು. ಅಲ್ಲದೆ ಸಿರಾಜ್ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೀಸಲು ಆಟಗಾರನಾಗಿ ವೇಗದ ಬೌಲರ್ ನವದೀಪ್ ಸೈನಿ ಏಕದಿನ ತಂಡಕ್ಕೆ ಬಿಸಿಸಿಐ ಹೆಸರಿಸಿತ್ತು. ಆದರೀಗ ಸಿರಾಜ್ ಸಂಪೂರ್ಣ ಗುಣಮುಖರಾಗಿದ್ದು, ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಬುಮ್ರಾ ಮಾಹಿತಿ ನೀಡಿದ್ದಾರೆ.

ಸೋಮವಾರ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಬೂಮ್ರಾ ಅವರು ಸಿರಾಜ್ ಚೇತರಿಸಿಕೊಂಡಿದ್ದು ತಂಡದ ಜೊತೆಗೆ ಅಭ್ಯಾಸದಲ್ಲಿ ತೊಡಗಿದ್ದಾರೆ ಎಂಬುದಾಗಿ ತಿಳಿಸಿದರು. “ಸಿರಾಜ್ ಚೇತರಿಕೆಯನ್ನು ಕಂಡಿದ್ದಾರೆ. ಆತ ನಮ್ಮೊಂದಿಗೆ ಅಭ್ಯಾಸ ಕೂಡ ಮಾಡುತ್ತಿದ್ದಾರೆ. ಅವರು ಸಮರ್ಥರಾಗಿರುವಂತೆ ಕಾಣಿಸುತ್ತಾರೆ” ಎಂದಿ ಬೂಮ್ರಾ ಮಾಹಿತಿ ನೀಡಿದ್ದಾರೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಜನವರಿ 19 ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. ಎರಡನೇ ಏಕದಿನ ಪಂದ್ಯ ಇದೇ ಮೈದಾನದಲ್ಲಿ ಜನವರಿ 21 ರಂದು ಆಯೋಜಿಸಲಾಗಿದೆ. ಇದುಕೂಡ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಅಂತಿಮ ಮೂರನೇ ಏಕದಿನ ಪಂದ್ಯ ಕೇಪ್ ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಜನವರಿ 23 ರಂದು ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.

ಏಕದಿನ ಸರಣಿಗೆ ಭಾರತ ತಂಡ:

ಕೆ.ಎಲ್.ರಾಹುಲ್ (ನಾಯಕ), ಜಸ್‌ಪ್ರೀತ್ ಬುಮ್ರಾ (ಉಪ-ನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ಯುಜ್ವೇಂದ್ರ ಚಹಾಲ್, ಆರ್. ಅಶ್ವಿನ್, ಭುವನೇಶ್ವರ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್ ಹಾಗೂ ನವದೀಪ್ ಸೈನಿ.

ನೇರಪ್ರಸಾರ:

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎಲ್ಲ ಏಕದಿನ ಪಂದ್ಯಗಳು ಸ್ಟಾರ್ ಸ್ಫೋರ್ಟ್ಸ್​ ನೆಟ್​ವರ್ಕ್​​ನಲ್ಲಿ ನೇರಪ್ರಸಾರ ಕಾಣಲಿದೆ. ಡಿಸ್ನಿ+ ಹಾಟ್​ಸ್ಟಾರ್​ನಲ್ಲೂ ಲೈವ್ ಸ್ಟ್ರೀಮ್ ಆಗಲಿದೆ.

PKL 2021-22: ಆಡಿದ ಎಂಟನೇ ಪಂದ್ಯವೂ ಸೋತ ತೆಲುಗು ಟೈಟಾನ್ಸ್: ಪುಣೇರಿ ವಿರುದ್ಧ ಯುಪಿ ಯೋದ್ಧಾಗೆ ಗೆಲುವು

Published On - 8:24 am, Tue, 18 January 22

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ