T20 World Cup 2022: ಇಂಜುರಿ ನಡುವೆಯೂ ಟಿ20 ವಿಶ್ವಕಪ್​ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹಾರಲಿರುವ ಬುಮ್ರಾ..!

T20 World Cup 2022: ಇಂಜುರಿಗೊಂಡಿರುವ ಬುಮ್ರಾ ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ. ಬದಲಿಗೆ ವಿಶ್ರಾಂತಿ ಮಾತ್ರ ಬೇಕಾಗಿದ್ದು, ಅಕ್ಟೋಬರ್ 15 ರೊಳಗೆ ಬುಮ್ರಾ ಫಿಟ್ ಆದ್ದರೆ ಟಿ20 ವಿಶ್ವಕಪ್​ನಲ್ಲಿ ಆಡಿಸುವ ಯೋಜನೆಯನ್ನು ಬಿಸಿಸಿಐ ಹಾಕಿಕೊಂಡಿದೆ ಎಂದು ವರದಿಯಾಗಿದೆ.

T20 World Cup 2022: ಇಂಜುರಿ ನಡುವೆಯೂ ಟಿ20 ವಿಶ್ವಕಪ್​ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹಾರಲಿರುವ ಬುಮ್ರಾ..!
Jasprit Bumrah
Follow us
TV9 Web
| Updated By: ಪೃಥ್ವಿಶಂಕರ

Updated on: Sep 30, 2022 | 8:44 PM

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (T20 World Cup) ಆರಂಭಕ್ಕೆ 20 ದಿನಗಳಿಗಿಂತ ಕಡಿಮೆ ಸಮಯ ಉಳಿದಿದೆ. ಟೀಂ ಇಂಡಿಯಾ (Team India ) ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಆಡಲಿದ್ದು, ಅದಕ್ಕೂ ಮೊದಲು ಜಸ್ಪ್ರೀತ್ ಬುಮ್ರಾ (Jasprit Bumrah) ಗಾಯಗೊಂಡಿರುವುದು ತಂಡದ ತಲೆನೋವನ್ನು ಹೆಚ್ಚಿಸಿದೆ. ಹೀಗಾಗಿ ಬುಮ್ರಾ ವಿಶ್ವಕಪ್​ನಿಂದ ಹೊರಗುಳಿಯುತ್ತಾರೆ ಎಂಬ ವರದಿಗಳು ಈಗಾಗಲೇ ಹರಿದಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ ವಿಶ್ವಕಪ್‌ಗೂ ಮುನ್ನ ಚೇತರಿಸಿಕೊಳ್ಳಬಹುದೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ ಜಾಣ್ಮೆಯ ನಡೆ ಅನುಸರಿಸುತ್ತಿರುವ ಬಿಸಿಸಿಐ ಬುಮ್ರಾರನ್ನು ಟೀಂ ಇಂಡಿಯಾ ಜೊತೆ ಆಸ್ಟ್ರೇಲಿಯಾಕ್ಕೆ ಕಳುಹಿಸಲು ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ.

ಬುಮ್ರಾ ವಿಶ್ವಕಪ್‌ನಲ್ಲಿ ಆಡುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದಾಗ್ಯೂ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಉಳಿದ ಎರಡು ಪಂದ್ಯಗಳನ್ನು ಆಡಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು ಮಂಡಳಿಯು ಶುಕ್ರವಾರ ಬೆಳಿಗ್ಗೆ ತಿಳಿಸಿದೆ. ಅಲ್ಲದೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ವೈದ್ಯಕೀಯ ತಜ್ಞರು ಅವರನ್ನು ಪರೀಕ್ಷಿಸುತ್ತಿದ್ದು, ಆನಂತರವೇ ಬಿಸಿಸಿಐ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ.

ತಂಡದ ಜೊತೆ ಆಸ್ಟ್ರೇಲಿಯಾಕ್ಕೆ ಹಾರಲಿರುವ ಬುಮ್ರಾ ವಿಶ್ವಕಪ್‌ಗೆ ಮುನ್ನವೇ ಬುಮ್ರಾ ಈ ಸಮಸ್ಯೆಯಿಂದ ಹೊರಬರಲಿ ಎಂದು ಬಿಸಿಸಿಐ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇನ್ಸೈಡ್‌ಸ್ಪೋರ್ಟ್‌ನ ವರದಿ ಪ್ರಕಾರ, ಗಾಯದ ಹೊರತಾಗಿಯೂ ಬುಮ್ರಾ ಅವರನ್ನು ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಕಳುಹಿಸಲು ಬಿಸಿಸಿಐ ಚಿಂತಿಸಿದೆ ಎಂದು ಹೇಳಿದೆ.

ಈಗ ತಿಳಿದುಬಂದಿರುವ ಮಾಹಿತಿ ಪ್ರಕಾರ ಇಂಜುರಿಗೊಂಡಿರುವ ಬುಮ್ರಾ ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ. ಬದಲಿಗೆ ವಿಶ್ರಾಂತಿ ಮಾತ್ರ ಬೇಕಾಗಿದ್ದು, ಅಕ್ಟೋಬರ್ 15 ರೊಳಗೆ ಬುಮ್ರಾ ಫಿಟ್ ಆದ್ದರೆ ಟಿ20 ವಿಶ್ವಕಪ್​ನಲ್ಲಿ ಆಡಿಸುವ ಯೋಜನೆಯನ್ನು ಬಿಸಿಸಿಐ ಹಾಕಿಕೊಂಡಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 15 ರೊಳಗೆ ಬದಲಾವಣೆ ಸಾಧ್ಯ

ಟಿ20 ವಿಶ್ವಕಪ್ ತಂಡದೊಂದಿಗೆ ಬುಮ್ರಾ ಅವರನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸುವುದರೊಂದಿಗೆ ಒಂದು ವೇಳೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಬುಮ್ರಾ ಫಿಟ್ ಆದರೆ ಅವರನ್ನು ತಂಡದಲ್ಲಿ ಆಡಿಸುವ ಬಗ್ಗೆ ಬಿಸಿಸಿಐ ಚಿಂತಿಸಿದೆ. ಅಲ್ಲದೆ, ಅವರು ಆ ಹೊತ್ತಿಗೆ ಫಿಟ್ ಆಗದಿದ್ದರೆ, ಬದಲಿಯಾಗಿ ಇನ್ನೊಬ್ಬ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳುವ ಆಯ್ಕೆಯು ಮಂಡಳಿಗೆ ಯಾವಾಗಲೂ ಇರುತ್ತದೆ. ICC ನಿಯಮಗಳ ಪ್ರಕಾರ, ಅಕ್ಟೋಬರ್ 15 ರವರೆಗೆ, ಎಲ್ಲಾ ತಂಡಗಳು ಗಾಯದ ಸಂದರ್ಭದಲ್ಲಿ ತಮ್ಮ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದಾಗಿದೆ. ಅಲ್ಲದೆ ಇದಕ್ಕಾಗಿ ಪಂದ್ಯಾವಳಿಯ ಸಮಿತಿಯಿಂದ ಯಾವುದೇ ಅನುಮತಿ ಅಗತ್ಯವಿಲ್ಲ.

ಸಿರಾಜ್ ಕೂಡ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೂ ಹೋಗಲಿದ್ದಾರೆ

ಇದಲ್ಲದೆ, ಮೊಹಮ್ಮದ್ ಶಮಿ ಮತ್ತು ದೀಪಕ್ ಚಹಾರ್ ಒಳಗೊಂಡಿರುವ ತಂಡದೊಂದಿಗೆ ಸ್ಟ್ಯಾಂಡ್‌ಬೈ ಆಟಗಾರರನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಲು ಬಿಸಿಸಿಐ ಈಗಾಗಲೇ ನಿರ್ಧರಿಸಿದೆ. ವರದಿಯ ಪ್ರಕಾರ, ಈಗ ಮೊಹಮ್ಮದ್ ಸಿರಾಜ್ ಕೂಡ ಇದರಲ್ಲಿ ಸೇರಿದ್ದು, ಅವರು ಕೂಡ ಆಸ್ಟ್ರೇಲಿಯಾಕ್ಕೆ ಹೋಗುವ ತಂಡದಲ್ಲಿ ಭಾಗವಾಗಲಿದ್ದಾರೆ. ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಟಿ20 ಪಂದ್ಯಗಳಿಗೆ ಆಯ್ಕೆಗಾರರು ಸಿರಾಜ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದ್ದಾರೆ.

PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ