IND vs WI, WWC 2022: ಮಹಿಳಾ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಜೂಲನ್ ಗೋಸ್ವಾಮಿ!

IND vs WI, WWC 2022: ಭಾರತ ಮಹಿಳಾ ತಂಡದ ವೇಗದ ಬೌಲರ್ ಜೂಲನ್ ಗೋಸ್ವಾಮಿ ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಈ ಮೂಲಕ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

IND vs WI, WWC 2022: ಮಹಿಳಾ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಜೂಲನ್ ಗೋಸ್ವಾಮಿ!
ಗೋಸ್ವಾಮಿ
Follow us
TV9 Web
| Updated By: ಪೃಥ್ವಿಶಂಕರ

Updated on:Mar 12, 2022 | 2:04 PM

ಭಾರತ ಮಹಿಳಾ ತಂಡದ ವೇಗದ ಬೌಲರ್ ಜೂಲನ್ ಗೋಸ್ವಾಮಿ (Jhulan Goswami) ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಈ ಮೂಲಕ ಮಹಿಳಾ ಕ್ರಿಕೆಟ್ ವಿಶ್ವಕಪ್‌ (Women ‘s Cricket World Cup)ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ಮಹಿಳಾ ವಿಶ್ವಕಪ್‌ನಲ್ಲಿ ಅನಿಸಾ ಮೊಹಮ್ಮದ್ ಅವರನ್ನು ಔಟ್ ಮಾಡುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಇದುವರೆಗೆ ಗೋಸ್ವಾಮಿ ವಿಶ್ವಕಪ್‌ನಲ್ಲಿ 40 ವಿಕೆಟ್‌ಗಳನ್ನು ಪಡೆದಿದ್ದಾರೆ. ಜೂಲನ್ ವೆಸ್ಟ್ ಇಂಡೀಸ್ ವಿರುದ್ಧ ಕೇವಲ ಒಂದು ವಿಕೆಟ್ ಪಡೆದರು ಆದರೆ ಇದು ಅವರ ಹೆಸರಿಗೆ ದಾಖಲೆಯಾಯಿತು. 39 ವಿಕೆಟ್‌ ಪಡೆದಿದ್ದ ಆಸ್ಟ್ರೇಲಿಯಾದ ಲಿನ್‌ ಫುಲ್‌ಸ್ಟನ್‌ ಅವರನ್ನು ಹಿಂದಿಕ್ಕಿ ಮಹಿಳಾ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಭಾರತೀಯ ದಿಗ್ಗಜ ಆಟಗಾರ್ತಿ ಎನಿಸಿಕೊಂಡರು.

ಮಹಿಳಾ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದ ಇಂಗ್ಲೆಂಡ್‌ನ ಕರೋಲ್ ಹಾಡ್ಜಸ್ 37 ವಿಕೆಟ್‌ ಪಡೆದು 3ನೇ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್‌ನ ಕ್ಲೇರ್ ಟೇಲರ್ 36 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಆಸ್ಟ್ರೇಲಿಯಾದ ಕ್ಯಾಥರೀನ್ ಫಿಟ್ಜ್‌ಪ್ಯಾಟ್ರಿಕ್ 33 ವಿಕೆಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಜೂಲನ್ ಗೋಸ್ವಾಮಿ ಅವರು 50 ರ ಸಮೀಪದಲ್ಲಿ ತಮ್ಮ ವಿಕೆಟ್‌ಗಳನ್ನು ಪಡೆಯುವ ಸುವರ್ಣಾವಕಾಶವನ್ನು ಹೊಂದಿದ್ದಾರೆ. ಇದೀಗ ಭಾರತವು ವಿಶ್ವಕಪ್ 2022 ರಲ್ಲಿ ಕನಿಷ್ಠ ನಾಲ್ಕು ಪಂದ್ಯಗಳನ್ನು ಆಡಬೇಕಾಗಿದೆ.

39 ವರ್ಷದ ಜೂಲನ್ ಗೋಸ್ವಾಮಿ ಮಹಿಳಾ ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಬೌಲರ್. ಅವರು ಏಕದಿನ ಮಾದರಿಯಲ್ಲಿ 198 ಪಂದ್ಯಗಳಲ್ಲಿ 249 ವಿಕೆಟ್ ಪಡೆದಿದ್ದಾರೆ. ಈ ವಿಶ್ವಕಪ್‌ನಲ್ಲಿ ಅವರ ಬೌಲಿಂಗ್ ಅದ್ಭುತವಾಗಿದೆ. ಮೂರು ಪಂದ್ಯಗಳಲ್ಲಿ ನಾಲ್ಕು ವಿಕೆಟ್ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ, ಅವರು ಆರಂಭಿಕ ಸ್ಪೆಲ್‌ನಲ್ಲಿ ಸಾಕಷ್ಟು ರನ್ ನೀಡಿದರು. ಆದರೆ ಅವರು ತಮ್ಮ 2ನೇ ಸ್ಪೆಲ್​ನಲ್ಲಿ ಒಂದು ವಿಕೆಟ್ ಪಡೆದು ದಾಖಲೆ ಬರೆದರು.

ಇದನ್ನೂ ಓದಿ:IND vs WI: ಬ್ಯಾಟಿಂಗ್-ಬೌಲಿಂಗ್​ನಲ್ಲಿ ಭಾರತ ಬೆಂಕಿ ಪ್ರದರ್ಶನ: ಮಿಥಾಲಿ ಪಡೆಗೆ ಬರೋಬ್ಬರಿ 155 ರನ್​ಗಳ ಜಯ

Published On - 1:54 pm, Sat, 12 March 22