45 ಅಭ್ಯಾಸ ಪಿಚ್​ಗಳು, ಹೊಸ NCA ಲೋಕಾರ್ಪಣೆಗೆ ಸಿದ್ಧ: ಜಯ್ ಶಾ

ದೇಶದಾದ್ಯಂತ ಹಲವಾರು ಕ್ರಿಕೆಟಿಗರನ್ನು ಬೆಳೆಸುವಲ್ಲಿ NCA ಪ್ರಮುಖ ಪಾತ್ರ ವಹಿಸಿದೆ. ಗಾಯಗಳಿಂದ ಚೇತರಿಸಿಕೊಳ್ಳುವ ರಾಷ್ಟ್ರೀಯ ಆಟಗಾರರಿಗೆ ಇದು ಪ್ರಮುಖ ಸ್ಥಳವಾಗಿ ಕಾರ್ಯನಿರ್ವಹಿಸುತ್ತದೆ. ಸಂಪೂರ್ಣ ಫಿಟ್​ನೆಸ್ ಸಾಧಿಸಲು ಮತ್ತು ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳಲು ಭಾರತೀಯ ಕ್ರಿಕೆಟಿಗರಿಗೆ ಇಲ್ಲಿ ಅವಕಾಶ ನೀಡಲಾಗುತ್ತದೆ.

45 ಅಭ್ಯಾಸ ಪಿಚ್​ಗಳು, ಹೊಸ NCA ಲೋಕಾರ್ಪಣೆಗೆ ಸಿದ್ಧ: ಜಯ್ ಶಾ
Jay Shah
Follow us
|

Updated on: Aug 04, 2024 | 11:17 AM

ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಶೀಘ್ರದಲ್ಲೇ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಎನ್​ಸಿಎ ಅನ್ನು 2024ರ ಆಗಸ್ಟ್​ನಲ್ಲಿ ಲೋಕಾರ್ಪಣೆ ಮಾಡುವುದಾಗಿ ಶಾ ಕಳೆದ ವರ್ಷ ದೃಢಪಡಿಸಿದ್ದರು.

ಇದೀಗ ನೂತನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯ ಸಂಪೂರ್ಣ ಕೆಲಸಗಳು ಪೂರ್ಣಗೊಂಡಿದ್ದು, ಅದರಂತೆ ಶೀಘ್ರದಲ್ಲೇ ಲೋಕಾರ್ಪಣೆ ಮಾಡುವುದಾಗಿ ಬಿಸಿಸಿಐ ಕಾರ್ಯದರ್ಶಿ ತಿಳಿಸಿದ್ದಾರೆ. ಇನ್ನು ಹೊಸದಾಗಿ ನಿರ್ಮಿಸಲಾದ NCA ನಲ್ಲಿ “45 ಅಭ್ಯಾಸ ಪಿಚ್‌ಗಳು” ಮತ್ತು “ಒಲಿಂಪಿಕ್ ಗಾತ್ರದ ಈಜುಕೊಳ”, ಇತರ ಪ್ರಮುಖ ಸೌಲಭ್ಯಗಳನ್ನು ಹೊಂದಿರುತ್ತದೆ ಎಂದು ಜಯ್ ಶಾ ಬಹಿರಂಗಪಡಿಸಿದ್ದಾರೆ.

BCCI ಯ ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಬಹುತೇಕ ಪೂರ್ಣಗೊಂಡಿದೆ ಮತ್ತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಘೋಷಿಸಲು ತುಂಬಾ ಉತ್ಸುಕನಾಗಿದ್ದೇನೆ. ಹೊಸ ಎನ್‌ಸಿಎ ಮೂರು ವಿಶ್ವ ದರ್ಜೆಯ ಆಟದ ಮೈದಾನಗಳು, 45 ಅಭ್ಯಾಸ ಪಿಚ್‌ಗಳು, ಒಳಾಂಗಣ ಕ್ರಿಕೆಟ್ ಪಿಚ್‌ಗಳು, ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ, ಚೇತರಿಕೆ ಮತ್ತು ಕ್ರೀಡಾ ವಿಜ್ಞಾನ ಸೌಲಭ್ಯಗಳನ್ನು ಒಳಗೊಂಡಿರುತ್ತದೆ ಎಂದು ಶಾ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ನೂತನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಿಂದಾಗಿ ಪ್ರಸ್ತುತ ಮತ್ತು ಭವಿಷ್ಯದ ಕ್ರಿಕೆಟಿಗರು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದು ಜಯ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶದಾದ್ಯಂತ ಹಲವಾರು ಕ್ರಿಕೆಟಿಗರನ್ನು ಬೆಳೆಸುವಲ್ಲಿ NCA ಪ್ರಮುಖ ಪಾತ್ರ ವಹಿಸಿದೆ. ಗಾಯಗಳಿಂದ ಚೇತರಿಸಿಕೊಳ್ಳುವ ರಾಷ್ಟ್ರೀಯ ಆಟಗಾರರಿಗೆ ಇದು ಪ್ರಮುಖ ಸ್ಥಳವಾಗಿ ಕಾರ್ಯನಿರ್ವಹಿಸುತ್ತದೆ. ಸಂಪೂರ್ಣ ಫಿಟ್​ನೆಸ್ ಸಾಧಿಸಲು ಮತ್ತು ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳಲು ಭಾರತೀಯ ಕ್ರಿಕೆಟಿಗರಿಗೆ ಇಲ್ಲಿ ಅವಕಾಶ ನೀಡಲಾಗುತ್ತದೆ.

ಜಸ್ಪ್ರೀತ್ ಬುಮ್ರಾ (ಬೆನ್ನುನೋವು) ಮತ್ತು ರಿಷಭ್ ಪಂತ್ (ಕಾರು ಅಪಘಾತ) ಇತ್ತೀಚೆಗೆ ಎನ್‌ಸಿಎಯಲ್ಲಿ ಚೇತರಿಕೆಗೆ ಒಳಗಾದ ಗಮನಾರ್ಹ ಹೆಸರುಗಳು. ಇನ್ನು ಇತ್ತೀಚೆಗೆ ಮೊಹಮ್ಮದ್ ಶಮಿ ಕೂಡ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ವಿದೇಶಿ ಪ್ರವಾಸಗಳಿಗೆ ಮುನ್ನ ಟೀಮ್ ಇಂಡಿಯಾಕ್ಕೆ ತರಬೇತಿ ಶಿಬಿರಗಳನ್ನು ಎನ್​ಸಿಎ ನಲ್ಲಿ ಆಯೋಜಿಸುತ್ತದೆ.

ಇದನ್ನೂ ಓದಿ: IPL 2025: RCB ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಔಟ್?

ಸದ್ಯ ನ್ಯಾಷನಲ್ ಕ್ರಿಕೆಟ್ ಆಕಾಡೆಮಿಯ ಮುಖ್ಯಸ್ಥರಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಮುಂಬರುವ ದಿನಗಳಲ್ಲಿ ಲಕ್ಷ್ಮಣ್ ಅವರ ಹುದ್ದೆಯನ್ನು ಭಾರತದ ಮಾಜಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಅಲಂಕರಿಸಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ.

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?