Jay Shah: ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ, ಕಿರಿಯ ವಯಸ್ಸಿನಲ್ಲೇ ಮಹತ್ವದ ಹುದ್ದೆ

ICC Chairman: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಖ್ಯಸ್ಥರಾಗಿ ಜೈ ಶಾ ಆಯ್ಕೆಯಾಗಿದ್ದಾರೆ. 2019 ರಿಂದ 2024 ರವರೆಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಯ್ ಶಾ , ಈ ವೇಳೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡು ದಿಟ್ಟ ಹೆಜ್ಜೆಯನ್ನಿಟ್ಟಿದ್ದರು. ಇದೀಗ ಐಸಿಸಿ ಚುಕ್ಕಾಣಿ ಹಿಡಿಯುವ ಮೂಲಕ ವಿಶ್ವ ಕ್ರಿಕೆಟ್​ನಲ್ಲೂ ತನ್ನ ಪ್ರಭಾವ ಬೀರಲು ಮುಂದಾಗಿದ್ದಾರೆ.

Jay Shah: ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ, ಕಿರಿಯ ವಯಸ್ಸಿನಲ್ಲೇ ಮಹತ್ವದ ಹುದ್ದೆ
Jay Shah
Follow us
| Updated By: ರಮೇಶ್ ಬಿ. ಜವಳಗೇರಾ

Updated on:Aug 27, 2024 | 9:21 PM

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದ್ದು, ಇದಾದ ಬಳಿಕ ಜಯ್ ಶಾ ವಿಶ್ವ ಕ್ರಿಕೆಟ್ ಮಂಡಳಿಯ ಗದ್ದುಗೆ ಏರಲಿದ್ದಾರೆ. ಅದರಂತೆ ಡಿಸೆಂಬರ್ 1 ರಿಂದ ಜಯ್ ಶಾ ಕಾರ್ಯಾರಂಭ ಮಾಡಲಿದ್ದಾರೆ.

ಇದನ್ನೂ ಓದಿ: ದೇಶೀಯ ಆಟಗಾರರಿಗೆ ಗುಡ್ ನ್ಯೂಸ್ ನೀಡಿದ ಜಯ್ ಶಾ

ಇದಕ್ಕೂ ಮುನ್ನ ಗ್ರೆಗ್ ಬಾರ್ಕ್ಲೇ ಅವರು 2020 ರಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ 2022ರಲ್ಲಿ ಅವರು ಮರು ಚುನಾಯಿತರಾಗಿದ್ದರು. ಇದೀಗ ಅವರ ಕಾರ್ಯಾವಧಿ ಮುಗಿಯುತ್ತಿದ್ದು, ಹೀಗಾಗಿ ಈ ಬಾರಿ ಚುನಾವಣೆ ಘೋಷಿಸಲಾಗಿತ್ತು. ಆದರೀಗ ಅಧ್ಯಕ್ಷ ಹುದ್ದೆಗೆ ಜಯ್ ಶಾ ಅವರ ಹೆಸರು ಮಾತ್ರ ನಾಮನಿರ್ದೇಶನಗೊಂಡಿದ್ದು, ಅದರಂತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅತ್ಯಂತ ಕಿರಿಯ ಅಧ್ಯಕ್ಷ:

35 ವರ್ಷದ ಜಯ್ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೇರುತ್ತಿದ್ದಂತೆ, ಐಸಿಸಿ ಮುಖ್ಯಸ್ಥರಾದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಹುದ್ದೆಯನ್ನು ಅಲಂಕರಿಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಐಸಿಸಿ ಅಧ್ಯಕ್ಷರಾದ ಭಾರತೀಯರು:

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನದಲ್ಲಿ ಈವರೆಗೆ ನಾಲ್ವರು ಭಾರತೀಯರು ಕಾಣಿಸಿಕೊಂಡಿದ್ದಾರೆ. ಅವರೆಂದರೆ, ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್. ಇದೀಗ ಈ ಹುದ್ದೆಗೇರಿದ ಐದನೇ ಭಾರತೀಯನಾಗಿ ಜಯ್ ಶಾ ಹೊರಹೊಮ್ಮಿದ್ದಾರೆ. ಅದು ಸಹ ತಮ್ಮ 35ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

ಬಿಸಿಸಿಐನ ಯಶಸ್ವಿ ಕಾರ್ಯದರ್ಶಿ:

ಜಯ್ ಶಾ 2019 ರಿಂದ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಭಾರತೀಯ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅಷ್ಟೇ ಅಲ್ಲದೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೇರುವ ಮುನ್ನ ದೇಶೀಯ ಕ್ರಿಕೆಟ್ ಆಡುವ ಭಾರತೀಯ ಆಟಗಾರರಿಗೆ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳೊಂದಿಗೆ ಬಹುಮಾನ ಮೊತ್ತ ನೀಡುವ ಪ್ರಮುಖ ನಿರ್ಧಾರವನ್ನು ಜಯ್ ಶಾ ಕೈಗೊಂಡಿದ್ದರು. ಇಂತಹ ಮಹತ್ವದ ನಿರ್ಧಾರಗಳೊಂದಿಗೆ ಭಾರತೀಯ ಕ್ರಿಕೆಟ್​ನ ಉತ್ತೇಜನಕ್ಕೆ ಕಾರಣರಾಗಿರುವ ಜಯ್ ಶಾ ಅವರು ಇದೀಗ ಐಸಿಸಿ ಮುಖ್ಯಸ್ಥ ಸ್ಥಾನಕ್ಕೇರಿರುವುದರಿಂದ ಅವರ ಮೇಲಿನ ನಿರೀಕ್ಷೆಗಳು ಹೆಚ್ಚಾಗಿವೆ.

ಇನ್ನಷ್ಟು ಕ್ರಿಕೆಟ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Tue, 27 August 24

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ