Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದಲ್ಲಿ ಮಹೇಂದ್ರ ಸಿಂಗ್ ಧೋನಿಯ ಐಷಾರಾಮಿ ಮನೆ..!

MS Dhoni: ಮಹೇಂದ್ರ ಸಿಂಗ್ ಧೋನಿ ಅವರ ಸಾಧನೆಯನ್ನು ಪರಿಗಣಿಸಿ ಜಾರ್ಖಂಡ್ ಸರ್ಕಾರ ಹಲವು ವರ್ಷಗಳ ಹಿಂದೆ ರಾಂಚಿಯ ಹರ್ಮು ರಸ್ತೆ ಪ್ರದೇಶದಲ್ಲಿ 10 ಸಾವಿರ ಚದರ ಅಡಿ ಜಾಗವನ್ನು ಗೌರವಪೂರ್ವಕವಾಗಿ ನೀಡಿತು. ಟೀಮ್ ಇಂಡಿಯಾದ ಮಾಜಿ ನಾಯಕ ಅಲ್ಲಿ ಐಷಾರಾಮಿ ಮನೆ ನಿರ್ಮಿಸಿದ್ದರು. ಇದೀಗ ಇದೇ ಮನೆಯು ವಿವಾದಕ್ಕೆ ಒಳಗಾಗಿದೆ.

ವಿವಾದದಲ್ಲಿ ಮಹೇಂದ್ರ ಸಿಂಗ್ ಧೋನಿಯ ಐಷಾರಾಮಿ ಮನೆ..!
Ms Dhoni
Follow us
ಝಾಹಿರ್ ಯೂಸುಫ್
|

Updated on: Dec 24, 2024 | 1:40 PM

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸುದ್ದಿಯಾಗಿರುವುದು ರಾಂಚಿಯಲ್ಲಿರುವ ತಮ್ಮ ಹಳೆಯ ಮನೆಯ ವಿಷಯದಿಂದ ಎಂಬುದಷ್ಟೇ ವ್ಯತ್ಯಾಸ. ಮಹೇಂದ್ರ ಸಿಂಗ್ ಧೋನಿ ಅವರ ಸಾಧನೆಯನ್ನು ಪರಿಗಣಿಸಿ ಜಾರ್ಖಂಡ್ ಸರ್ಕಾರ ಈ ಹಿಂದೆ ಅವರಿಗೆ ರಾಂಚಿಯಲ್ಲಿ 10 ಸಾವಿರ ಚದರ ಅಡಿ ಜಾಗ ನೀಡಿತ್ತು.

ಈ ಜಾಗದಲ್ಲಿ ಮಹೇಂದ್ರ ಸಿಂಗ್ ಧೋನಿ ಐಷಾರಾಮಿ ಮನೆ ನಿರ್ಮಿಸಿದ್ದರು. ಇಷ್ಟೇ ಆಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ಆದರೆ ಈ ಮನೆಯನ್ನು ಧೋನಿ ವಾಣಿಜ್ಯ ಉದ್ದೇಶದ ಬಳಕೆಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಂಚಿಯ ಹರ್ಮು ರಸ್ತೆಯಲ್ಲಿರುವ ಧೋನಿಯ ಈ ಮನೆಯಲ್ಲಿ ಡಯಾಗ್ನೋಸ್ಟಿಕ್ ಸೆಂಟರ್ ನಿರ್ಮಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ಬಗ್ಗೆ ಹೌಸಿಂಗ್ ಬೋರ್ಡ್​ಗೆ ದೂರು ದಾಖಲಿಸಲಾಗಿದೆ. ಹೀಗಾಗಿ ಇದೀಗ ಜಾರ್ಖಡ್ ಹೌಸಿಂಗ್ ಬೋರ್ಡ್ ಧೋನಿ ಕಡೆಯಿಂದ ಸ್ಪಷ್ಟನೆ ಕೇಳಿದೆ.

ಜಾರ್ಖಂಡ್ ಹೌಸಿಂಗ್ ಬೋರ್ಡ್ ನಿಯಮಗಳ ಪ್ರಕಾರ, ವಸತಿ ಪ್ಲಾಟ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವಂತಿಲ್ಲ. ಯಾವುದೇ ಪ್ರಕರಣದಲ್ಲಿ ಯಾವುದೇ ಉಲ್ಲಂಘನೆ ಕಂಡುಬಂದರೆ ಅದನ್ನು ಕಾನೂನುಬಾಹಿರ ಎಂದು ಪರಿಗಣಿಸಲಾಗುತ್ತದೆ.

ಇದೀಗ ಈ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಜಾರ್ಖಂಡ್ ಹೌಸಿಂಗ್ ಬೋರ್ಡ್​ನ ಅಧ್ಯಕ್ಷ ಸಂಜಯ್ ಲಾಲ್ ಪಾಸ್ವಾನ್ ಹೇಳಿದ್ದಾರೆ.

ಅಂದಹಾಗೆ ಧೋನಿಯ ಈ ಮನೆಯು ವಿವಾದಕ್ಕೆ ಒಳಗಾಗುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ಈ ಮನೆಯ ಮೇಲ್ಛಾವಣಿಯಲ್ಲಿ ಧೋನಿ ಈಜುಕೊಳವನ್ನು ನಿರ್ಮಿಸಿದ್ದರು. ಈ ಬಗ್ಗೆ 2007 ರಲ್ಲಿ ದೂರು ನೀಡಲಾಗಿತ್ತು.

ಇನ್ನು 2016ರಲ್ಲಿ ನಗರದಲ್ಲಿ ನೀರಿನ ಅಭಾವ ಉಂಟಾದಾಗ ಧೋನಿ ತನ್ನ ಈಜುಕೊಳಕ್ಕೆ ಪ್ರತಿದಿನ 15 ಸಾವಿರ ಲೀಟರ್ ನೀರು ವ್ಯಯಿಸುತ್ತಿದ್ದಾರೆ. ಇದರಿಂದ ತಮ್ಮ ಮನೆಗೆ ಸರಿಯಾಗಿ ನೀರು ಸಿಗುತ್ತಿಲ್ಲ ಎಂದು ಆರೋಪಿಸಿದ್ದರು.

ಇದನ್ನೂ ಓದಿ: 468ನೇ ಆಟಗಾರ… ಟೀಮ್ ಇಂಡಿಯಾ ವಿರುದ್ಧ 19ರ ಹರೆಯದ ಸ್ಪೋಟಕ ದಾಂಡಿಗ ಎಂಟ್ರಿ

ಇದೀಗ ಸರ್ಕಾರ ನೀಡಿದ ಜಾಗವನ್ನು ಧೋನಿ ವಾಣಿಜ್ಯ ಉದ್ದೇಶಕ್ಕಾಗಿ ಬಳಸಲು ಮುಂದಾಗಿ ಮತ್ತೊಮ್ಮೆ ಸುದ್ದಿ ಸೃಷ್ಟಿಸಿದ್ದಾರೆ. ಸದ್ಯ ಈ ಮನೆಯಲ್ಲಿ ಮಹೇಂದ್ರ ಸಿಂಗ್ ಧೋನಿ ವಾಸಿಸುತ್ತಿಲ್ಲ. ಬದಲಾಗಿ ಕಳೆದ ಹಲವಾರು ವರ್ಷಗಳಿಂದ ಸಿಮಾಲಿಯಾ ರಿಂಗ್ ರೋಡ್‌ನಲ್ಲಿರುವ ತಮ್ಮ ಬೃಹತ್ ಫಾರ್ಮ್ ಹೌಸ್‌ನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದಾರೆ.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ