ICC Test Rankings: ಟೆಸ್ಟ್ ಬೌಲರ್ ರ‍್ಯಾಂಕಿಂಗ್ ಪ್ರಕಟ: ಟಾಪ್ 10 ನಲ್ಲಿ ಟೀಮ್ ಇಂಡಿಯಾದ ಇಬ್ಬರಿಗೆ ಸ್ಥಾನ
ICC Test Rankings: ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ನಲ್ಲಿ 8 ವಿಕೆಟ್ ಕಬಳಿಸಿ ಗೆಲುವಿನ ರೂವಾರಿ ಎನಿಸಿಕೊಂಡಿದ್ದ ಮೊಹಮ್ಮದ್ ಶಮಿ ಕೂಡ ಎರಡು ಸ್ಥಾನ ಮೇಲೇರಿ 17ನೇ ಸ್ಥಾನಕ್ಕೆ ತಲುಪಿದ್ದಾರೆ.
ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ನೂತನ ಟೆಸ್ಟ್ ಬೌಲರುಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಬೌಲರುಗಳು ಸ್ಥಾನ ಪಡೆದಿರುವುದು ವಿಶೇಷ. ಹೌದು, ದಕ್ಷಿಣ ಆಫ್ರಿಕಾ ವಿರುದ್ದದ ಸೆಂಚುರಿಯನ್ ಟೆಸ್ಟ್ನಲ್ಲಿ ಭರ್ಜರಿ ಬೌಲಿಂಗ್ ಮಾಡಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಇದೀಗ ಟಾಪ್-10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸೌತ್ ಆಫ್ರಿಕಾ ವಿರುದ್ದ ಮೊದಲ ಟೆಸ್ಟ್ನಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದ ಬುಮ್ರಾ ಮೂರು ಸ್ಥಾನ ಮೇಲೇರಿ 9ನೇ ಸ್ಥಾನ ಅಲಂಕರಿಸಿದ್ದಾರೆ.
ಹಾಗೆಯೇ ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ನಲ್ಲಿ 8 ವಿಕೆಟ್ ಕಬಳಿಸಿ ಗೆಲುವಿನ ರೂವಾರಿ ಎನಿಸಿಕೊಂಡಿದ್ದ ಮೊಹಮ್ಮದ್ ಶಮಿ ಕೂಡ ಎರಡು ಸ್ಥಾನ ಮೇಲೇರಿ 17ನೇ ಸ್ಥಾನಕ್ಕೆ ತಲುಪಿದ್ದಾರೆ. ಹಾಗೆಯೇ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ನೂತನ ರ್ಯಾಂಕಿಂಗ್ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ನಂಬರ್-1 ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಪಾಕ್ ವೇಗಿ ಶಾಹಿನ್ ಅಫ್ರಿದಿ ಇದ್ದಾರೆ. ಇನ್ನು ನಾಲ್ಕನೇ ಮತ್ತು ಐದನೇ ಸ್ಥಾನವನ್ನು ಕ್ರಮವಾಗಿ ನ್ಯೂಜಿಲೆಂಡ್ನ ಟಿಮ್ ಸೌಥಿ ಹಾಗೂ ಇಂಗ್ಲೆಂಡ್ ವೇಗಿ ಜೇಮ್ಸ್ ಅಂಡರ್ಸನ್ ಅಲಂಕರಿಸಿದ್ದಾರೆ.
? Jasprit Bumrah into the top 10 ? Kagiso Rabada surges up
The pace duo make gains in the latest @MRFWorldwide ICC Men’s Test Player Rankings for bowling ?
Details ? https://t.co/VkBay1CqRn pic.twitter.com/uw0uOgRDQP
— ICC (@ICC) January 5, 2022
ಬ್ಯಾಟರುಗಳ ರ‍್ಯಾಂಕಿಂಗ್: ಬ್ಯಾಟರ್ಗಳ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಎರಡು ಸ್ಥಾನ ಕುಸಿದಿದ್ದು, ಈ ಮೂಲಕ 9ನೇ ಸ್ಥಾನಕ್ಕೆ ತಲುಪಿದ್ದಾರೆ. ಅಗ್ರಸ್ಥಾನದಲ್ಲಿ ಆಸ್ಟ್ರೇಲಿಯಾ ಆಟಗಾರ ಮಾರ್ನಸ್ ಲಬುಶೇನ್ ಇದ್ದರೆ, ದ್ವಿತೀಯ ಸ್ಥಾನದಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ಇದ್ದಾರೆ. ಹಾಗೆಯೇ ಮೂರನೇ ಸ್ಥಾನವನ್ನು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅಲಂಕರಿಸಿದ್ದಾರೆ. ಇನ್ನು 4ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಇದ್ದು, ಅದೇ ರೀತಿ ಐದನೇ ಸ್ಥಾನವನ್ನು ಟೀಮ್ ಇಂಡಿಯಾದ ರೋಹಿತ್ ಶರ್ಮಾ ಅಲಂಕರಿಸಿದ್ದಾರೆ.
ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್..!
ಇದನ್ನೂ ಓದಿ: Ravindra Jadeja: ಸ್ಟಾರ್ ಆಲ್ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!
ಇದನ್ನೂ ಓದಿ: Rohit Sharma: ಫಿಟ್ನೆಸ್ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?
ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!
(Jasprit Bumrah Enters the Top 10 in ICC Test Rankings)
Published On - 3:33 pm, Wed, 5 January 22