AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ​ ತಂಡಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧಾರ

World Test Championship: ಐಸಿಸಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ 3 ಹೊಸ ತಂಡಗಳನ್ನು ಸೇರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಜಯ್ ಶಾ ಅವರ ನಾಯಕತ್ವದಲ್ಲಿ ಟೆಸ್ಟ್ ಕ್ರಿಕೆಟ್ ಜನಪ್ರಿಯತೆ ಹೆಚ್ಚಿಸಲು ಈ ಹೆಜ್ಜೆ ಇಡಲಾಗಿದೆ. ಜಿಂಬಾಬ್ವೆ, ಐರ್ಲೆಂಡ್, ಅಫ್ಘಾನಿಸ್ತಾನ ತಂಡಗಳು ಡಬ್ಲ್ಯುಟಿಸಿ ಭಾಗವಾಗಲಿವೆ. 9 ರಿಂದ 12 ತಂಡಗಳಿಗೆ ವಿಸ್ತರಣೆಯು ಈ ರಾಷ್ಟ್ರಗಳಲ್ಲಿ ಕ್ರಿಕೆಟ್ ಬೆಳವಣಿಗೆಗೆ ಸಹಾಯಕವಾಗಲಿದ್ದು, ನಿಯಮಗಳಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ.

WTC: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ​ ತಂಡಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧಾರ
Wtc
ಪೃಥ್ವಿಶಂಕರ
|

Updated on: Apr 09, 2026 | 8:10 PM

Share

ಐಪಿಎಲ್ ನಡುವೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅದರಂತೆ ಟೆಸ್ಟ್ ವಿಶ್ವಕಪ್ ಎಂದೇ ಬಿಂಬಿತವಾಗಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ (WTC) ಮಹತ್ವದ ಬದಲಾವಣೆ ಮಾಡಲು ಐಸಿಸಿ ನಿರ್ಧರಿಸಿದೆ. ವಾಸ್ತವವಾಗಿ ಜಯ್​ ಶಾ (Jay Shah) ಅವರು ಐಸಿಸಿ (ICC) ಅಧ್ಯಕ್ಷರಾದ ಬಳಿಕ ಟೆಸ್ಟ್ ಕ್ರಿಕೆಟ್ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇದೀಗ ಅದಕ್ಕೆ ಪೂರಕವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 9 ತಂಡಗಳ ಬದಲಿಗೆ 12 ತಂಡಗಳನ್ನು ಕಣಕ್ಕಿಣಿಸುವ ಯೋಜನೆಯನ್ನು ಐಸಿಸಿ ಹಾಕಿಕೊಂಡಿದೆ. ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಹೊಸದಾಗಿ 3 ತಂಡಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ.

ಆ ಹೊಸ 3 ತಂಡಗಳು ಯಾವುವು?

ಜಯ್ ಶಾ ನೇತೃತ್ವದ ಐಸಿಸಿ, ಜಿಂಬಾಬ್ವೆ, ಐರ್ಲೆಂಡ್ ಮತ್ತು ಅಫ್ಘಾನಿಸ್ತಾನವನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸೇರಿಸಲು ಯೋಚಿಸಿದೆ ಎಂದು ವರದಿಯಾಗಿದೆ. ಈ ಮೂರು ತಂಡಗಳು ಈಗ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಇಂಗ್ಲೆಂಡ್, ಬಾಂಗ್ಲಾದೇಶ ಮತ್ತು ಶ್ರೀಲಂಕಾ ವಿರುದ್ಧ ಸ್ಪರ್ಧಿಸಲಿವೆ.

WTC ಯ ನಿಯಮಗಳು ಯಾವುವು?

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ, ಪ್ರತಿ ಎರಡು ವರ್ಷಗಳಿಗೊಮ್ಮೆ, ಪ್ರತಿ ತಂಡವು ತಮ್ಮ ಆಯ್ಕೆಯ ಆರು ತಂಡಗಳ ವಿರುದ್ಧ ತವರು ಮತ್ತು ವಿದೇಶ ಸರಣಿಯನ್ನು ಆಡುತ್ತದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಹೆಚ್ಚು ಅಂಕಗಳನ್ನು ಹೊಂದಿರುವ ತಂಡವು ಫೈನಲ್‌ಗೆ ಮುನ್ನಡೆಯುತ್ತದೆ. ಮೂರು ಹೊಸ ತಂಡಗಳ ಸೇರ್ಪಡೆಯೊಂದಿಗೆ, ನಿಯಮಗಳು ಬದಲಾಗಬಹುದು. ಆದಾಗ್ಯೂ, ಹೊಸ ಮೂರು ತಂಡಗಳ ಸೇರ್ಪಡೆಗೆ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಪಂದ್ಯಾವಳಿಯಲ್ಲಿ ಮೂರು ಸಣ್ಣ ತಂಡಗಳನ್ನು ಸೇರಿಸುವ ಐಸಿಸಿ ಈ ನಿರ್ಧಾರವು ಈ ದೇಶಗಳಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಪ್ರಯೋಜನಕಾರಿಯಾಗಲಿದೆ.

ICC Awards: ಐಸಿಸಿ ಪ್ರಶಸ್ತಿಗೆ ಬುಮ್ರಾ, ಸ್ಯಾಮ್ಸನ್ ನಡುವೆ ಪೈಪೋಟಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದ ತಂಡಗಳು

ಇಲ್ಲಿಯವರೆಗೆ ಮೂರು ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದಿವೆ. ನ್ಯೂಜಿಲೆಂಡ್ 2019-2021 ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದರೆ, ಆಸ್ಟ್ರೇಲಿಯಾ 2021-23 ಚಾಂಪಿಯನ್‌ಶಿಪ್ ಗೆದ್ದಿದೆ. ದಕ್ಷಿಣ ಆಫ್ರಿಕಾ 2023-25 ರ​​ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದಿದೆ. ಇನ್ನು ಭಾರತ ಎರಡೂ ಟೆಸ್ಟ್ ಚಾಂಪಿಯನ್‌ಶಿಪ್‌ಗಳಲ್ಲಿ ಫೈನಲ್ ತಲುಪಿದೆಯಾದರೂ ಚಾಂಪಿಯನ್‌ಶಿಪ್ ಗೆಲ್ಲಲು ಸಾಧ್ಯವಾಗಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!