AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jhulan Goswami: 39ನೇ ವಯಸ್ಸಿನಲ್ಲಿ ದೊಡ್ಡ ಸಾಧನೆ: ವಿಶ್ವ ದಾಖಲೆ ಸರಿಗಟ್ಟಿದ ಟೀಮ್ ಇಂಡಿಯಾ ವೇಗಿ

Jhulan Goswami: 39 ವರ್ಷದ ಜೂಲನ್ ಗೋಸ್ವಾಮಿ ಪಾಕಿಸ್ತಾನ ವಿರುದ್ಧವೂ ಅದ್ಭುತ ಬೌಲಿಂಗ್ ಮಾಡಿದ್ದರು. 10 ಓವರ್ ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Jhulan Goswami: 39ನೇ ವಯಸ್ಸಿನಲ್ಲಿ ದೊಡ್ಡ ಸಾಧನೆ: ವಿಶ್ವ ದಾಖಲೆ ಸರಿಗಟ್ಟಿದ ಟೀಮ್ ಇಂಡಿಯಾ ವೇಗಿ
Jhulan Goswami
TV9 Web
| Updated By: ಝಾಹಿರ್ ಯೂಸುಫ್|

Updated on: Mar 10, 2022 | 2:32 PM

Share

ಭಾರತ ಮಹಿಳಾ ಕ್ರಿಕೆಟ್ (Team India) ತಂಡದ ವೇಗಿ ಜೂಲನ್ ಗೋಸ್ವಾಮಿ (Jhulan Goswami) 39ನೇ ವಯಸ್ಸಿನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ನ್ಯೂಜಿಲೆಂಡ್ (New Zealand Women vs India Women) ವಿರುದ್ದದ ಪಂದ್ಯದಲ್ಲಿ 1 ವಿಕೆಟ್ ಕಬಳಿಸುವ ಮೂಲಕ ಜೂಲನ್ ಮಹಿಳಾ ವಿಶ್ವಕಪ್ (ICC Womens World Cup 2022) ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್‌ಗಳ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅವರು 30 ಪಂದ್ಯಗಳಲ್ಲಿ 39 ವಿಕೆಟ್ ಗಳಿಸಿ ಈ ಸಾಧನೆ ಮಾಡಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೇಟಿ ಮಾರ್ಟಿನ್ (41) ಅವರನ್ನು ಔಟ್ ಮಾಡುವ ಮೂಲಕ ಜೂಲನ್ ವಿಶ್ವದಾಖಲೆಯನ್ನು ಸರಿಗಟ್ಟಿದರು. ಮಹಿಳಾ ವಿಶ್ವಕಪ್‌ನಲ್ಲಿ ಇದುವರೆಗೆ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಆಸ್ಟ್ರೇಲಿಯಾದ ಮಾಜಿ ಬೌಲರ್ ಲಿನ್ ಫುಲ್‌ಸ್ಟನ್ ಹೆಸರಿನಲ್ಲಿತ್ತು. 1982 ಮತ್ತು 1988 ರ ನಡುವಿನ ವಿಶ್ವಕಪ್‌ನ 20 ಪಂದ್ಯಗಳಲ್ಲಿ ಲಿನ್ ಒಟ್ಟು 39 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಇದೀಗ ಜೂಲನ್ ಗೋಸ್ವಾಮಿ ಕೂಡ 39 ವಿಕೆಟ್ ಕಬಳಿಸುವ ಮೂಲಕ ಈ ಸಾಧನೆಯನ್ನು ಸರಿಗಟ್ಟಿದ್ದಾರೆ.

ಮಾರ್ಚ್ 12 ರಂದು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಲಿನ್ ಅವರ ದಾಖಲೆಯನ್ನು ಮುರಿಯಲು ಅವಕಾಶ ಜೂಲನ್ ಮುಂದಿದೆ. ಈ ಪಂದ್ಯದಲ್ಲಿ 1 ವಿಕೆಟ್ ಪಡೆದರೆ ಮಹಿಳಾ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿ ಎನಿಸಿಕೊಳ್ಳಲಿದ್ದಾರೆ. ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಲಿನ್ ಮತ್ತು ಜೂಲನ್ ನಂತರ ಕರೋಲ್ ಹಾಡ್ಜಸ್ (37), ಕ್ಲೇರ್ ಟೇಲರ್ (36) ಮತ್ತು ಕ್ಯಾಥರೀನ್ ಫಿಟ್ಜ್‌ಪ್ಯಾಟ್ರಿಕ್ (33) ಇದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಜೂಲನ್ ಡೆತ್ ಓವರ್‌ನಲ್ಲಿ ಬಿಗಿಯಾಗಿ ಬೌಲಿಂಗ್ ಮಾಡಿದರು. ಈ ಪಂದ್ಯದಲ್ಲಿ 9 ಓವರ್ ಗಳಲ್ಲಿ 41 ರನ್ ನೀಡಿ 1 ವಿಕೆಟ್ ಪಡೆದು ಮಿಂಚಿದ್ದರು.

ಇದಕ್ಕೂ ಮುನ್ನ 39 ವರ್ಷದ ಜೂಲನ್ ಗೋಸ್ವಾಮಿ ಪಾಕಿಸ್ತಾನ ವಿರುದ್ಧವೂ ಅದ್ಭುತ ಬೌಲಿಂಗ್ ಮಾಡಿದ್ದರು. 10 ಓವರ್ ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಜೂಲನ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 196 ಏಕದಿನ ಪಂದ್ಯಗಳಲ್ಲಿ 247 ವಿಕೆಟ್ ಪಡೆದಿದ್ದಾರೆ. ಎರಡು ಬಾರಿ 5 ವಿಕೆಟ್ ಹಾಗೂ 7 ಬಾರಿ 4 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಭಾರತಕ್ಕೆ ಸೋಲು:

ಹ್ಯಾಮಿಲ್ಟನ್​ನ ಸೀಡನ್ ಪಾರ್ಕ್​ನಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿ 2022ರ (ICC Womens World Cup 2022) ಎಂಟನೇ ಪಂದ್ಯದಲ್ಲಿಂದು ನ್ಯೂಜಿಲೆಂಡ್ ಮಹಿಳಾ ತಂಡ ಭಾರತ ಮಹಿಳಾ ತಂಡ (New Zealand Women vs India Women) ಹೀನಾಯ ಸೋಲು ಕಂಡಿದೆ. ಕಠಿಣ ಟಾರ್ಗೆಟ್ ಬೆನ್ನಟ್ಟಿದ ಭಾರತ ಪರ ಉಪ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ಏಕಾಂಗಿ ಹೋರಾಟ ನಡೆಸಿದರು ಬಿಟ್ಟರೆ ಉಳಿದ ಬಹುತೇಕ ಬ್ಯಾಟರ್​​ಗಳು ವೈಫಲ್ಯ ಅನುಭವಿಸಿದರು.

ಪರಿಣಾಮ ನ್ಯೂಜಿಲೆಂಡ್ ವನಿತೆಯರು 62 ರನ್​​ಗಳ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಕಂಡಿದ್ದಾರೆ. ಇತ್ತ ಮಿಥಾಲಿ ಪಡೆ ಮೊದಲ ಸೋಲು ಅನುಭವಿಸಿದೆ. ಇದಕ್ಕೂ ಮುನ್ನ ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಭರ್ಜರಿ ಜಯ ಕಂಡಿತ್ತು. ಆದರೆ, ಅದೇ ಲಯದಲ್ಲಿ ಬ್ಯಾಟಿಂಗ್-ಬೌಲಿಂಗ್ ಮಾಡಲು ಎಡವಿದ ಭಾರತೀಯ ವನಿತೆಯರು ಹೀನಾಯವಾಗಿ ಸೋಲು ಕಂಡಿದ್ದಾರೆ. ಕಿವೀಸ್ ಪಡೆ ಆರಂಭಿಕರ ವೈಫಲ್ಯದ ನಡುವೆಯೂ ಮಧ್ಯಮ ಕ್ರಮಾಂಕದಲ್ಲಿ ಮಿಂಚಿದ ಕಾರಣ 50 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 260 ರನ್ ಬಾರಿಸಿತು. ಭಾರತ 46.4 ಓವರ್​ಗಳಲ್ಲಿ 198 ರನ್​ಗೆ ಆಲೌಟ್ ಆಗಿ​ ಸೋಲೊಪ್ಪಿಗೊಂಡಿತು.

ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Jhulan Goswami becomes joint-highest wicket-taker in World Cup history)

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?