Jhulan Goswami: ಜೂಲನ್ ಗೋಸ್ವಾಮಿ TKR ತಂಡದ ಮೆಂಟರ್

Jhulan Goswami: ಭಾರತದ ಪರ 204 ಏಕದಿನ ಪಂದ್ಯಗಳನ್ನಾಡಿರುವ ಜೂಲನ್ ಗೋಸ್ವಾಮಿ ಒಟ್ಟು 255 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 12 ಟೆಸ್ಟ್ ಪಂದ್ಯಗಳಿಂದ 44 ವಿಕೆಟ್, 68 ಟಿ20 ಪಂದ್ಯಗಳಿಂದ 56 ವಿಕೆಟ್​ಗಳನ್ನು ಪಡೆದಿದ್ದಾರೆ. 2022 ರಲ್ಲಿ ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಜೂಲನ್ ಇದೀಗ ಫ್ರಾಂಚೈಸಿ ಲೀಗ್​ಗಳಲ್ಲಿ ಕೋಚ್ ಹಾಗೂ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Jhulan Goswami: ಜೂಲನ್ ಗೋಸ್ವಾಮಿ TKR ತಂಡದ ಮೆಂಟರ್
Jhulan Goswami - TKR
Follow us
ಝಾಹಿರ್ ಯೂಸುಫ್
|

Updated on: Jul 14, 2024 | 12:07 PM

ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಮಾಜಿ ವೇಗಿ ಜೂಲನ್ ಗೋಸ್ವಾಮಿ (Jhulan Goswami) ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್‌ (TKR) ಮಹಿಳಾ ತಂಡದ ಮೆಂಟರ್ ಆಗಿ ನೇಮಕವಾಗಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವನ್ನು ಹೊಂದಿದ್ದು, ಇದೀಗ ಟಿಕೆಆರ್​ ಮಹಿಳಾ ತಂಡದ ಮಾರ್ಗದರ್ಶಕವಾಗಿ ಜೂಲನ್ ಅವರನ್ನು ನೇಮಿಸಲಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ (WPL) ನಲ್ಲಿ ಜೂಲನ್ ಗೋಸ್ವಾಮಿ ಮುಂಬೈ ಇಂಡಿಯನ್ಸ್ (MI) ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಇದೇ ಮೊದಲ ಬಾರಿಗೆ ವಿದೇಶಿ ಲೀಗ್​ನಲ್ಲಿ ಕಾರ್ಯ ನಿರ್ವಹಿಸಲು ಭಾರತದ ಮಾಜಿ ವೇಗಿ ಸನ್ನದ್ಧರಾಗಿದ್ದಾರೆ.

ಇನ್ನು ಈ ಬಾರಿಯ ವುಮೆನ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾರತೀಯ ಆಟಗಾರ್ತಿಯರು ಸಹ ಕಾಣಿಸಿಕೊಳ್ಳಲಿದ್ದಾರೆ. ಅದರಲ್ಲೂ ಟ್ರಿನ್‌ಬಾಗೊ ನೈಟ್ ರೈಡರ್ಸ್‌ ತಂಡದಲ್ಲಿ ಟೀಮ್ ಇಂಡಿಯಾದ ಜೆಮಿಮಾ ರೊಡ್ರಿಗಸ್ ಮತ್ತು ಶಿಖಾ ಪಾಂಡೆ ಆಯ್ಕೆಯಾಗಿದ್ದಾರೆ.

ಈ ತಂಡವನ್ನು ವೆಸ್ಟ್ ಇಂಡೀಸ್​ನ ಡಿಯಾಂಡ್ರಾ ಡಾಟಿನ್ ಮುನ್ನಡೆಸಲಿದ್ದು, ಇದೇ ತಂಡದಲ್ಲಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸ್ಸೆನ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ವುಮೆನ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲು ಕೆಕೆಆರ್ ಫ್ರಾಂಚೈಸಿ ಮುಂದಾಗಿದೆ.

ಟ್ರಿನ್‌ಬಾಗೊ ನೈಟ್ ರೈಡರ್ಸ್ ಪ್ರಿ-ಡ್ರಾಫ್ಟ್ ಸ್ಕ್ವಾಡ್:

ಡಿಯಾಂಡ್ರಾ ಡಾಟಿನ್, ಮೆಗ್ ಲ್ಯಾನಿಂಗ್, ಜೆಸ್ ಜೊನಾಸೆನ್, ಜೆಮಿಮಾ ರೊಡ್ರಿಗಸ್, ಶಿಖಾ ಪಾಂಡೆ, ಕಿಸಿಯಾ ನೈಟ್, ಶಮಿಲಾ ಕಾನ್ನೆಲ್, ಜೈದಾ ಜೇಮ್ಸ್, ಸಮರಾ ರಾಮನಾಥ್.

ಇದನ್ನೂ ಓದಿ: James Anderson: 3 ವಿಶ್ವ ದಾಖಲೆಗಳನ್ನು ಬದಿಗಿಟ್ಟು ನಿವೃತ್ತಿ ಘೋಷಿಸಿದ ಜೇಮ್ಸ್ ಅ್ಯಂಡರ್ಸನ್

ವುಮೆನ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ ಯಾವಾಗ ಶುರು?

ಈ ಬಾರಿಯ ಡಬ್ಲ್ಯೂಸಿಪಿಎಲ್ ಟೂರ್ನಿಯು ಆಗಸ್ಟ್ 21 ರಿಂದ 29 ರವರೆಗೆ ನಡೆಯಲಿದೆ. ಈ ಟೂರ್ನಿಯಲ್ಲಿ ಬಾರ್ಬಡೋಸ್ ರಾಯಲ್ಸ್, ಗಯಾನಾ ಅಮೆಝಾನ್ ವಾರಿಯರ್ಸ್ ಮತ್ತು ಟ್ರಿನ್‌ಬಾಗೊ ನೈಟ್ ರೈಡರ್ಸ್‌ ತಂಡಗಳು ಕಣಕ್ಕಿಳಿಯಲಿವೆ.

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್