Jasprit Bumrah: ದೇಶದ ಪರ ಅಲ್ಲ… ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಬುಮ್ರಾ..!

Jasprit Bumrah: ಐಪಿಎಲ್ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಲಿದ್ದಾರೆ ಎಂಬುದು ಈಗ ಹರಿದಾಡುತ್ತಿರುವ ತಾಜಾ ಸುದ್ದಿಯಾಗಿದೆ.

Jasprit Bumrah: ದೇಶದ ಪರ ಅಲ್ಲ... ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಬುಮ್ರಾ..!
ಜಸ್ಪ್ರೀತ್ ಬುಮ್ರಾImage Credit source: insidesport
Follow us
ಪೃಥ್ವಿಶಂಕರ
|

Updated on:Feb 20, 2023 | 1:53 PM

ಕಳೆದ 6- 7 ತಿಂಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿರುವ ಟೀಂ ಇಂಡಿಯಾ (Team India) ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಯಾವಾಗ ತಂಡಕ್ಕೆ ಪುನರಾಗಮನ ಮಾಡುತ್ತಾರೆ ಎಂಬುದು ಬಹುದಿನಗಳಿಂದ ಕೇಳಿಬರುತ್ತಿರುವ ಪ್ರಶ್ನೆಯಾಗಿದೆ. ಇಂಜುರಿಯಿಂದಾಗಿ ಬುಮ್ರಾ, ಟಿ20 ವಿಶ್ವಕಪ್‌ನಿಂದಲೂ (T20 World Cup ) ಹೊರಗುಳಿದಿದ್ದರು. ಅದರ ನಂತರ, ಶ್ರೀಲಂಕಾ, ನ್ಯೂಜಿಲೆಂಡ್ ವಿರುದ್ಧದ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿಯೂ ಬುಮ್ರಾ ಆಡಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಜಸ್ಪ್ರೀತ್ ಬುಮ್ರಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಹೇಳಲಾಗಿತ್ತು. ಆದರೆ ಮೊದಲ ಎರಡು ಟೆಸ್ಟ್‌ಗಳಿಗೆ ಬುಮ್ರಾ ಆಯ್ಕೆಯಾಗಿರಲಿಲ್ಲ. ಉಳಿದ ಎರಡು ಟೆಸ್ಟ್‌ಗಳು ಮತ್ತು ನಂತರದ ಮೂರು ಪಂದ್ಯಗಳ ಏಕದಿನ ಸರಣಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಹಾಗಾದರೆ ಜಸ್ಪ್ರೀತ್ ಬುಮ್ರಾ ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಬುಮ್ರಾ ಎಂಟ್ರಿ ಯಾವಾಗ?

ಐಪಿಎಲ್ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಲಿದ್ದಾರೆ ಎಂಬುದು ಈಗ ಹರಿದಾಡುತ್ತಿರುವ ತಾಜಾ ಸುದ್ದಿಯಾಗಿದೆ. ಜಸ್ಪ್ರೀತ್ ಬುಮ್ರಾ ಐಪಿಎಲ್​ನಲ್ಲಿ ಮುಂಬೈ ಪರ ಬೌಲಿಂಗ್ ಮಾಡಲಿದ್ದಾರೆ ಎಂದು ಇನ್ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಜಸ್ಪ್ರೀತ್ ಬುಮ್ರಾ ಅವರ ಕೆಲಸದ ಹೊರೆಯನ್ನು ಹೇಗೆ ನಿರ್ವಹಿಸುವುದು ಎಂಬುದು ಒಂದು ಪ್ರಮುಖ ವಿಷಯವಾಗಿದೆ. ಐಪಿಎಲ್ ನಂತರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಬರಲಿದ್ದು, ಆ ಬಳಿಕ ಏಕದಿನ ವಿಶ್ವಕಪ್ ಕೂಡ ನಡೆಯಲಿದೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ಈ ಮಹತ್ವದ ಪಂದ್ಯಾವಳಿಗೆ ಫಿಟ್ ಆಗುವುದು ಅವಶ್ಯಕವಾಗಿದೆ.

IND vs SL: ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರಬಿದ್ದಿದ್ಯಾಕೆ? ಅಧಿಕೃತ ಮಾಹಿತಿ ನೀಡಿದ ಬಿಸಿಸಿಐ

ಮುಂಬೈ ಇಂಡಿಯನ್ಸ್ ಷರತ್ತು ಒಪ್ಪುತ್ತದೆಯೇ?

ಕೆಲಸದ ಹೊರೆ ನಿರ್ವಹಣೆಯಲ್ಲಿ ಮುಂಬೈ ಇಂಡಿಯನ್ಸ್, ಜಸ್ಪ್ರೀತ್ ಬುಮ್ರಾ ಅವರ ಷರತ್ತುಗಳನ್ನು ಒಪ್ಪಿಕೊಳ್ಳುತ್ತದೆಯೇ? ಇದು ಮುಖ್ಯ ಪ್ರಶ್ನೆಯಾಗಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ಜಸ್ಪ್ರೀತ್ ಬುಮ್ರಾಗೆ ವರ್ಷಕ್ಕೆ 12 ಕೋಟಿ ರೂ. ಸಂಭಾವನೆ ನೀಡುತ್ತಿದೆ. ಹೀಗಾಗಿ ಅತ್ಯಂತ ದುಬಾರಿ ಆಟಗಾರನನ್ನು ಕೇವಲ ಬೆಂಚ್ ಮೇಲೆ ಕುಳಿಸಲು ಮುಂಬೈ ಒಪ್ಪುವುದಾ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಎನ್​ಸಿಎ ಇಂದ ಗ್ರೀನ್ ಸಿಗ್ನಲ್?

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಜಸ್ಪ್ರೀತ್ ಬುಮ್ರಾಗೆ ಯಾವುದೇ ಟೂರ್ನಿಯಲ್ಲಿ ಆಡಲು ಅವಕಾಶ ನೀಡಿಲ್ಲ ಎಂದು Cricbuzz ವರದಿ ಮಾಡಿದೆ. ಅಲ್ಲದೆ ಜಸ್ಪ್ರೀತ್ ಬುಮ್ರಾ ಬೆಂಗಳೂರಿನಲ್ಲಿ ಕೆಲವು ಅಭ್ಯಾಸ ಪಂದ್ಯಗಳನ್ನು ಆಡಲಿದ್ದಾರೆ ಎಂದು ವದಂತಿಗಳಿವೆ. ಆದರೆ NCA ಅವರಿಗೆ ಅಂತಹ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ.

ಬಿಸಿಸಿಐ ಮುಂದಿನ ನಡೆ ಏನು?

ಜಸ್ಪ್ರೀತ್ ಬುಮ್ರಾ ಅವರಿಗೆ ಐಪಿಎಲ್‌ನಲ್ಲಿ ಆಡಲು ಅವಕಾಶ ನೀಡಲಾಗುವುದು. ಆದರೆ ತಂಡದ ಮ್ಯಾನೇಜ್‌ಮೆಂಟ್ ಅವರ ಕೆಲಸದ ಹೊರೆಯ ಮೇಲೆ ಕಣ್ಣಿಟ್ಟಿರುತ್ತದೆ. ಐಪಿಎಲ್‌ನಲ್ಲಿ ಕೆಲವು ವಿದೇಶಿ ಮಂಡಳಿಗಳು ತಮ್ಮ ಆಟಗಾರರಿಗೆ ವಿಶೇಷ ನಿಯಮಗಳ ಮೇಲೆ ಎನ್‌ಒಸಿ ನೀಡುತ್ತವೆ. ಇದರಡಿಯಲ್ಲಿ ಬೌಲರ್‌ಗಳು ನೆಟ್ಸ್‌ನಲ್ಲಿ 24 ಎಸೆತಗಳಿಗಿಂತ ಹೆಚ್ಚು ಬೌಲ್ ಮಾಡುವಂತಿಲ್ಲ. ಹಾಗೆಯೇ ಆಟಗಾರರ ಫಿಟ್ನೆಸ್ ಅನ್ನು ಕೂಡ ನಿಯಮಿತವಾಗಿ ಪರಿಶೀಲಿಸಲಾಗುತ್ತದೆ. ಹೀಗಾಗಿ ಈ ಬಾರಿಯ ಐಪಿಎಲ್‌ನಲ್ಲೂ ಬಿಸಿಸಿಐ ಅದೇ ತಂತ್ರವನ್ನು ಬಳಸುವ ಸಾಧ್ಯತೆಗಳಿವೆ. ಇದು ಎಲ್ಲ ಬೌಲರ್​ಗಳಿಗೂ ಅಲ್ಲದಿದ್ದರೂ, ಆದರೆ ಬುಮ್ರಾಗೆ ಕೆಲವು ಷರತ್ತುಗಳನ್ನು ಹಾಕಬಹುದು. ಆದರೆ ಮುಂಬೈ ಇಂಡಿಯನ್ಸ್ ಈ ಷರತ್ತುಗಳನ್ನು ಒಪ್ಪಿಕೊಳ್ಳುತ್ತಾ ಎಂಬುದನ್ನು ಕಾದುನೋಡಬೇಕಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Mon, 20 February 23

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ