AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4,4,4,6..! ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಜಸ್ಪ್ರೀತ್ ಬುಮ್ರಾ

Jasprit Bumrah's Explosive Batting: ಜಸ್ಪ್ರೀತ್ ಬುಮ್ರಾ ತಮ್ಮ ಕರಾರುವಕ್ಕಾದ ಬೌಲಿಂಗ್‌ಗೆ ಹೆಸರುವಾಸಿಯಾಗಿದ್ದರೂ, ಇಂಗ್ಲೆಂಡ್ ವಿರುದ್ಧದ ODI ಪಂದ್ಯದಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್‌ನಿಂದ ಅಚ್ಚರಿ ಮೂಡಿಸಿದರು. 10ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಅಜೇಯ 20 ರನ್ ಗಳಿಸಿ, ಒಂದೇ ಓವರ್‌ನಲ್ಲಿ 18 ರನ್ ಸಿಡಿಸಿ ಗಮನ ಸೆಳೆದರು. ಬೌಲರ್ ಆಗಿದ್ದರೂ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಬುಮ್ರಾ, ಟೆಸ್ಟ್‌ನಲ್ಲಿ ಬ್ರಾಡ್ ವಿರುದ್ಧ 35 ರನ್ ಗಳಿಸಿದ್ದನ್ನು ನೆನಪಿಸಿದರು.

IND vs ENG: 4,4,4,6..! ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಜಸ್ಪ್ರೀತ್ ಬುಮ್ರಾ
Jasprit Bumrah
ಪೃಥ್ವಿಶಂಕರ
|

Updated on: Jul 16, 2026 | 11:23 PM

Share

ಜಸ್ಪ್ರೀತ್ ಬುಮ್ರಾ (Jasprit Bumrah) ಎಂದೊಡನೆ ನಮಗೆಲ್ಲ ನೆನಪಾಗುವುದು ಅವರ ಕರಾರುವಕ್ಕಾದ ಬೌಲಿಂಗ್. ವಿಶ್ವ ಕ್ರಿಕೆಟ್​ನ ಅಗ್ರಗಣ್ಯ ಬೌಲರ್​ಗಳ ಪಟ್ಟಿಯಲ್ಲಿ ಬುಮ್ರಾ ಕೂಡ ಸ್ಥಾನ ಪಡೆದಿದ್ದಾರೆ. ಬೌಲಿಂಗ್‌ನಲ್ಲಿ ವಿಶ್ವದರ್ಜೆಯ ಬೌಲರ್ ಎನಿಸಿಕೊಂಡಿರುವ ಬುಮ್ರಾಗೆ ಬ್ಯಾಟಿಂಗ್​ನಲ್ಲಿ ಮಾತ್ರ ಛಾಪು ಮೂಡಿಸಲು ಸಾಧ್ಯವಾಗಿಲ್ಲ. ಆದಾಗ್ಯೂ ಬುಮ್ರಾ ಆಗಾಗ್ಗ ತಮ್ಮ ಬ್ಯಾಟಿಂಗ್‌ ಮೂಲಕ ಕೆಲವು ಚಮತ್ಕಾರಿ ಇನ್ನಿಂಗ್ಸ್​ಗಳನ್ನು ಆಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಇಂದು ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಬುಮ್ರಾ ಸ್ಫೋಟಕ ಬ್ಯಾಟಿಂಗ್‌ ಮೂಲಕ ಇಂಗ್ಲೆಂಡ್‌ ಬೌಲರ್​ನ ಬೆವರಿಳಿಸಿದ್ದಾರೆ.

ಒಂದೇ ಓವರ್‌ನಲ್ಲಿ 3 ಬೌಂಡರಿ, 1 ಸಿಕ್ಸರ್

ಇಂಗ್ಲೆಂಡ್‌ ವಿರುದ್ಧದ ಈ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತದ ಪರ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಆದರೆ ಇತರ ಬ್ಯಾಟ್ಸ್‌ಮನ್​ಗಳ ಕಳಪೆ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಕೇವಲ 233 ರನ್ ಗಳಿಸಲಷ್ಟೇ ಶಕ್ತವಾಯಿತು. ಆದಾಗ್ಯೂ 10ನೇ ಕ್ರಮಾಂಕದಲ್ಲಿ ಬಂದ ಜಸ್ಪ್ರೀತ್ ಬುಮ್ರಾ ಅಜೇಯ 20 ರನ್ ಗಳಿಸುವ ಮೂಲಕ ಎಲ್ಲರ ಗಮನ ಸೆಳೆದರು. 150 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ ಜಸ್ಪ್ರೀತ್ ಬುಮ್ರಾ ಒಂದೇ ಓವರ್‌ನಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು, ಹೀಗಾಗಿ ಒಂದೇ ಓವರ್‌ನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಅತ್ಯುತ್ತಮ ಸ್ಕೋರ್ ಗಳಿಸಿದರು.

18 ರನ್ ಕಲೆಹಾಕಿದ ಬುಮ್ರಾ

ಇಂಗ್ಲೆಂಡ್ ವೇಗಿ ಸಾಕಿಬ್ ಮಹಮೂದ್ ಎಸೆದ 43 ನೇ ಓವರ್‌ನಲ್ಲಿ ಜಸ್ಪ್ರೀತ್ ಬುಮ್ರಾ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಪ್ರದರ್ಶಿಸಿದರು. ಈ ಓವರ್​ನಲ್ಲಿ ಬುಮ್ರಾ ಮೂರು ಬೌಂಡರಿ ಮತ್ತು ನಂತರ ಒಂದು ಸಿಕ್ಸರ್ ಬಾರಿಸಿ 18 ರನ್ ಕಲೆಹಾಕಿದರು. ಬುಮ್ರಾ ಅವರ ಬ್ಯಾಟಿಂಗ್ ಪ್ರದರ್ಶನ ಎಲ್ಲರನ್ನೂ ಅಚ್ಚರಿಗೊಳಿಸಿತು. ಬುಮ್ರಾ ಸಾಮಾನ್ಯವಾಗಿ ತಮ್ಮ ಬೌಲಿಂಗ್‌ಗೆ ಹೆಸರುವಾಸಿಯಾಗಿದ್ದರೂ, ಅವರು ಇಂಗ್ಲಿಷ್ ಪಿಚ್‌ಗಳಲ್ಲಿಯೂ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಪ್ರದರ್ಶಿಸಿದರು.

IND vs ENG: 968 ದಿನಗಳ ಬಳಿಕ ಕಣಕ್ಕಿಳಿದು ಇತಿಹಾಸ ಸೃಷ್ಟಿಸಿದ ಬುಮ್ರಾ..!

ಒಂದೇ ಓವರ್‌ನಲ್ಲಿ 35 ರನ್‌

ಇಲ್ಲಿ ಇನ್ನೊಂದು ಗಮನಿಸಬೇಕಾದ ಸಂಗತಿಯೆಂದರೆ ಬುಮ್ರಾ ಏಕದಿನದಲ್ಲಿ ಯಾವ ಇಂಗ್ಲೆಂಡ್‌ ವಿರುದ್ಧ ಒಂದೇ ಓವರ್​ನಲ್ಲಿ 18 ರನ್​ಗಳನ್ನು ಕಲೆಹಾಕಿದ್ದಾರೋ ಅದೇ ಇಂಗ್ಲೆಂಡ್‌ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 35 ರನ್ ಬಾರಿಸಿದ್ದರು. 2022 ರ ಇಂಗ್ಲೆಂಡ್ ಪ್ರವಾಸದ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಬುಮ್ರಾ, ಸ್ಟುವರ್ಟ್ ಬ್ರಾಡ್ ಅವರ ಒಂದೇ ಓವರ್‌ನಲ್ಲಿ 35 ರನ್‌ಗಳನ್ನು ಕಲೆಹಾಕಿದ್ದರು. ಈ ಓವರ್‌ನಲ್ಲಿ ಬುಮ್ರಾ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿ 29 ರನ್ ಗಳಿಸಿದ್ದರು. ಈಗ, ಬುಮ್ರಾ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್