AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸ್ಟಾರ್ ಆಟಗಾರ ರಿಎಂಟ್ರಿ: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ ಖಚಿತ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 3-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಮೂಲಕ ಕೊನೆಯ ಪಂದ್ಯಕ್ಕೂ ಮುನ್ನ ಸರಣಿಯನ್ನು ವಶಪಡಿಸಿಕೊಂಡಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಕೊನೆಯ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯ.

IND vs ENG: ಸ್ಟಾರ್ ಆಟಗಾರ ರಿಎಂಟ್ರಿ: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ ಖಚಿತ
Team India
TV9 Web
| Updated By: ಝಾಹಿರ್ ಯೂಸುಫ್|

Updated on: Feb 28, 2024 | 10:22 AM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5ನೇ ಟೆಸ್ಟ್ ಪಂದ್ಯ ಮಾರ್ಚ್ 7 ರಿಂದ ಶುರುವಾಗಲಿದೆ. ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಜಸ್​ಪ್ರೀತ್ ಬುಮ್ರಾ ಲಭ್ಯರಿರಲಿದ್ದಾರೆ. ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಪಡೆದಿದ್ದರು.

ಇದೀಗ ಕೊನೆಯ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವುದು ಖಚಿತವಾಗಿದೆ. ಹೀಗಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರಲಿದೆ. ಇಲ್ಲಿ ಬುಮ್ರಾ ರಿಎಂಟ್ರಿಯಿಂದಾಗಿ ಮೊಹಮ್ಮದ್ ಸಿರಾಜ್ ಹೊರಗುಳಿಯುವ ಸಾಧ್ಯತೆಯಿದೆ.

ಏಕೆಂದರೆ ಜಸ್​ಪ್ರೀತ್ ಬುಮ್ರಾ ಅವರ ಸ್ಥಾನದಲ್ಲಿ ನಾಲ್ಕನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಕಾಶ್ ದೀಪ್ 3 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ಹೀಗಾಗಿ ಅಂತಿಮ ಪಂದ್ಯದಲ್ಲೂ ಅವರನ್ನೇ ಮುಂದುವರೆಸುವ ಸಾಧ್ಯತೆಯಿದೆ. ಅಲ್ಲದೆ ಇದೇ ವೇಳೆ ಸಿರಾಜ್​ಗೆ ವಿಶ್ರಾಂತಿ ನೀಡಬಹುದು.

ಕೆಎಲ್ ರಾಹುಲ್ ಡೌಟ್:

ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲೂ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಅನುಮಾನ. ತೊಡೆಸಂಧು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಾಹುಲ್ ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಲಂಡನ್​ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯದಲ್ಲೂ ಅವರು ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

ಮೊದಲ ಟೆಸ್ಟ್ ಪಂದ್ಯದ ವೇಳೆ ತೊಡೆಸಂಧು ನೋವಿನ ಸಮಸ್ಯೆಗೆ ಒಳಗಾಗಿದ್ದ ರಾಹುಲ್ ಉಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದಾಗ್ಯೂ ಐದನೇ ಪಂದ್ಯದ ವೇಳೆ ಅವರು ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಲಂಡನ್​ಗೆ ಚಿಕಿತ್ಸೆಗೆ ತೆರಳಿರುವ ಕಾರಣ ಅವರು ಧರ್ಮಶಾಲಾದಲ್ಲಿ ನಡೆಯಲಿರುವ ಕೊನೆಯ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

ಬದಲಿ ಆಟಗಾರ ಯಾರು?

ಕೆಎಲ್ ರಾಹುಲ್ ಅವರ ಬದಲಿ ಆಟಗಾರನಾಗಿ ಈಗಾಗಲೇ ದೇವದತ್ ಪಡಿಕ್ಕಲ್ ಟೀಮ್ ಇಂಡಿಯಾದಲ್ಲಿದ್ದಾರೆ. ಹೀಗಾಗಿ ಕೊನೆಯ ಟೆಸ್ಟ್ ಪಂದ್ಯದಲ್ಲಿ ಪಡಿಕ್ಕಲ್​ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಏಕೆಂದರೆ 3 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ರಜತ್ ಪಾಟಿದಾರ್ ಸಂಪೂರ್ಣ ವಿಫಲರಾಗಿದ್ದಾರೆ. ಹಾಗಾಗಿ ಅವರ ಬದಲಿಗೆ ದೇವದತ್ ಪಡಿಕ್ಕಲ್ ಅವರನ್ನು ಐದನೇ ಪಂದ್ಯದಲ್ಲಿ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ

ಸರಣಿ ಗೆದ್ದಿರುವ ಟೀಮ್ ಇಂಡಿಯಾ:

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಈ ಮೂಲಕ ಕೊನೆಯ ಪಂದ್ಯಕ್ಕೂ ಮುನ್ನವೇ ಭಾರತ ತಂಡ ಸರಣಿ ಗೆದ್ದುಕೊಂಡಿದೆ.

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್, ದೇವದತ್ ಪಡಿಕ್ಕಲ್, ಜಸ್​ಪ್ರೀತ್ ಬುಮ್ರಾ.

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ