World Cup 2025: ಆಸ್ಟ್ರೇಲಿಯಾ ವಿರುದ್ಧ ಸ್ಮರಣೀಯ ಶತಕ ಬಾರಿಸಿದ ಜೆಮಿಮಾ ರೊಡ್ರಿಗಸ್

Jemimah Rodrigues century: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ನೀಡಿದ 339 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಜೆಮಿಮಾ ರಾಡ್ರಿಗಸ್ ಭರ್ಜರಿ ಶತಕ ಬಾರಿಸಿದರು. ಇದು ಅವರ ವೃತ್ತಿಜೀವನದ 3ನೇ ಹಾಗೂ ವಿಶ್ವಕಪ್ ಇತಿಹಾಸದಲ್ಲಿ ಮೊದಲ ಶತಕವಾಗಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಜೊತೆ 167 ರನ್‌ಗಳ ಪಾಲುದಾರಿಕೆ ಹಂಚಿಕೊಂಡು ಭಾರತದ ಹೋರಾಟಕ್ಕೆ ಬಲ ತುಂಬಿದರು.

World Cup 2025: ಆಸ್ಟ್ರೇಲಿಯಾ ವಿರುದ್ಧ ಸ್ಮರಣೀಯ ಶತಕ ಬಾರಿಸಿದ ಜೆಮಿಮಾ ರೊಡ್ರಿಗಸ್
Jemimah Rodrigues

Updated on: Oct 30, 2025 | 11:23 PM

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಿನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 339 ರನ್ ಕಲೆಹಾಕಿದೆ.ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಪರ ಜೆಮಿಮಾ ರೋಡ್ರಿಗಸ್ (Jemimah Rodrigues) ಸ್ಮರಣೀಯ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಜೆಮಿಮಾ ಅವರ ಏಕದಿನ ವೃತ್ತಿಜೀವನದಲ್ಲಿ ಮೂರನೇ ಶತಕ ಮತ್ತು ವಿಶ್ವಕಪ್ ಇತಿಹಾಸದಲ್ಲಿ ಮೊದಲ ಶತಕವಾಗಿದೆ. ಈ ಶತಕದ ಇನ್ನಿಂಗ್ಸ್ ಜೊತೆಗೆ ಜೆಮಿಮಾ ನಾಯಕಿ ಹರ್ಮನ್ಪ್ರೀತ್ ಕೌರ್ ಅವರೊಂದಿಗೆ ಸ್ಮರಣೀಯ 167 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.

ನಾಯಕಿ ಜೊತೆಗೆ ಸ್ಮರಣೀಯ ಜೊತೆಯಾಟ

ಆಸ್ಟ್ರೇಲಿಯಾ ನೀಡಿದ 338 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭದ ಅಗತ್ಯವಿತ್ತು. ಆದರೆ ಟೀಂ ಇಂಡಿಯಾ ಕೇವಲ 59 ರನ್‌ಗಳಿಗೆ ಇಬ್ಬರು ಆರಂಭಿಕರನ್ನು ಕಳೆದುಕೊಂಡಿತು. ಈ ಹಂತದಲ್ಲಿ ಇನ್ನಿಂಗ್ಸ್‌ನ ಜವಾಬ್ದಾರಿಯನ್ನು ವಹಿಸಿಕೊಂಡ ಜೆಮಿಮಾ ರೋಡ್ರಿಗಸ್, ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಂದ ಉತ್ತಮ ಜೊತೆಯಾಟ ಕಟ್ಟಿದರು. ಆಸ್ಟ್ರೇಲಿಯಾದ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಜೆಮಿಮಾ ನಿಧಾನವಾಗಿ ಇನ್ನಿಂಗ್ಸ್ ಕಟ್ಟಿ 57 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಗೆಯೇ ನಾಯಕಿ ಹರ್ಮನ್​ಪ್ರೀತ್ ಕೌರ್ ಅವರೊಂದಿಗೆ 167 ರನ್‌ಗಳ ಜೊತೆಯಾಟ ನಡೆಸಿ ತಂಡವನ್ನು ಗುರಿಯತ್ತ ಕೊಂಡೊಯ್ದರು.

2025 ರಲ್ಲಿ 3 ಶತಕ

ಆದಾಗ್ಯೂ ಶತಕದಂಚಿನಲ್ಲಿ ಎಡವಿದ ಹರ್ಮನ್‌ಪ್ರೀತ್ ಕೌರ್ 89 ರನ್‌ಗಳಿಗೆ ಔಟಾದರು. ಆದಾಗ್ಯೂ ಇನ್ನೊಂದು ತುದಿಯಲ್ಲಿ ದೃಢವಾಗಿ ನಿಂತ ಜೆಮಿಮಾ115 ಎಸೆತಗಳಲ್ಲಿ ತಮ್ಮ ಚೊಚ್ಚಲ ವಿಶ್ವಕಪ್ ಶತಕ ದಾಖಲಿಸಿದರು. ಇದು ಜೆಮಿಮಾ ಅವರ ವೃತ್ತಿಜೀವನದ ಮೂರನೇ ಶತಕವಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಮೊದಲ ಹಾಗೂ ವಿಶ್ವಕಪ್‌ನಲ್ಲಿ ಮೊದಲ ಶತಕವಾಗಿದೆ. ಗಮನಾರ್ಹವಾಗಿ, ಜೆಮಿಮಾ ಅವರ ಮೂರು ಏಕದಿನ ಶತಕಗಳು 2025 ರಲ್ಲಿ ಬಂದಿವೆ. ಇದಕ್ಕೂ ಮೊದಲು, ಅವರು ಐರ್ಲೆಂಡ್ ವಿರುದ್ಧ ತಮ್ಮ ಮೊದಲ ಶತಕ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಬಾರಿಸಿದ್ದರು.

IND vs AUS: ಶೇ. 87 ರಷ್ಟು ಮಳೆ..! 2ನೇ ಟಿ20 ಪಂದ್ಯ ನಡೆಯುವುದು ಭಾಗಶಃ ಅನುಮಾನ

ಗಂಭೀರ್ ದಾಖಲೆ ಮುರಿದ ಜೆಮಿಮಾ

ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ ಜೆಮಿಮಾ ಅಜೇಯ 127 ರನ್ ಗಳಿಸಿ, ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಇಲ್ಲಿಯವರೆಗೆ, ಗಂಭೀರ್ ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಬಾರಿಸಿದ್ದ ದಾಖಲೆಯನ್ನು ಹೊಂದಿದ್ದರು. 2011 ರ ಶ್ರೀಲಂಕಾ ವಿರುದ್ಧದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಗಂಭೀರ್ 97 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಈಗ ಜೆಮಿಮಾ, ಗಂಭೀರ್ ಅವರನ್ನು ಹಿಂದಿಕ್ಕಿದ್ದಾರೆ.

Published On - 10:30 pm, Thu, 30 October 25