Namo 1: ವಿಶ್ವಕಪ್ ಗೆದ್ದ ಖುಷಿಯಲ್ಲಿ ಪ್ರಧಾನಿ ಮೋದಿಗೆ ಬಂಪರ್ ಗಿಫ್ಟ್ ನೀಡಿದ ಬಿಸಿಸಿಐ

|

Updated on: Jul 04, 2024 | 5:21 PM

ಐಸಿಸಿ ಟಿ20 ವಿಶ್ವಕಪ್ 2024 ಗೆದ್ದ ಟೀಮ್ ಇಂಡಿಯಾ ಆಟಗಾರರು ತವರಿಗೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಸಭೆ ಕೂಡ ನಡೆಸಲಾಗಿದೆ. ಈ ಸಂದರ್ಭ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಜಯ್ ಶಾ ಅವರು ಮೋದಿ ಅವರಿಗೆ ‘ನಮೋ 1’ ಎಂದು ಬರೆಯದ ಜೆರ್ಸಿಯನ್ನು ಗಿಫ್ಟ್ ಮಾಡಿದ್ದಾರೆ.

Namo 1: ವಿಶ್ವಕಪ್ ಗೆದ್ದ ಖುಷಿಯಲ್ಲಿ ಪ್ರಧಾನಿ ಮೋದಿಗೆ ಬಂಪರ್ ಗಿಫ್ಟ್ ನೀಡಿದ ಬಿಸಿಸಿಐ
ಮೋದಿಗೆ ನಮೋ 1 ಜೆರ್ಸಿ ಗಿಫ್ಟ್
Follow us on

ಸುಮಾರು ಎಂಟು ತಿಂಗಳ ಹಿಂದೆ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೋಲು ಅನುಭವಿಸಬೇಕಾಯಿತು. ಫೈನಲ್‌ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿತು. ಡ್ರೆಸ್ಸಿಂಗ್ ರೂಂನಲ್ಲಿ ತೀವ್ರ ನಿರಾಸೆ ಅನುಭವಿಸಿದ ಭಾರತ ತಂಡದ ಆಟಗಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಸಭೆ ನಡೆಸಿದರು. ದುಃಖಿತ ಆಟಗಾರರಿಗೆ ಸಾಂತ್ವನ ಹೇಳಿದರು. ಆದರೆ, ಇಂದು ಚಿತ್ರಣ ಬದಲಾಗಿದೆ. ಟೀಮ್ ಇಂಡಿಯಾ ಬಾರ್ಬಡೋಸ್‌ಗೆ ತೆರಳಿ ಭಾರತದ ಧ್ವಜವನ್ನು ನೆಟ್ಟಿತು. 17 ವರ್ಷಗಳ ನಂತರ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿತು.

ಭಾರತದ ಪ್ರದರ್ಶನಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡ ದೆಹಲಿ ತಲುಪಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ. ಈ ವೇಳೆ ರೋಹಿತ್, ವಿರಾಟ್ ಸೇರಿದಂತೆ ಎಲ್ಲ ಆಟಗಾರರ ಜೊತೆ ಮೋದಿ ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಈ ಸಂದರ್ಶನದ ವಿಡಿಯೋ ಹೊರಬಂದಿದ್ದು, ಟ್ರೆಂಡಿಂಗ್ ಆಗಿದೆ. ಇದೇ ವೇಳೆ ಬಿಸಿಸಿಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶೇಷವಾಗಿ ಸನ್ಮಾನಿಸಿದೆ.

ಇದನ್ನೂ ಓದಿ: Team India Road Show Live: ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ

ನರೇಂದ್ರ ಮೋದಿ ಅವರಿಗೆ ಟೀಮ್ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡಲಾಯಿತು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ ‘ನಮೋ 1’ ಎಂದು ಬರೆದ ಜೆರ್ಸಿಯನ್ನು ಗಿಫ್ಟ್ ಮಾಡಿದ್ದಾರೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ವೈರಲ್ ಆಗುತ್ತಿದೆ.

ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡ ಇಂದು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದೆ. ”ಸರ್, ನಿಮ್ಮ ಸ್ಪೂರ್ತಿದಾಯಕ ಮಾತುಗಳು ಮತ್ತು ಟೀಮ್ ಇಂಡಿಯಾಗೆ ಅಮೂಲ್ಯವಾದ ಬೆಂಬಲಕ್ಕಾಗಿ ಧನ್ಯವಾದಗಳು. ಜೈ ಹಿಂದ್,” ಎಂದು ಬಿಸಿಸಿಐ ಟ್ವೀಟ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಭಾರತೀಯ ಆಟಗಾರರ ಭೇಟಿ ಕುರಿತು ಟ್ವೀಟ್ ಮಾಡಿದ್ದು, “ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ ನಡೆಸಲಾಯಿತು. ವಿಶ್ವಕಪ್ ವಿಜೇತ ತಂಡಕ್ಕೆ ಅಭೂತಪೂರ್ವ ಸ್ವಾಗತ,” ಎಂದು ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಟೀಮ್ ಇಂಡಿಯಾದ ವಿಜಯತ್ರ ಮರೈನ್ ಡ್ರೈವ್‌ನಿಂದ ಹೊರಡಲು ತಯಾರಾಗಿದೆ. ಕ್ರೀಡಾಭಿಮಾನಿಗಳು ಇದರಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ. ಅಲ್ಲದೆ, ವಾಂಖೆಡೆಗೆ ಉಚಿತ ಪ್ರವೇಶ ನೀಡಲಾಗಿದ್ದು, ಈಗಾಗಲೇ ಮೈದಾನವು ತುಂಬಿ ತುಳುಕುತ್ತಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಭಾರತೀಯ ಆಟಗಾರರನ್ನು ಸನ್ಮಾನಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಿಸಿಸಿಐ ಭಾರತ ತಂಡಕ್ಕೆ 125 ಕೋಟಿ ಬಹುಮಾನ ನೀಡಲಿದೆ.

ವರದಿ: ವಿನಯ್ ಭಟ್​

Published On - 5:20 pm, Thu, 4 July 24