
ಏಷ್ಯಾಕಪ್ ಟಿ20 ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಕಣಕ್ಕಿಳಿಯುವುದಾಗಿ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ತಿಳಿಸಿದ್ದಾರೆ. ಎಕ್ಸ್ಪ್ರೆಸ್ ಸ್ಪೋರ್ಟ್ಸ್ ವರದಿ ಪ್ರಕಾರ, ಏಷ್ಯಾಕಪ್ ತಂಡದ ಆಯ್ಕೆಗೆ ಲಭ್ಯವಿರುವುದಾಗಿ ಆಯ್ಕೆ ಸಮಿತಿಗೆ ಬುಮ್ರಾ ತಿಳಿಸಿದ್ದಾರೆ. ಇದರೊಂದಿಗೆ ಏಷ್ಯಾಕಪ್ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.
ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬುಮ್ರಾ ಕೇವಲ 3 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದರು. ಬೆನ್ನು ನೋವಿನ ಸಮಸ್ಯೆಯ ಕಾರಣ ಬುಮ್ರಾಗೆ 2 ಮ್ಯಾಚ್ಗಳಲ್ಲಿ ವಿಶ್ರಾಂತಿ ನೀಡಲಾಗಿತ್ತು. ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿರುವ ಬುಮ್ರಾ ಏಷ್ಯಾಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ಅದರಂತೆ ಏಷ್ಯಾಕಪ್ನಲ್ಲಿ ಭಾರತ ತಂಡದ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಅಭಿಷೇಕ್ ಶರ್ಮಾ ಆಯ್ಕೆಯಾಗುವುದು ಖಚಿತ. ಇನ್ನು ಮೂರನೇ ಕ್ರಮಾಂಕದ ಬ್ಯಾಟರ್ ಆಗಿ ಶುಭ್ಮನ್ ಗಿಲ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹಾಗೆಯೇ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳುವುದು ಖಚಿತ.
ಇನ್ನು ವಿಕೆಟ್ ಕೀಪರ್ ಬ್ಯಾಟರ್ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿರುವ ಪಂತ್ ಸಂಪೂರ್ಣ ಫಿಟ್ ಆಗದಿದ್ದರೆ, ಜಿತೇಶ್ ಶರ್ಮಾಗೆ ಚಾನ್ಸ್ ಸಿಗಬಹುದು. ಹಾಗೆಯೇ ಮಧ್ಯಮ ಕ್ರಮಾಂಕದ ಬ್ಯಾಟರ್ಗಳಾಗಿ ತಿಲಕ್ ವರ್ಮಾ ಹಾಗೂ ಶಿವಂ ದುಬೆ ಅವರನ್ನು ಆಯ್ಕೆ ಮಾಡಬಹುದು.
ಆಲ್ರೌಂಡರ್ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಅವಕಾಶ ನೀಡಲಿದ್ದಾರೆ. ಹಾಗೆಯೇ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಏಷ್ಯಾಕಪ್ಗೆ ಸಂಭಾವ್ಯ ಭಾರತ ತಂಡ ಈ ಕೆಳಗಿನಂತಿರಲಿದೆ…
Published On - 3:21 pm, Sun, 17 August 25