AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಬರೋಬ್ಬರಿ 6 ವರ್ಷಗಳ ಬಳಿಕ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದ ಆಲ್​ರೌಂಡರ್

India vs South Africa: ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಜಯಂತ್ ಯಾದವ್, ಪ್ರಸಿದ್ಧ್ ಕೃಷ್ಣ, ದೀಪಕ್ ಚಹರ್.

Team India: ಬರೋಬ್ಬರಿ 6 ವರ್ಷಗಳ ಬಳಿಕ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದ ಆಲ್​ರೌಂಡರ್
Jayanth Yadav
TV9 Web
| Updated By: ಝಾಹಿರ್ ಯೂಸುಫ್|

Updated on: Jan 23, 2022 | 2:43 PM

Share

ಭಾರತ – ದಕ್ಷಿಣ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಕೇಪ್​ಟೌನ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯುವಲ್ಲಿ ಸ್ಪಿನ್ ಆಲ್​ರೌಂಡರ್ ಜಯಂತ್ ಯಾದವ್ ಯಶಸ್ವಿಯಾಗಿದ್ದಾರೆ. ಈ ಮೂಲಕ 6 ವರ್ಷಗಳ ಬಳಿಕ ಮತ್ತೊಮ್ಮೆ ಬ್ಲೂ ಜೆರ್ಸಿಯಲ್ಲಿ ಜಯಂತ್ ಯಾದವ್ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸರಣಿಗಾಗಿ ಆಯ್ಕೆ ಮಾಡಲಾದ ಆಟಗಾರರ ಪಟ್ಟಿಯಲ್ಲಿ ಜಯಂತ್ ಯಾದವ್ ಹೆಸರಿರಲಿಲ್ಲ. ಆದರೆ ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗಿದ್ದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಅವರ ಬದಲಿ ಆಟಗಾರನಾಗಿ ಭಾರತ ಟೆಸ್ಟ್ ತಂಡದಲ್ಲಿದ್ದ ಆಲ್​ರೌಂಡರ್ ಜಯಂತ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿತ್ತು.

ಇದೀಗ 6 ವರ್ಷಗಳ ಬಳಿಕ ಜಯಂತ್ ಯಾದವ್ ಮತ್ತೊಮ್ಮೆ ಏಕದಿನ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 31 ವರ್ಷದ ಜಯಂತ್ ಯಾದವ್ 2016 ರಲ್ಲಿ ನ್ಯೂಜಿಲೆಂಡ್ ವಿರುದ್ದ ಏಕೈಕ ಏಕದಿನ ಪಂದ್ಯವಾಡಿದ್ದರು. ಈ ಪಂದ್ಯದಲ್ಲಿ 1 ರನ್ ಹಾಗೂ 1 ವಿಕೆಟ್ ಪಡೆಯುವಲ್ಲಿ ಮಾತ್ರ ಶಕ್ತರಾಗಿದ್ದರು. ಇದಾದ ಬಳಿಕ ಜಯಂತ್ ಯಾದವ್ ತಂಡದಿಂದ ಹೊರಬಿದ್ದಿದ್ದರು.

ಇದಾಗ್ಯೂ ಟೀಮ್ ಇಂಡಿಯಾ ಪರ 5 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ 6 ವರ್ಷಗಳ ಬಳಿಕ ಟೀಮ್ ಇಂಡಿಯಾ ಏಕದಿನ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ದೀರ್ಘಾವಧಿ ಬಳಿಕ ಮತ್ತೊಮ್ಮೆ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದಾರೆ.

ಮೂರು ಪಂದ್ಯಗಳ ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲುಂಡಿದೆ. ಈಗಾಗಲೇ ದಕ್ಷಿಣ ಆಫ್ರಿಕಾ ಸರಣಿ ವಶಪಡಿಸಿಕೊಂಡಿದ್ದು, 3ನೇ ಏಕದಿನ ಪಂದ್ಯವು ಔಪಚಾರಿಕ ಪಂದ್ಯವಾಗಿದೆ.

3ನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11: ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಜಯಂತ್ ಯಾದವ್, ಪ್ರಸಿದ್ಧ್ ಕೃಷ್ಣ, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಲ್

ದಕ್ಷಿಣ ಆಫ್ರಿಕಾ ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಹೀಗಿದೆ: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಾಲ್, ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಜಯಂತ್ ಯಾದವ್, ನವದೀಪ್ ಸೈನಿ.

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

(Jayanth Yadav In Playing 11 After 6 years)

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?