AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ್ಕರ್ ಕಿಂಗ್ ಐತಿಹಾಸಿಕ ಸಾಧನೆ; ಐಸಿಸಿ ವರ್ಷದ ಕ್ರಿಕೆಟಿಗನಾಗಿ ಜಸ್ಪ್ರೀತ್ ಬುಮ್ರಾ ಆಯ್ಕೆ

ICC men's Cricketer of the Year 2024: ಐಸಿಸಿಯ ವರ್ಷದ ಕ್ರಿಕೆಟಿಗವಾಗಿ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯ ರೇಸ್‌ನಲ್ಲಿ ಒಟ್ಟು ನಾಲ್ವರು ಆಟಗಾರರಿದ್ದವರು. ಅವರಲ್ಲಿ ಮೂವರನ್ನು ಹಿಂದಿಕ್ಕುವ ಮೂಲಕ ಜಸ್ಪ್ರೀತ್ ಬುಮ್ರಾ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಯಾರ್ಕರ್ ಕಿಂಗ್ ಐತಿಹಾಸಿಕ ಸಾಧನೆ; ಐಸಿಸಿ ವರ್ಷದ ಕ್ರಿಕೆಟಿಗನಾಗಿ ಜಸ್ಪ್ರೀತ್ ಬುಮ್ರಾ ಆಯ್ಕೆ
ಜಸ್ಪ್ರೀತ್ ಬುಮ್ರಾ
ಪೃಥ್ವಿಶಂಕರ
|

Updated on:Jan 28, 2025 | 6:26 PM

Share

ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು 2024 ರ ಐಸಿಸಿಯ ವರ್ಷದ ಕ್ರಿಕೆಟಿಗನಾಗಿ ಆಯ್ಕೆ ಮಾಡಲಾಗಿದೆ. 2024 ರಲ್ಲಿ ಅವರ ಅತ್ಯುತ್ತಮ ಪ್ರದರ್ಶನಕ್ಕಾಗಿ ಬುಮ್ರಾ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿ ರೇಸ್​ನಲ್ಲಿ ಬುಮ್ರಾ ಮಾತ್ರವಲ್ಲದೆ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್, ಇಂಗ್ಲೆಂಡ್‌ನ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಕೂಡ ಇದ್ದರು. ಆದರೆ ಬುಮ್ರಾ ಅವರೆಲ್ಲರನ್ನೂ ಹಿಂದಿಕ್ಕಿ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬುಮ್ರಾ ಈ ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಭಾರತದ ಐದನೇ ಆಟಗಾರನೆಂಬ ದಾಖಲೆ ಕೂಡ ನಿರ್ಮಿಸಿದ್ದಾರೆ. ಬುಮ್ರಾ ಅವರಿಗೂ ಮುನ್ನ ರಾಹುಲ್ ದ್ರಾವಿಡ್ (2004), ಸಚಿನ್ ತೆಂಡೂಲ್ಕರ್ (2010), ರವಿಚಂದ್ರನ್ ಅಶ್ವಿನ್ (2016) ಮತ್ತು ವಿರಾಟ್ ಕೊಹ್ಲಿ (2017, 2018) ಕೂಡ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಕಳೆದ ವರ್ಷ ಇಂಗ್ಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿ ಮತ್ತು ಟಿ20 ವಿಶ್ವಕಪ್‌ನಲ್ಲಿ ಭಾರತದ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬುಮ್ರಾ ಅವರನ್ನು ನಿನ್ನೆಯಷ್ಟೇ ವರ್ಷದ ಅತ್ಯುತ್ತಮ ಟೆಸ್ಟ್ ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಬುಮ್ರಾರನ್ನು ಐಸಿಸಿ ವರ್ಷದ ಪುರುಷ ಆಟಗಾರನಾಗಿಯೂ ಆಯ್ಕೆ ಮಾಡಲಾಗಿದೆ. ಅಂದರೆ ಒಂದೇ ವರ್ಷದಲ್ಲಿ ಬುಮ್ರಾ ಎರಡೆರಡು ಐಸಿಸಿ ಪ್ರಶಸ್ತಿ ಗೆದ್ದ ದಾಖಲೆ ಕೂಡ ನಿರ್ಮಿಸಿದ್ದಾರೆ.

2024 ರಲ್ಲಿ ಬುಮ್ರಾ ಮುಟ್ಟಿದ್ದೇಲ್ಲ ಚಿನ್ನ

2024 ರ ವರ್ಷವು ಜಸ್ಪ್ರೀತ್ ಬುಮ್ರಾ ಅವರಿಗೆ ಬಹಳ ಸ್ಮರಣೀಯವಾಗಿದೆ. ಕಳೆದ ವರ್ಷ ಯಾವುದೇ ಏಕದಿನ ಪಂದ್ಯವನ್ನಾಡದ ಬುಮ್ರಾ ಟೆಸ್ಟ್ ಮತ್ತು ಟಿ20 ಮಾದರಿಯಲ್ಲಿ ಅತ್ಯಂತ ಯಶಸ್ವಿ ಬೌಲರ್ ಆಗಿದ್ದರು. 17 ವರ್ಷಗಳ ನಂತರ ಟೀಂ ಇಂಡಿಯಾ ಟಿ20 ವಿಶ್ವಕಪ್ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಬುಮ್ರಾ, ಇಡೀ ಪಂದ್ಯಾವಳಿಯಲ್ಲಿ ಕೇವಲ 4.17 ರ ಎಕಾನಮಿಯಲ್ಲಿ 15 ವಿಕೆಟ್​ಗಳನ್ನು ಉರುಳಿಸಿದ್ದರು. ಅಲ್ಲದೆ ಟೂರ್ನಿಯಲ್ಲಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್​​ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರು.

ಮತ್ತೊಂದೆಡೆ, ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಟೆಸ್ಟ್‌ನಲ್ಲಿ ಅತ್ಯಂತ ಯಶಸ್ವಿ ಬೌಲರ್ ಆಗಿದ್ದರು. 2024 ರಲ್ಲಿ ಒಟ್ಟು 13 ಟೆಸ್ಟ್ ಪಂದ್ಯಗಳನ್ನು ಆಡಿದ ಬುಮ್ರಾ 14.92 ಸರಾಸರಿಯಲ್ಲಿ 71 ವಿಕೆಟ್ ಪಡೆದಿದ್ದರು. ಈ ಮೂಲಕ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದರು. ತವರಿನಲ್ಲಿ ನಡೆದಿದ್ದ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದ ಗೆಲುವಿನಲ್ಲಿ ಬುಮ್ರಾ ಪ್ರಮುಖ ಪಾತ್ರ ವಹಿಸಿದ್ದರು. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಪ್ರವಾಸದಲ್ಲಿಯೂ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದರು.

2 ಐಸಿಸಿ ಪ್ರಶಸ್ತಿ ಗೆದ್ದ ಬುಮ್ರಾ

ಕಳೆದ ವರ್ಷದ ಅತ್ಯುತ್ತಮ ಪ್ರದರ್ಶನಕ್ಕಾಗಿ ಜಸ್ಪ್ರೀತ್ ಬುಮ್ರಾ ಅವರು ಐಸಿಸಿ ವರ್ಷದ ಕ್ರಿಕೆಟಿಗ ಮತ್ತು ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ವೇಗದ ಬೌಲರ್ ಒಬ್ಬರು ಈ ಐಸಿಸಿ ಪ್ರಶಸ್ತಿಗಳನ್ನು ಗೆದ್ದಿರುವುದು ಇದೇ ಮೊದಲು. ಅದೇ ಸಮಯದಲ್ಲಿ, ಬುಮ್ರಾ ಒಂದು ವರ್ಷದಲ್ಲಿ 2 ಐಸಿಸಿ ಪ್ರಶಸ್ತಿಗಳನ್ನು ಗೆದ್ದ ವಿಶ್ವದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:14 pm, Tue, 28 January 25

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ