
ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಇಂಗ್ಲೆಂಡ್ ಪ್ರವಾಸವನ್ನು ಅತ್ಯುತ್ತಮ ರೀತಿಯಲ್ಲಿ ಆರಂಭಿಸಿದರು. ಆದರೆ ಈ ಸರಣಿಯಲ್ಲಿ ಅವರ ಪ್ರದರ್ಶನದಲ್ಲಿ ಸ್ಥಿರತೆ ಕಂಡುಬರದಿರುವುದು ತಂಡದ ಸೋಲಿಗೆ ಮತ್ತೊಂದು ಕಾರಣ ಎನ್ನಬಹುದು. ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ತೋರಿದ ತೀಕ್ಷ್ಣತೆಯನ್ನು ಇಂಗ್ಲೆಂಡ್ನಲ್ಲಿ ತೋರಿಸಲು ಬುಮ್ರಾಗೆ ಸಾಧ್ಯವಾಗಿಲ್ಲ. ವಿಶೇಷವಾಗಿ ಸರಣಿಯ ನಾಲ್ಕನೇ ಪಂದ್ಯದಲ್ಲಿ, ಬುಮ್ರಾ ಸಂಪೂರ್ಣವಾಗಿ ಲಯದಲ್ಲಿ ಕಾಣಲಿಲ್ಲ. ಇದಕ್ಕೆ ಉದಾಹರಣೆಯಾಗಿ ಮ್ಯಾಂಚೆಸ್ಟರ್ ಟೆಸ್ಟ್‌ನ (Manchester Test) ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ 100 ಕ್ಕೂ ಹೆಚ್ಚು ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ತಮ್ಮ 7 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಬೇಡದ ಶತಕವನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.
ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ನಾಲ್ಕನೇ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿಗಳ ಪ್ರದರ್ಶನ ಹೇಳಿಕೊಳ್ಳುವಂತಿಲ್ಲ. ಇದರ ಲಾಭ ಪಡೆದಿರುವ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 200 ಕ್ಕೂ ಹೆಚ್ಚು ರನ್‌ಗಳ ಮುನ್ನಡೆ ಪಡೆದುಕೊಂಡಿದೆ. ಇತ್ತ ಟೀಂ ಇಂಡಿಯಾದ ಪ್ರತಿಯೊಬ್ಬ ಬೌಲರ್‌ಗಳು ಕೂಡ ಸರಾಗವಾಗಿ ರನ್ ಬಿಟ್ಟುಕೊಟ್ಟಿದ್ದಾರೆ. ಅದರಲ್ಲೂ ರನ್ ನೀಡುವುದಕ್ಕೆ ಜಿಪುಣತನ ತೋರುವ ಬುಮ್ರಾ ಕೂಡ ಈ ಪಂದ್ಯದಲ್ಲಿ ಲಯ ಕಳೆದುಕೊಂಡಿದ್ದಾರೆ.
ಈ ಸರಣಿಯನ್ನು ಉತ್ತಮವಾಗಿ ಆರಂಭಿಸಿದ್ದ ಬುಮ್ರಾ ಲೀಡ್ಸ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲೇ 5 ವಿಕೆಟ್‌ಗಳನ್ನು ಕಬಳಿಸಿದರು. ನಂತರ ಲಾರ್ಡ್ಸ್ ಟೆಸ್ಟ್‌ನಲ್ಲಿಯೂ ಬುಮ್ರಾ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಕಬಳಿಸಿದರು. ಆದರೆ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಬುಮ್ರಾ ಲಯದಲ್ಲಿ ಕಾಣಿಸಿಕೊಳ್ಳಲಿಲ್ಲ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಮ್ಮ ಖೋಟಾದ 32 ನೇ ಓವರ್ ಬೌಲ್ ಮಾಡಿದ ಬುಮ್ರಾ 1 ರನ್ ಬಿಟ್ಟುಕೊಡುವ ಮೂಲಕ 100 ರನ್‌ಗಳನ್ನು ಪೂರೈಸಿದರು.
ಇದರೊಂದಿಗೆ, ಬುಮ್ರಾ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಈ ಅನಗತ್ಯ ಶತಕವನ್ನು ದಾಖಲಿಸಿದರು. 2018 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಬುಮ್ರಾ ಇದುವರೆಗೆ ಒಂದೇ ಇನ್ನಿಂಗ್ಸ್‌ನಲ್ಲಿ 100 ರನ್‌ಗಳನ್ನು ಬಿಟ್ಟುಕೊಟ್ಟಿರಲಿಲ್ಲ. ಇದಕ್ಕೂ ಮೊದಲು ಡಿಸೆಂಬರ್ 2024 ರಲ್ಲಿ, ಅವರು ಮೆಲ್ಬೋರ್ನ್ ಟೆಸ್ಟ್‌ನಲ್ಲಿ 99 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು, ಇದು ಅವರ ಕೆಟ್ಟ ಪ್ರದರ್ಶನವಾಗಿತ್ತು. ಆದರೆ ಇದೀಗ ಬುಮ್ರಾ ತಮ್ಮ 48 ನೇ ಟೆಸ್ಟ್ ಪಂದ್ಯದ 91 ನೇ ಇನ್ನಿಂಗ್ಸ್‌ನಲ್ಲಿ 100 ರನ್‌ಗಳನ್ನು ಬಿಟ್ಟುಕೊಟ್ಟಿದ್ದು ಅನಗತ್ಯ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.
IND vs ENG: 7 ರಲ್ಲಿ 5 ಬಾರಿ ವಿಫಲ; ಹೊಸ ಚೆಂಡಿನಲ್ಲಿ ಪರಿಣಾಮಕಾರಿಯಾಗದ ಬುಮ್ರಾ..!
ಅಂದಹಾಗೆ ಮ್ಯಾಂಚೆಸ್ಟರ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ ಮಾತ್ರವಲ್ಲದೆ, ಮೊಹಮ್ಮದ್ ಸಿರಾಜ್ ಕೂಡ ಈ ಇನ್ನಿಂಗ್ಸ್‌ನಲ್ಲಿ 100 ಕ್ಕೂ ಹೆಚ್ಚು ರನ್‌ಗಳನ್ನು ಬಿಟ್ಟುಕೊಟ್ಟರು. ಅವರಲ್ಲದೆ, ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಕೂಡ ಈ ಇನ್ನಿಂಗ್ಸ್‌ನಲ್ಲಿ 100 ಕ್ಕೂ ಹೆಚ್ಚು ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:05 pm, Sat, 26 July 25