India Squad: ಕೆಎಲ್ ರಾಹುಲ್ ಔಟ್: ಟೀಮ್ ಇಂಡಿಯಾಗೆ ಹೊಸ ಉಪನಾಯಕ

India Squad for Sri Lanka: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ.

India Squad: ಕೆಎಲ್ ರಾಹುಲ್ ಔಟ್: ಟೀಮ್ ಇಂಡಿಯಾಗೆ ಹೊಸ ಉಪನಾಯಕ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 19, 2022 | 6:28 PM

ಭಾರತ-ಶ್ರೀಲಂಕಾ ನಡುವಣ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಆದರೆ ಈ ಸರಣಿ ಮೂಲಕ ಜಸ್​ಪ್ರೀತ್ ಬುಮ್ರಾ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಗಾಯಗೊಂಡಿರುವ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಹಂಗಾಮಿ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಶ್ರೀಲಂಕಾ ವಿರುದ್ದದ ಟಿ20 ಸರಣಿ ಹಾಗೂ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ವೈಸ್ ಕ್ಯಾಪ್ಟನ್ ಆಗಿ ಯಾರ್ಕರ್ ಮಾಂತ್ರಿಕ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ತಂಡಕ್ಕೆ ಸಂಜು ಸ್ಯಾಮ್ಸನ್ ಹಾಗೂ ರವೀಂದ್ರ ಜಡೇಜಾ ಕಂಬ್ಯಾಕ್ ಮಾಡಿದ್ದಾರೆ. ಹಾಗೆಯೇ ವಿಶ್ರಾಂತಿಯ ಕಾರಣ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಈ ಸರಣಿಯಿಂದ ಹೊರಗುಳಿದಿದ್ದಾರೆ.

ಭಾರತ-ಶ್ರೀಲಂಕಾ ನಡುವಣ ಸರಣಿ ಫೆಬ್ರವರಿ 24 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು ಟಿ20 ಪಂದ್ಯಗಳನ್ನು ಆಡಲಾಗುತ್ತಿದ್ದು, ಇದಾದ ಬಳಿಕ ಟೆಸ್ಟ್ ಪಂದ್ಯ ನಡೆಯಲಿದೆ. ಇನ್ನು ಈ ಸರಣಿಯ ಪ್ರಮುಖ ವಿಷಯವೆಂದರೆ ಡೇ-ನೈಟ್ ಟೆಸ್ಟ್ . ಹೌದು, ಭಾರತ ತಂಡ ಒಂದು ವರ್ಷದ ನಂತರ ಮತ್ತೆ ಡೇ-ನೈಟ್ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯ ಮಾರ್ಚ್ 12 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ.

ಟಿ20 ಸರಣಿಯ ಮೊದಲ ಪಂದ್ಯ ಫೆಬ್ರವರಿ 24 ರಂದು ಲಕ್ನೋದಲ್ಲಿ ನಡೆಯಲಿದೆ. ಫೆಬ್ರವರಿ 26 ಮತ್ತು 27 ರಂದು ಧರ್ಮಶಾಲಾದಲ್ಲಿ ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಜರುಗಲಿವೆ. ಹಾಗೆಯೇ ಟೆಸ್ಟ್‌ನ ಪಂದ್ಯಗಳು ಮೊಹಾಲಿ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಮೊದಲ ಟೆಸ್ಟ್ ಮಾರ್ಚ್ 4 ರಿಂದ 8 ರವರೆಗೆ ಮೊಹಾಲಿಯಲ್ಲಿ ನಡೆಯಲಿದೆ. ಹಾಗೆಯೇ ಎರಡನೇ ಡೇ ನೈಟ್ ಟೆಸ್ಟ್ ಮಾರ್ಚ್ 12 ರಿಂದ 16 ರವರೆಗೆ ಬೆಂಗಳೂರಿನಲ್ಲಿ ಆಡಲಾಗುತ್ತದೆ.

ಶ್ರೀಲಂಕಾ ಸರಣಿಗೆ ಭಾರತ ತಂಡ ಹೀಗಿದೆ:

ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಜಸ್​​ಪ್ರೀತ್ ಬುಮ್ರಾ (ಉಪನಾಯಕ), ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ರವಿ ಬಿಷ್ಣೋಯ್, ಅವೇಶ್ ಖಾನ್

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್, ಶುಭ್​ಮನ್ ಗಿಲ್, ಕೆಎಸ್ ಭರತ್, ಆರ್​ ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮೇಶ್ ಯಾದವ್, ಸೌರಭ್ ಕುಮಾರ್

ಶ್ರೀಲಂಕಾ ವಿರುದ್ದದ ಸರಣಿಯ ವೇಳಾಪಟ್ಟಿ ಹೀಗಿದೆ:

1ನೇ ಟಿ20: ಫೆಬ್ರವರಿ 24 (ಲಕ್ನೋ)

ಎರಡನೇ ಟಿ20: ಫೆಬ್ರವರಿ 26 (ಧರ್ಮಶಾಲಾ)

ಮೂರನೇ ಟಿ20: ಫೆಬ್ರವರಿ 27 (ಧರ್ಮಶಾಲಾ)

1ನೇ ಟೆಸ್ಟ್: 4 ರಿಂದ 8 ಮಾರ್ಚ್ (ಮೊಹಾಲಿ)

2ನೇ ಟೆಸ್ಟ್ (ಹಗಲು-ರಾತ್ರಿ): ಮಾರ್ಚ್ 12-16 (ಬೆಂಗಳೂರು)

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(Jasprit Bumrah in leadership role, named Team India vice-captain)

Published On - 4:28 pm, Sat, 19 February 22

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ