AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಬುಮ್ರಾ ಗಾಯದ ಹೊಸ ಅಪ್​ಡೇಟ್: ಟೀಮ್ ಇಂಡಿಯಾಗೆ ಮತ್ತೆ ನಿರಾಸೆ..!

India Squad For T20 World Cup 2022: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್

Jasprit Bumrah: ಬುಮ್ರಾ ಗಾಯದ ಹೊಸ ಅಪ್​ಡೇಟ್: ಟೀಮ್ ಇಂಡಿಯಾಗೆ ಮತ್ತೆ ನಿರಾಸೆ..!
Jasprit Bumrah
TV9 Web
| Edited By: |

Updated on: Oct 01, 2022 | 1:54 PM

Share

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಬೆನ್ನು ನೋವಿನ ಕಾರಣ ಈಗಾಗಲೇ ತಂಡದಿಂದ ಹೊರಬಿದ್ದಿದ್ದಾರೆ. ಸದ್ಯ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಟೆಸ್ಟ್​ನಲ್ಲಿರುವ ಬುಮ್ರಾ, ಟೀಮ್ ಇಂಡಿಯಾ ಜೊತೆ ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತೆರಳುವುದಿಲ್ಲ ಎಂಬುದು ಕೂಡ ಖಚಿತವಾಗಿದೆ. ಟಿ20 ವಿಶ್ವಕಪ್​ಗಾಗಿ ಭಾರತ ತಂಡವು ಅಕ್ಟೋಬರ್ 5 ರಂದು ಕಾಂಗರೂನಾಡಿಗೆ ತೆರಳಲಿದೆ. ಆದರೆ ಈ ವೇಳೆಗೆ ಬುಮ್ರಾ ಚೇತರಿಸಿಕೊಳ್ಳುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಬುಮ್ರಾ ಅವರನ್ನು ತಂಡದಿಂದ ಕೈಬಿಟ್ಟು ಉಳಿದ ಆಟಗಾರರನ್ನು ಟಿ20 ವಿಶ್ವಕಪ್​ಗೆ ಕಳುಹಿಸಲು ಬಿಸಿಸಿಐ ಮುಂದಾಗಿದೆ.  ಸದ್ಯ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಬುಮ್ರಾ ಅವರ ಬದಲಿ ವೇಗಿಯಾಗಿ ಆಯ್ಕೆಯಾಗಿರುವ ಮೊಹಮ್ಮದ್ ಸಿರಾಜ್ ಅವರನ್ನೂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಇದಾಗ್ಯೂ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯ ಆಡುವುದು ಅಕ್ಟೋಬರ್ 23 ರಂದು. ಅದುವರೆಗೆ ಬುಮ್ರಾ ಅವರ ಫಿಟ್​ನೆಸ್​ ಮೇಲೆ ನಿಗಾಯಿಡುವಂತೆ ವೈದ್ಯರಿಗೆ ಸೂಚಿಸಲಾಗಿದೆ.

ಒಂದು ವೇಳೆ ಅವರು ಭಾರತದ ಆರಂಭಿಕ ಪಂದ್ಯಗಳ ಸಮಯದಲ್ಲಿ ಚೇತರಿಸಿಕೊಳ್ಳಲಿದ್ದಾರೆ ಎಂದು ಕಂಡುಬಂದರೆ ಟಿ20 ವಿಶ್ವಕಪ್​ಗೆ ಬದಲಿ ಆಟಗಾರನನ್ನು ಆಯ್ಕೆ ಮಾಡುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬದಲಾಗಿ ಟಿ20 ವಿಶ್ವಕಪ್​ ನಡುವೆ ಜಸ್​ಪ್ರೀತ್ ಬುಮ್ರಾ ಅವರನ್ನು ತಂಡಕ್ಕೆ ಸೇರಿಕೊಳ್ಳಲು ಪ್ಲ್ಯಾನ್ ರೂಪಿಸಲಿದೆ. ಇದೇ ಕಾರಣದಿಂದಾಗಿ ಟಿ20 ವಿಶ್ವಕಪ್​ನಿಂದ ಬುಮ್ರಾ ಇನ್ನೂ ಕೂಡ ಹೊರಬಿದ್ದಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದರು.

ಹೀಗಾಗಿ ಟಿ20 ವಿಶ್ವಕಪ್​ನಲ್ಲಿನ ಆರಂಭಿಕ ಪಂದ್ಯಗಳವರೆಗೂ ಕಾದು ನೋಡುವ ತಂತ್ರಕ್ಕೆ ಬಿಸಿಸಿಐ ಮುಂದಾಗಿದೆ. ಆ ವೇಳೆ ಜಸ್​ಪ್ರೀತ್ ಬುಮ್ರಾ ಚೇತರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ. ಮತ್ತೊಂದೆಡೆ ಜಸ್​ಪ್ರೀತ್ ಬುಮ್ರಾ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು, ಕನಿಷ್ಠ 1 ತಿಂಗಳ ವಿಶ್ರಾಂತಿ ಬೇಕಾಗಬಹುದು ಎಂದು ವರದಿಯಾಗಿದೆ. ಅಂದರೆ ಅಕ್ಟೋಬರ್ 23 ರ ಬಳಿಕವಷ್ಟೇ ಜಸ್​ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ಆಡಲಿದ್ದಾರಾ ಅಥವಾ ಇಲ್ಲವಾ ಎಂಬುದು ನಿರ್ಧಾರವಾಗಲಿದೆ.

ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೀಗಿದೆ:

 ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್,  ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ*.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್

Follow Us
TV9 Web
TV9 Web

TV9 Kannada

Read More
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ