Jasprit Bumrah: ಜಹೀರ್ ಖಾನ್ ದಾಖಲೆ ಸರಿಗಟ್ಟಿದ ಜಸ್​ಪ್ರೀತ್ ಬುಮ್ರಾ

India vs England 1st Test: ಮೊದಲ ಟೆಸ್ಟ್‌ನಲ್ಲಿ ಭಾರತೀಯ ವೇಗದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಜಸ್ಪ್ರೀತ್ ಬುಮ್ರಾ 9 ವಿಕೆಟ್ ಉರುಳಿಸಿದರೆ, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಶಮಿ ತಲಾ 4 ವಿಕೆಟ್ ಕಬಳಿಸಿದ್ದರು.

Jasprit Bumrah: ಜಹೀರ್ ಖಾನ್ ದಾಖಲೆ ಸರಿಗಟ್ಟಿದ ಜಸ್​ಪ್ರೀತ್ ಬುಮ್ರಾ
zaheer khan-Jasprit bumrah
Follow us
| Updated By: ಝಾಹಿರ್ ಯೂಸುಫ್

Updated on:Aug 08, 2021 | 7:14 PM

ನಾಟಿಂಗ್ಹ್ಯಾಮ್​ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ (India vs England 1st Test) ನಡುವಣ ಮೊದಲ ಟೆಸ್ಟ್ ಪಂದ್ಯವು ಕುತೂಹಲಘಟ್ಟದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವನ್ನು 183 ರನ್​ಗಳಿಗೆ ಕಟ್ಟಿಹಾಕಿದ ಟೀಮ್ ಇಂಡಿಯಾ (Team India) ತನ್ನ ಪ್ರಥಮ ಇನಿಂಗ್ಸ್​ನ್ನು 278 ರನ್​ಗಳಿಗೆ ಅಂತ್ಯಗೊಳಿಸಿತ್ತು. ಹಾಗೆಯೇ 2ನೇ ಇನಿಂಗ್ಸ್​ನಲ್ಲಿ ಇಂಗ್ಲೆಂಡ್​ ತಂಡವನ್ನು 303 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತದ ವೇಗಿಗಳು ಯಶಸ್ವಿಯಾಗಿದ್ದರು. ಈ ಇನಿಂಗ್ಸ್​ಗಳಲ್ಲಿ ಟೀಮ್ ಇಂಡಿಯಾ ಪರ ಮಿಂಚಿದ್ದು ಜಸ್​ಪ್ರೀತ್ ಬುಮ್ರಾ (Jasprit bumrah). ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಉರುಳಿಸಿದ್ದ ಬುಮ್ರಾ 2ನೇ ಇನಿಂಗ್ಸ್​ನಲ್ಲಿ 5 ವಿಕೆಟ್ ಪಡೆದಿದ್ದರು. ಹೀಗೆ ಒಟ್ಟು 9 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಟಾಪ್ ಬೌಲರುಗಳ ಪಟ್ಟಿಗೆ ಬುಮ್ರಾ ಸೇರ್ಪಡೆಯಾಗಿದ್ದಾರೆ.

1986 ರಲ್ಲಿ ಇಂಗ್ಲೆಂಡ್​ನಲ್ಲಿ ಟೀಮ್ ಇಂಡಿಯಾ ಮಾಜಿ ವೇಗಿ ಚೇತನ್ ಶರ್ಮಾ 188 ರನ್ ಗೆ 10 ವಿಕೆಟ್ ಪಡೆದು ಟೆಸ್ಟ್ ಪಂದ್ಯವೊಂದರಲ್ಲಿ ಆಂಗ್ಲರ ನಾಡಿನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಆ ಬಳಿಕ ಎಡಗೈ ವೇಗಿ ಬೌಲರ್ ಜಹೀರ್ ಖಾನ್ 2007 ರಲ್ಲಿ ನಾಟಿಂಗ್ಹ್ಯಾಮ್ ನಲ್ಲಿಯೇ 134 ರನ್ ಗಳಿಗೆ 9 ವಿಕೆಟ್ ಪಡೆದು ಮಿಂಚಿದ್ದರು. ಆ ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ಗೆದ್ದುಕೊಂಡಿತು. ಇದೀಗ ಜಸ್​ಪ್ರೀತ್ ಬುಮ್ರಾ ಕೂಡ 9 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್​ ನೆಲದಲ್ಲಿ ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ವಿಕೆಟ್ ಉರುಳಿಸಿದ ಟಾಪ್ ಬೌಲರುಗಳ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅಲ್ಲದೆ ಎಡಗೈ ವೇಗಿ ಜಹೀರ್ ಖಾನ್ ನಿರ್ಮಿಸಿದ್ದ ದಾಖಲೆಯನ್ನು ಬುಮ್ರಾ ಸರಿಗಟ್ಟಿದ್ದಾರೆ.

ನಾಲ್ಕನೇ ಸ್ಥಾನಕ್ಕೇರಲಿದೆ ಭಾರತ: ಪ್ರಸ್ತುತ ನಡೆಯುತ್ತಿರುವ ಪಂದ್ಯವು ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾದ 127ನೇ ಟೆಸ್ಟ್ ಆಗಿದೆ. ಆಂಗ್ಲರ ವಿರುದ್ದದ ಇದುವರೆಗಿನ ಪ್ರದರ್ಶನದಲ್ಲಿ ಭಾರತ 29 ಟೆಸ್ಟ್‌ಗಳನ್ನು ಗೆದ್ದಿದ್ದರೆ, 48 ರಲ್ಲಿ ಸೋತಿದೆ. ಇನ್ನು 49 ಟೆಸ್ಟ್​ಗಳನ್ನು ಡ್ರಾ ಮಾಡಿಕೊಂಡಿದೆ. ನಾಟಿಂಗ್ಹ್ಯಾಮ್‌​ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ಇಂಗ್ಲೆಂಡ್ ವಿರುದ್ಧದ ಭಾರತದ 30ನೇ ಗೆಲುವಾಗಿದೆ. ಈ ಮೊದಲು ಕೇವಲ ಮೂರು ತಂಡಗಳು ಮಾತ್ರ ಇಂಗ್ಲೆಂಡಿನ ವಿರುದ್ಧ 30 ಕ್ಕೂ ಹೆಚ್ಚು ಟೆಸ್ಟ್‌ಗಳನ್ನು ಗೆದ್ದಿದ್ದವು. ಆಸ್ಟ್ರೇಲಿಯಾ 146 ಪಂದ್ಯಗಳನ್ನು ಗೆಲ್ಲುವ ಈ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್ 58 ಮತ್ತು ದಕ್ಷಿಣ ಆಫ್ರಿಕಾ 34 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಇದೀಗ ಭಾರತ ಗೆದ್ದರೆ ಇಂಗ್ಲೆಂಡ್ ವಿರುದ್ದ ಟೆಸ್ಟ್​ನಲ್ಲಿ ಪಾರುಪತ್ಯ ಸಾಧಿಸಿದ ನಾಲ್ಕನೇ ತಂಡ ಎನಿಸಿಕೊಳ್ಳಲಿದೆ.

ವೇಗಿಗಳ ಭರ್ಜರಿ ಪ್ರದರ್ಶನ: ಮೊದಲ ಟೆಸ್ಟ್‌ನಲ್ಲಿ ಭಾರತೀಯ ವೇಗದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಜಸ್ಪ್ರೀತ್ ಬುಮ್ರಾ 9 ವಿಕೆಟ್ ಉರುಳಿಸಿದರೆ, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಶಮಿ ತಲಾ 4 ವಿಕೆಟ್ ಕಬಳಿಸಿದ್ದರು. ಹಾಗೆಯೇ ಮೊಹಮ್ಮದ್ ಸಿರಾಜ್ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಹಿಂದೆ 2018 ರಲ್ಲಿ, ನಾಟಿಂಗ್ಹ್ಯಾಮ್‌ನಲ್ಲಿಯೇ ಭಾರತೀಯ ಬೌಲರ್‌ಗಳು 19 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಇದೀಗ 20 ವಿಕೆಟ್ ಉರುಳಿಸುವ ಮೂಲಕ ಟೀಮ್ ಇಂಡಿಯಾ ವೇಗಿಗಳು ಸಂಚಲನ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: Health Tips: ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಸಿಗುವ ಆರೋಗ್ಯಕರ ಪ್ರಯೋಜನ ಒಂದಾ ಎರಡಾ..!

ಇದನ್ನೂ ಓದಿ: Health Tips: ನೀವು ಹಸಿ ಹಾಲು ಕುಡಿತೀರಾ? ಹಾಗಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ

ಇದನ್ನೂ ಓದಿ: Tokyo Olympics 2020: ಭಾರತ ಸೋಲುತ್ತಿದ್ದಂತೆ ರೆಫರಿಗೆ ಬಿತ್ತು ಏಟು..!

ಇದನ್ನೂ ಓದಿ: Neeraj Chopra: ಆಸ್ಪತ್ರೆಯ ಬೆಡ್​ನಿಂದ ಚಿನ್ನದ ಬೇಟೆ ತನಕ: ನೀರಜ್ ಚೋಪ್ರಾ ಎಂಬ ಗೋಲ್ಡನ್ ಸ್ಟಾರ್

Published On - 7:10 pm, Sun, 8 August 21

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ