Jaydev Unadkat: ಮೊದಲ ಓವರ್​ನಲ್ಲೇ ಹ್ಯಾಟ್ರಿಕ್: 2ನೇ ಓವರ್​ನಲ್ಲಿ 5 ವಿಕೆಟ್: ರಣಜಿಯಲ್ಲಿ ಇತಿಹಾಸ ಸೃಷ್ಟಿಸಿದ ಜಯದೇವ್ ಉನಾದ್ಕಟ್

Saurashtra vs Delhi, Ranji Trophy: ರಣಜಿ ಟ್ರೋಫಿಯ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಇನ್ನಿಂಗ್ಸ್​ನ ಮೊದಲ ಓವರ್ ಬೌಲಿಂಗ್ ಮಾಡಿದ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕಟ್ ಹ್ಯಾಟ್ರಿಕ್ ವಿಕೆಟ್ ಕಿತ್ತು ಇತಿಹಾಸ ನಿರ್ಮಿಸಿದ್ದಾರೆ.

Jaydev Unadkat: ಮೊದಲ ಓವರ್​ನಲ್ಲೇ ಹ್ಯಾಟ್ರಿಕ್: 2ನೇ ಓವರ್​ನಲ್ಲಿ 5 ವಿಕೆಟ್: ರಣಜಿಯಲ್ಲಿ ಇತಿಹಾಸ ಸೃಷ್ಟಿಸಿದ ಜಯದೇವ್ ಉನಾದ್ಕಟ್
Jaydev Unadkat Hat Trick
Follow us
TV9 Web
| Updated By: Vinay Bhat

Updated on:Jan 03, 2023 | 11:42 AM

ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರಂಭವಾಗಿರುವ ರಣಜಿ ಟ್ರೋಫಿಯ (Rnji Trophy) ಪಂದ್ಯದಲ್ಲಿ ಸೌರಾಷ್ಟ್ರ ತಂಡದ ನಾಯಕ ಜಯದೇವ್ ಉನಾದ್ಕಟ್ (Jaydev Unadkat) ಇತಿಹಾಸ ನಿರ್ಮಿಸಿದ್ದಾರೆ. ಡೆಲ್ಲಿ (Saurashtra vs Delhi) ವಿರುದ್ಧದ ಪಂದ್ಯದಲ್ಲಿ ಇನ್ನಿಂಗ್ಸ್​ನ ಮೊದಲ ಓವರ್ ಬೌಲಿಂಗ್ ಮಾಡಿದ ಉನಾದ್ಕಟ್ ಹ್ಯಾಟ್ರಿಕ್ ವಿಕೆಟ್ ಕಿತ್ತು ಮೆರೆದಿದ್ದಾರೆ. ಅಲ್ಲದೆ ತನ್ನ ಎರಡನೇ ಓವರ್​ನಲ್ಲಿ ಪುನಃ 2 ವಿಕೆಟ್ ಪಡೆದರು ಒಟ್ಟು 5 ವಿಕೆಟ್ ಗೊಂಚಲು ಪಡೆದುಕೊಂಡ ಸಾಧನೆ ಮಾಡಿದ್ದಾರೆ. ಈ ಮೂಲಕ ರಣಜಿ ಟ್ರೋಫಿ ಇತಿಹಾಸದಲ್ಲೇ ಮೊದಲ ಓವರ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊಟ್ಟ ಮೊದಲ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.

ಸೌರಾಷ್ಟ್ರ ಮತ್ತು ಡೆಲ್ಲಿ ನಡುವೆ ಇಂದು ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ನಾಯಕ ಯಶ್ ದುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಇಳಿದ ಡೆಲ್ಲಿ ಮೊದಲ ಓವರ್​ನಲ್ಲೇ ಉನಾದ್ಕಟ್ ಬೌಲಿಂಗ್​ನಲ್ಲಿ ಮೂರು ವಿಕೆಟ್ ಕಳೆದುಕೊಂಡಿತು. ಮೂರನೇ ಎಸೆತದಲ್ಲಿ ದ್ರುವ್ ಶೋರೆ (0), ನಾಲ್ಕನೇ ಎಸೆತದಲ್ಲಿ ವೈಭವ್ ರಾವಲ್ (0), ಐದನೇ ಎಸೆತದಲ್ಲಿ ಯಶ್ ದುಲ್ (0) ಅವರನ್ನು ಉನದ್ಕಟ್ ಔಟ್ ಮಾಡಿದರು. ನಂತರ ತನ್ನ ಎರಡನೇ ಓವರ್​ನ ನಾಲ್ಕನೇ ಎಸೆತದಲ್ಲಿ ಜಾನ್ಟಿ ಸಿಂಧು (4) ಅವರನ್ನು ಪೆವಿಲಿಯನ್​ಗೆ ಅಟ್ಟಿದರೆ ಕೊನೆಯ ಎಸೆತದಲ್ಲಿ ಲಲಿತ್ ಯಾದವ್ (0) ಅವರನ್ನು ಎಲ್​ಬಿ ಮೂಲಕ ಕೆಡವಿದರು. ನಂತರ ತನ್ನ ಮುಂದಿನ ಓವರ್​ನಲ್ಲಿ ಲಕ್ಷಯ್ ತರೇಜ (1) ಔಟ್ ಮಡಿದರು.

Devon Conway: ವರ್ಷದ ಮೊದಲ ಶತಕ ಸಿಡಿಸಿ ವಿಶೇಷ ದಾಖಲೆ ಬರೆದ ಕಾನ್ವೆ..!

ಇದನ್ನೂ ಓದಿ
Image
IND vs SL 1st T20: ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರಿಂದ ಭರ್ಜರಿ ಅಭ್ಯಾಸ
Image
IND vs SL 1st T20I: ಭಾರತ-ಶ್ರೀಲಂಕಾ ಮೊದಲ ಟಿ20ಗೆ ಇದೆಯೇ ಮಳೆಯ ಕಾಟ?: ವಾಂಖೆಡೆ ಪಿಚ್ ಹೇಗಿದೆ?
Image
IND vs SL 1st T20: ಇಂದು ಭಾರತ-ಶ್ರೀಲಂಕಾ ಮೊದಲ ಟಿ20: ಟೀಮ್ ಇಂಡಿಯಾ ಆಡುವ ಬಳಗವೇ ರೋಚಕ
Image
Team India: ಟೀಮ್ ಇಂಡಿಯಾದ ಮುಂದಿನ ಕೋಚ್ ಯಾರು? ಇಲ್ಲಿದೆ ಉತ್ತರ

ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡ ಡೆಲ್ಲಿ 0 ರನ್​ಗೆ 3 ವಿಕೆಟ್ ಕಳೆದುಕೊಂಡರೆ 4 ರನ್​ಗೆ 4ನೇ ವಿಕೆಟ್ ಕಳೆದುಕೊಂಡಿತು. 10 ರನ್ ಆಗುವ ಹೊತ್ತಿಗೆ 7 ವಿಕೆಟ್ ಪತನಗೊಂಡವು. ಇದೀಗ 100 ರನ್​ಗು ಮೊದಲೇ 8 ವಿಕೆಟ್ ಕಳೆದುಕೊಂಡಿರುವ ಡೆಲ್ಲಿ ಕಡಿಮೆ ಮೊತ್ತಕ್ಕೆ ಆಲೌಟ್ ಆಗುವ ಭೀತಿಯಲ್ಲಿದೆ. ಜಯದೇವ್ ಉನಾದ್ಕಟ್ 6 ವಿಕೆಟ್ ಕಿತ್ತು ಮಿಂಚಿದ್ದಾರೆ.

ಕರ್ನಾಟಕ vs ಛತ್ತೀಸ್​ಗಢ:

ರಣಜಿ ಟ್ರೋಫಿಯಲ್ಲಿ ನಡೆಯುತ್ತಿರುವ ಮತ್ತೊಂದು ಪಂದ್ಯದಲ್ಲಿ ಕ್ವಾರ್ಟರ್​ಫೈನಲ್​ ತಲುಪಲು ಗೆಲ್ಲಲೇಬೇಕಾಗಿರುವ ಕರ್ನಾಟಕ ತಂಡ ಛತ್ತೀಸ್​ಗಢದ ವಿರುದ್ಧ ಸೆಣಸಾಡುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಟಾಸ್​ ಗೆದ್ದ ರಾಜ್ಯ ತಂಡ ಬೌಲಿಂಗ್​ ಆಯ್ದುಕೊಂಡಿತು.ಸರ್ವಿಸಸ್​​ ವಿರುದ್ಧದ ಮೊದಲ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದ ಕರ್ನಾಟಕ, 2ನೇ ಪಂದ್ಯದಲ್ಲಿ ಪುದುಚೇರಿ ವಿರುದ್ಧ ಇನಿಂಗ್ಸ್​ ಜಯ ಸಾಧಿಸಿತ್ತು. ಮೂರನೇ ಪಂದ್ಯದಲ್ಲಿ ಗೋವಾ ವಿರುದ್ಧ ಅದೃಷ್ಟ ಕೈಹಿಡಿಯದ ಕಾರಣ ಡ್ರಾ ಮಾಡಿಕೊಂಡಿತು. ಸದ್ಯ ಎಲೈಟ್​ ಸಿ ಗುಂಪಿನಲ್ಲಿರುವ ರಾಜ್ಯ ತಂಡ ಒಟ್ಟಾರೆ 13 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಕರ್ನಾಟಕ: ರವಿಕುಮಾರ್ ಸಮರ್ಥ್, ಮಯಾಂಕ್ ಅಗರ್ವಾಲ್ (ನಾಯಕ), ವಿಶಾಲ್ ಓನಾಟ್, ನಿಕಿನ್ ಜೋಸ್, ಮನೀಶ್ ಪಾಂಡೆ, ಶರತ್ ಬಿ.ಆರ್., ಕೃಷ್ಣಪ್ಪ ಗೌತಮ್, ಶ್ರೇಯಸ್ ಗೋಪಾಲ್, ವಾಸುಕಿ ಕೌಶಿಕ್, ವಿಜಯ್‌ಕುಮಾರ್ ವೈಶಾಕ್ ಹಾಗು ವಿಧ್ವತ್ ಕಾವೇರಪ್ಪ.

ಛತ್ತೀಸ್‌ಗಢ: ಅವನೀಶ್ ಧಲಿವಾಲ್, ಅನುಜ್ ತಿವಾರಿ, ಅಶುತೋಷ್ ಸಿಂಗ್, ಅಜಯ್ ಜಾದವ್ ಮಂಡಲ್, ಹರ್‌ಪ್ರೀತ್ ಸಿಂಗ್ ಭಾಟಿಯಾ(ನಾಯಕ), ಅಮನ್‌ದೀಪ್ ಖರೆ, ಶಶಾಂಕ್ ಸಿಂಗ್, ಮಯಾಂಕ್ ವರ್ಮಾ, ಸುಮಿತ್ ರುಯಿಕರ್, ರವಿಕಿರಣ್ ಹಾಗು ಸೌರಭ್ ಮಜುಂದಾರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:42 am, Tue, 3 January 23

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್