ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಬೆನ್ನು ನೋವಿನ ಕಾರಣ ಈಗಾಗಲೇ ತಂಡದಿಂದ ಹೊರಬಿದ್ದಿದ್ದಾರೆ. ಸದ್ಯ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ನೆಸ್ ಟೆಸ್ಟ್ನಲ್ಲಿರುವ ಬುಮ್ರಾ, ಟೀಮ್ ಇಂಡಿಯಾ ಜೊತೆ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತೆರಳುವುದಿಲ್ಲ ಎಂಬುದು ಕೂಡ ಖಚಿತವಾಗಿದೆ. ಟಿ20 ವಿಶ್ವಕಪ್ಗಾಗಿ ಭಾರತ ತಂಡವು ಅಕ್ಟೋಬರ್ 5 ರಂದು ಕಾಂಗರೂನಾಡಿಗೆ ತೆರಳಲಿದೆ. ಆದರೆ ಈ ವೇಳೆಗೆ ಬುಮ್ರಾ ಚೇತರಿಸಿಕೊಳ್ಳುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಬುಮ್ರಾ ಅವರನ್ನು ತಂಡದಿಂದ ಕೈಬಿಟ್ಟು ಉಳಿದ ಆಟಗಾರರನ್ನು ಟಿ20 ವಿಶ್ವಕಪ್‌ಗೆ ಕಳುಹಿಸಲು ಬಿಸಿಸಿಐ ಮುಂದಾಗಿದೆ. ಸದ್ಯ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಬುಮ್ರಾ ಅವರ ಬದಲಿ ವೇಗಿಯಾಗಿ ಆಯ್ಕೆಯಾಗಿರುವ ಮೊಹಮ್ಮದ್ ಸಿರಾಜ್ ಅವರನ್ನೂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಇದಾಗ್ಯೂ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯ ಆಡುವುದು ಅಕ್ಟೋಬರ್ 23 ರಂದು. ಅದುವರೆಗೆ ಬುಮ್ರಾ ಅವರ ಫಿಟ್ನೆಸ್ ಮೇಲೆ ನಿಗಾಯಿಡುವಂತೆ ವೈದ್ಯರಿಗೆ ಸೂಚಿಸಲಾಗಿದೆ.
ಒಂದು ವೇಳೆ ಅವರು ಭಾರತದ ಆರಂಭಿಕ ಪಂದ್ಯಗಳ ಸಮಯದಲ್ಲಿ ಚೇತರಿಸಿಕೊಳ್ಳಲಿದ್ದಾರೆ ಎಂದು ಕಂಡುಬಂದರೆ ಟಿ20 ವಿಶ್ವಕಪ್‌ಗೆ ಬದಲಿ ಆಟಗಾರನನ್ನು ಆಯ್ಕೆ ಮಾಡುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬದಲಾಗಿ ಟಿ20 ವಿಶ್ವಕಪ್ ನಡುವೆ ಜಸ್ಪ್ರೀತ್ ಬುಮ್ರಾ ಅವರನ್ನು ತಂಡಕ್ಕೆ ಸೇರಿಕೊಳ್ಳಲು ಪ್ಲ್ಯಾನ್ ರೂಪಿಸಲಿದೆ. ಇದೇ ಕಾರಣದಿಂದಾಗಿ ಟಿ20 ವಿಶ್ವಕಪ್ನಿಂದ ಬುಮ್ರಾ ಇನ್ನೂ ಕೂಡ ಹೊರಬಿದ್ದಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದರು.
ಹೀಗಾಗಿ ಟಿ20 ವಿಶ್ವಕಪ್ನಲ್ಲಿನ ಆರಂಭಿಕ ಪಂದ್ಯಗಳವರೆಗೂ ಕಾದು ನೋಡುವ ತಂತ್ರಕ್ಕೆ ಬಿಸಿಸಿಐ ಮುಂದಾಗಿದೆ. ಆ ವೇಳೆ ಜಸ್ಪ್ರೀತ್ ಬುಮ್ರಾ ಚೇತರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ. ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು, ಕನಿಷ್ಠ 1 ತಿಂಗಳ ವಿಶ್ರಾಂತಿ ಬೇಕಾಗಬಹುದು ಎಂದು ವರದಿಯಾಗಿದೆ. ಅಂದರೆ ಅಕ್ಟೋಬರ್ 23 ರ ಬಳಿಕವಷ್ಟೇ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ಆಡಲಿದ್ದಾರಾ ಅಥವಾ ಇಲ್ಲವಾ ಎಂಬುದು ನಿರ್ಧಾರವಾಗಲಿದೆ.
ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ*.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್