ಜಯ್​ ಶಾ ಜೊತೆ ರಾಹುಲ್ ದ್ರಾವಿಡ್ ಸೀಕ್ರೆಟ್ ಮೀಟಿಂಗ್..!

ಮುಂಬರುವ ಏಷ್ಯಾಕಪ್​ಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿಲ್ಲ. ಕೆಲ ಆಟಗಾರರು ಗಾಯದ ಕಾರಣ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಅತ್ತ ಎನ್​ಸಿಎ ಯಿಂದ ಆಟಗಾರರ ಫಿಟ್​ನೆಸ್ ಕ್ಲಿಯರೆನ್ಸ್ ಸಿಕ್ಕ ಬಳಿಕವಷ್ಟೇ ತಂಡವನ್ನು ಆಯ್ಕೆ ಮಾಡುವುದಾಗಿ ಆಯ್ಕೆ ಸಮಿತಿ ತಿಳಿಸಿದೆ.

ಜಯ್​ ಶಾ ಜೊತೆ ರಾಹುಲ್ ದ್ರಾವಿಡ್ ಸೀಕ್ರೆಟ್ ಮೀಟಿಂಗ್..!
Rahul Dravid-Jay Shah
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 17, 2023 | 3:49 PM

ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಗೌಪ್ಯ ಸಭೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸೀಕ್ರೆಟ್ ಮೀಟಿಂಗ್ ನಡೆದಿರುವುದು ದೂರದ ಅಮೆರಿಕದಲ್ಲಿ ಎಂಬುದು ವಿಶೇಷ. ಭಾರತ ತಂಡವು ಇತ್ತೀಚೆಗೆ ವೆಸ್ಟ್ ಇಂಡೀಸ್​ ಪ್ರವಾಸ ಕೈಗೊಂಡಿತ್ತು. ಈ ಸರಣಿಯ ಕೊನೆಯ ಎರಡು ಟಿ20 ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಿತು. ಈ ಪಂದ್ಯಗಳಿಗೂ ಮುನ್ನ ಮಿಯಾಮಿಯಲ್ಲಿ ರಾಹುಲ್ ದ್ರಾವಿಡ್ ಹಾಗೂ ಜಯ್​ ಶಾ ಭೇಟಿಯಾಗಿ ಸಭೆ ನಡೆಸಿದ್ದಾರೆ.

ಎರಡು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಚರ್ಚಿಸಲಾಗಿರುವ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಇತ್ತ ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ ಹಿನ್ನಲೆಯಲ್ಲಿ ರಾಹುಲ್ ದ್ರಾವಿಡ್ ಹಾಗೂ ಜಯ್ ಶಾ ನಡುವಣ ಸಭೆಯು ಇದೀಗ ಮಹತ್ವ ಪಡೆದುಕೊಂಡಿದೆ.

ವಿಶ್ವಕಪ್​ ನಿರೀಕ್ಷೆಯಲ್ಲಿ ಜಯ್ ಶಾ:

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರುವ ನಿರೀಕ್ಷೆಯಲ್ಲಿದ್ದಾರೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ. ಆದರೆ ಪ್ರಸ್ತುತ ಟೀಮ್ ಇಂಡಿಯಾದ ಪ್ರದರ್ಶನ ಸಾಧಾರಣ ಮಟ್ಟದಲ್ಲಿದೆ. ಇದೇ ವಿಷಯವಾಗಿ ಚರ್ಚೆ ನಡೆಸಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಕೋಚ್​ ಬದಲಾವಣೆ:

ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಕೋಚ್ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಟಿ20 ಕ್ರಿಕೆಟ್​ಗೆ ಹೊಸ ತರಬೇತುದಾರನನ್ನು ಆಯ್ಕೆ ಮಾಡುವ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಒಂದು ವೇಳೆ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಗೆದ್ದರೆ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರೆಯಲಿದ್ದಾರೆ. ಇದಾಗ್ಯೂ ಟಿ20 ಕ್ರಿಕೆಟ್​ಗೆ ಹೊಸ ಕೋಚ್ ಅನ್ನು ನೇಮಿಸುವುದು ಬಹುತೇಕ ಖಚಿತ. ಹೀಗಾಗಿಯೇ ಜಯ್​ ಶಾ ಹಾಗೂ ದ್ರಾವಿಡ್ ಭೇಟಿಯ ಬೆನ್ನಲ್ಲೇ ಮತ್ತೊಮ್ಮೆ ಕೋಚ್ ಬದಲಾವಣೆ ಸಾಧ್ಯತೆ ಸುದ್ದಿಗಳು ಮುನ್ನಲೆಗೆ ಬಂದಿವೆ.

ಟೀಮ್ ಇಂಡಿಯಾ ಆಯ್ಕೆ:

ಮುಂಬರುವ ಏಷ್ಯಾಕಪ್​ಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿಲ್ಲ. ಕೆಲ ಆಟಗಾರರು ಗಾಯದ ಕಾರಣ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಅತ್ತ ಎನ್​ಸಿಎ ಯಿಂದ ಆಟಗಾರರ ಫಿಟ್​ನೆಸ್ ಕ್ಲಿಯರೆನ್ಸ್ ಸಿಕ್ಕ ಬಳಿಕವಷ್ಟೇ ತಂಡವನ್ನು ಆಯ್ಕೆ ಮಾಡುವುದಾಗಿ ಆಯ್ಕೆ ಸಮಿತಿ ತಿಳಿಸಿದೆ. ಈ ಬಗ್ಗೆ ಕೂಡ ಬಿಸಿಸಿಐ ಕಾರ್ಯದರ್ಶಿ ಜೊತೆ ಟೀಮ್ ಇಂಡಿಯಾ ಕೋಚ್ ಚರ್ಚಿಸಿರಬಹುದು.

ಇದನ್ನೂ ಓದಿ: ಜಸ್​ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್​ಗಳ ಪಟ್ಟಿ ಇಲ್ಲಿದೆ

ಒಟ್ಟಿನಲ್ಲಿ ಮಹತ್ವದ ಟೂರ್ನಿಗೂ ಮುನ್ನ ದೂರದಲ್ಲಿ ಅಮೆರಿಕದಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗೌಪ್ಯ ಸಭೆ ನಡೆಸಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿರುವುದಂತು ಸುಳ್ಳಲ್ಲ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ