Asia Cup 2023: ಭಾರತಕ್ಕೆ ಮರಳಿದ ಜಸ್ಪ್ರೀತ್ ಬುಮ್ರಾ: ಏಷ್ಯಾಕಪ್ ಪಂದ್ಯಕ್ಕೆ ಅಲಭ್ಯ
Jasprit Bumrah: ಶನಿವಾರ ನಡೆದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 14 ಎಸೆತಗಳಲ್ಲಿ 3 ಫೋರ್ಗಳೊಂದಿಗೆ 16 ರನ್ ಬಾರಿಸಿದ್ದರು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ (87) ಹಾಗೂ ಇಶಾನ್ ಕಿಶನ್ (82) ನಂತರ ಅತ್ಯಧಿಕ ರನ್ ಕಲೆಹಾಕಿದ್ದು ಬುಮ್ರಾ (16) ಎಂಬುದು ವಿಶೇಷ.
Asia Cup 2023: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಶ್ರೀಲಂಕಾದಿಂದ ಭಾರತಕ್ಕೆ ಮರಳಿದ್ದಾರೆ. ಹೀಗಾಗಿ ಸೋಮವಾರ ನಡೆಯಲಿರುವ ನೇಪಾಳ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದಿಲ್ಲ. ವೈಯುಕ್ತಿಕ ಕಾರಣಗಳಿಗಾಗಿ ಅವರು ಮುಂಬೈಗೆ ಮರಳಿದ್ದು, ಸೂಪರ್-4 ಹಂತದ ಪಂದ್ಯದ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಜಸ್ಪ್ರೀತ್ ಬುಮ್ರಾ ಅವರು ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಅವರನ್ನು ಮಾರ್ಚ್ 15, 2020 ರಂದು ಗೋವಾದಲ್ಲಿ ವಿವಾಹವಾಗಿದ್ದರು. ಇದೀಗ ಈ ದಂಪತಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿಯೇ ಬುಮ್ರಾ ದಿಢೀರ್ ಆಗಿ ಭಾರತಕ್ಕೆ ವಾಪಾಸ್ಸಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಇತ್ತ ತಂಡವನ್ನು ತೊರೆದಿರುವ ಬುಮ್ರಾ ಸೆಪ್ಟೆಂಬರ್ 4 ರಂದು ನೇಪಾಳ ವಿರುದ್ಧ ನಡೆಯುವ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸೂಪರ್-4 ಹಂತಕ್ಕೇರಲಿದೆ. ಸೂಪರ್-4 ಹಂತದಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಆಡಲಿದೆ.
ಅಂದರೆ ಸೂಪರ್ ಫೋರ್ ಹಂತಕ್ಕೇರಿದರೆ ಭಾರತ ತಂಡದ ಮೊದಲ ಎದುರಾಳಿ ಪಾಕಿಸ್ತಾನ್. ಈ ಪಂದ್ಯದ ವೇಳೆಗೆ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ ತಿಳಿದು ಬಂದಿದೆ.
ಶನಿವಾರ ನಡೆದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 14 ಎಸೆತಗಳಲ್ಲಿ 3 ಫೋರ್ಗಳೊಂದಿಗೆ 16 ರನ್ ಬಾರಿಸಿದ್ದರು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ (87) ಹಾಗೂ ಇಶಾನ್ ಕಿಶನ್ (82) ನಂತರ ಅತ್ಯಧಿಕ ರನ್ ಕಲೆಹಾಕಿದ್ದು ಬುಮ್ರಾ (16) ಎಂಬುದು ವಿಶೇಷ.
ಈ ಪಂದ್ಯದ ಬಳಿಕ ವೈಯುಕ್ತಿಕ ಕಾರಣಗಳಿಗಾಗಿ ಅವರು ಮುಂಬೈಗೆ ಮರಳಿದ್ದು, ಇನ್ನು ಸೂಪರ್-4 ಹಂತದ ಪಂದ್ಯಗಳ ವೇಳೆ ಮತ್ತೆ ಶ್ರೀಲಂಕಾಗೆ ಮರಳಲಿದ್ದಾರೆ.
ಇನ್ನು ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದರು. ಇದೀಗ ನೇಪಾಳ ವಿರುದ್ಧ ಬುಮ್ರಾ ಅಲಭ್ಯರಾಗಿರುವ ಕಾರಣ ಮೊಹಮ್ಮದ್ ಶಮಿ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕೆಎಲ್ ರಾಹುಲ್ ತಂಡಕ್ಕೆ ಎಂಟ್ರಿ:
ಕೆಎಲ್ ರಾಹುಲ್ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಈ ಬಾರಿಯ ಏಷ್ಯಾಕಪ್ಗೆ ಆಯ್ಕೆಯಾಗಿದ್ದ ರಾಹುಲ್ ಫಿಟ್ನೆಸ್ ಸಮಸ್ಯೆಯ ಕಾರಣ ಶ್ರೀಲಂಕಾಗೆ ತೆರಳಿರಲಿಲ್ಲ. ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಿಂದ ಫಿಟ್ನೆಸ್ ಕ್ಲಿಯರೆನ್ಸ್ ಪಡೆದಿದ್ದು, ಹೀಗಾಗಿ ಸೋಮವಾರ ಅವರು ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಏಷ್ಯಾಕಪ್ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
Published On - 8:15 pm, Sun, 3 September 23