IND vs IRE: ಟೀಂ ಇಂಡಿಯಾಕ್ಕೆ ಬರಲಿದೆ ಆನೆ ಬಲ; ‘100%’ ಗುಡ್ ನ್ಯೂಸ್ ಕೊಟ್ಟ ಜಯ್ ಶಾ

Jasprit Bumrah: ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದು, ಅಲ್ಲಿ 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿಯಿಂದ ಬುಮ್ರಾ ತಂಡಕ್ಕೆ ಮರಳಬಹುದು ಎಂದು ಶಾ ಹೇಳಿದ್ದಾರೆ.

IND vs IRE: ಟೀಂ ಇಂಡಿಯಾಕ್ಕೆ ಬರಲಿದೆ ಆನೆ ಬಲ; '100%' ಗುಡ್ ನ್ಯೂಸ್ ಕೊಟ್ಟ ಜಯ್ ಶಾ
ಜಸ್ಪ್ರೀತ್ ಬುಮ್ರಾ
Follow us
ಪೃಥ್ವಿಶಂಕರ
|

Updated on:Jul 28, 2023 | 6:17 AM

ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ ಮೈದಾನದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ವಿಂಡೀಸ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ (Team India) ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದರೊಂದಿಗೆ ಏಷ್ಯಾಕಪ್ (Asia Cup), ವಿಶ್ವಕಪ್​ನಂತಹ (World Cup) ದೊಡ್ಡ ಟೂರ್ನಿಗಳಿಗೂ ಈ ಸರಣಿಯಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಬಹಳ ವರ್ಷಗಳಿಂದ ಐಸಿಸಿ (ICC) ಪ್ರಶಸ್ತಿಯನ್ನು ಗೆಲ್ಲಲು ಕಾಯುತ್ತಿರುವ ಟೀಂ ಇಂಡಿಯಾ ವಿಶ್ವ ಸಮರಕ್ಕೆ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಿದ್ಧತೆ ಆರಂಭಿಸಿದೆ. ಇದೀಗ ಈ ಸಿದ್ಧತೆಗೆ ಪೂರಕವಾಗಿ ಇಂಜುರಿಗೊಳಗಾಗಿ ಬಹಳ ದಿನಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah), ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ವಾಸ್ತವವಾಗಿ ಜಸ್ಪ್ರೀತ್ ಬುಮ್ರಾ ಕಳೆದ ಸುಮಾರು ಒಂದು ವರ್ಷದಿಂದ ಕ್ರಿಕೆಟ್ ಕಣದಿಂದ ದೂರವಿದ್ದಾರೆ. ಬೆನ್ನುನೋವಿನಿಂದಾಗಿ ಬುಮ್ರಾ 2022 ರ ಸೆಪ್ಟೆಂಬರ್​ನಿಂದ ಯಾವುದೇ ಕ್ರಿಕೆಟ್ ಆಡಿಲ್ಲ. ಇಂಜುರಿಯಿಂದಾಗಿ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬುಮ್ರಾ, ಅಂದಿನಿಂದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ.

Jasprit Bumrah: ಐರ್ಲೆಂಡ್ ಸರಣಿಗೆ ಯಾರ್ಕರ್ ಕಿಂಗ್? ಬುಮ್ರಾ ಕಂಬ್ಯಾಕ್ ಬಗ್ಗೆ ರೋಹಿತ್ ಹೇಳಿದ್ದೇನು?

100% ಫಿಟ್ ಆಗಿದ್ದಾರೆ ಬುಮ್ರಾ

ಕೆಲವು ದಿನಗಳ ಹಿಂದೆ, ಬುಮ್ರಾ ಚೇತರಿಕೆಯ ಬಗ್ಗೆ ಮಾಹಿತಿ ನೀಡಿದ್ದ ಬಿಸಿಸಿಐ, ಬುಮ್ರಾ ಅವರು ಎನ್‌ಸಿಎಯಲ್ಲಿ ಪೂರ್ಣ ಸಾಮರ್ಥ್ಯದಲ್ಲಿ ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಮುಂದೆ ಕೆಲವು ಅಭ್ಯಾಸ ಪಂದ್ಯಗಳನ್ನು ಆಡಲಿದ್ದಾರೆ ಎಂದು ಹೇಳಿಕೊಂಡಿತ್ತು. ಇದೀಗ ಮಂಡಳಿಯ ಕಾರ್ಯದರ್ಶಿ ಜಯ್ ಶಾ, ಬುಮ್ರಾ ಫಿಟ್‌ನೆಸ್‌ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಜುಲೈ 27 ರ ಗುರುವಾರದಂದು ವಿಶ್ವಕಪ್‌ ಸಿದ್ಧತೆ ಕುರಿತು ನವದೆಹಲಿಯಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಜೈ ಶಾ, ಜಸ್ಪ್ರೀತ್ ಬುಮ್ರಾ 100% ಫಿಟ್ ಆಗಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ತಿಂಗಳು ಅಖಾಡಕ್ಕೆ?

ಇಷ್ಟೇ ಅಲ್ಲ ಜೈ ಶಾ ಮತ್ತೊಂದು ಗುಡ್ ನ್ಯೂಸ್ ಕೂಡ ಕೊಟ್ಟಿದ್ದಾರೆ. ಮುಂದಿನ ತಿಂಗಳು ಬುಮ್ರಾ ತಂಡಕ್ಕೆ ಮರಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದು, ಅಲ್ಲಿ 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿಯಿಂದ ಬುಮ್ರಾ ತಂಡಕ್ಕೆ ಮರಳಬಹುದು ಎಂದು ಶಾ ಹೇಳಿದ್ದಾರೆ. ಈ ಸರಣಿಯ ನಂತರ ಏಷ್ಯಾಕಪ್ ಕೂಡ ಇದೆ. ಅಂತಹ ಪರಿಸ್ಥಿತಿಯಲ್ಲಿ, ಆ ಪಂದ್ಯಾವಳಿಯ ಮೊದಲು, ಬುಮ್ರಾ ಈ ಪ್ರವಾಸದಲ್ಲಿ ತಂಡಕ್ಕೆ ಮರಳುವ ಮೂಲಕ ತಮ್ಮ ಬೌಲಿಂಗ್ ಲಯವನ್ನು ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:14 am, Fri, 28 July 23

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ