SA20: 34 ಎಸೆತಗಳಲ್ಲಿ 98 ರನ್ ಬಾರಿಸಿದ್ದ JSK 78 ರನ್​ಗೆ ಆಲೌಟ್..!

Joburg Super Kings: ಕೇವಲ 78 ರನ್​ಗಳಿಗೆ ಆಲೌಟ್ ಆಗುವ ಮೂಲಕ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ 2ನೇ ತಂಡ ಎನಿಸಿಕೊಂಡಿದೆ. ಈ ಕಳಪೆ ದಾಖಲೆ ಪಟ್ಟಿಯಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನದಲ್ಲಿದ್ದು. ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ವಿರುದ್ಧದ ಪಂದ್ಯದಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ಕೇವಲ 52 ರನ್​ಗಳಿಗೆ ಆಲೌಟ್ ಆಗಿ ಈ ಹೀನಾಯ ದಾಖಲೆ ಬರೆದಿದೆ.

SA20: 34 ಎಸೆತಗಳಲ್ಲಿ 98 ರನ್ ಬಾರಿಸಿದ್ದ JSK 78 ರನ್​ಗೆ ಆಲೌಟ್..!
JSK-SEC
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 01, 2024 | 8:16 AM

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕೇವಲ 5.4 ಓವರ್​ಗಳಲ್ಲಿ 98 ರನ್ ಬಾರಿಸಿ ಇತಿಹಾಸ ನಿರ್ಮಿಸಿದ್ದ ಜೋಬರ್ಗ್ ಸೂಪರ್ ಕಿಂಗ್ಸ್ (JSK) ತಂಡವು ಇದೀಗ ಕೇವಲ 78 ರನ್​ಗಳಿಗೆ ಆಲೌಟ್ ಆಗಿ ಮುಖಭಂಗಕ್ಕೊಳಗಾಗಿದೆ. ಜೋಹಾನ್ಸ್​ಬರ್ಗ್​ನ ದಿ ವಾಂಡರರ್ಸ್​ ಮೈದಾನದಲ್ಲಿ ನಡೆದ ಟೂರ್ನಿಯ 25ನೇ ಪಂದ್ಯದಲ್ಲಿ ಜೋಬರ್ಗ್​ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಈಸ್ಟರ್ನ್​​ ಕೇಪ್​ ತಂಡಗಳು ಮುಖಾಮುಖಿಯಾಗಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್ (0) ಡೇನಿಯಲ್ ವೊರಾಲ್ ಎಸೆತದಲ್ಲಿ ಶೂನ್ಯಕ್ಕೆ ಔಟಾದರು. ಇದರ ಬೆನ್ನಲ್ಲೇ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೀಝ ಹೆಂಡ್ರಿಕ್ಸ್ (0) ಅವರನ್ನು ಸಹ ವೊರಾಲ್ ಮೊದಲ ಎಸೆತದಲ್ಲೇ ಪೆವಿಲಿಯನ್​ಗೆ ಕಳುಹಿಸಿದರು.

ಇನ್ನು ಯುವ ಆರಂಭಿಕ ಆಟಗಾರ ಲೆಯುಸ್ ಡು ಪ್ಲೂಯ್ 18 ರನ್ ಬಾರಿಸಿ ನಿರ್ಗಮಿಸಿದರೆ, ಮ್ಯಾಡ್ಸೆನ್ 32 ರನ್ ಕಲೆಹಾಕಿದರು. ಈ ಎರಡು ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಸನ್​ರೈಸರ್ಸ್ ಬೌಲರ್​ಗಳು ಜೋಬರ್ಗ್ ಬ್ಯಾಟರ್​ಗಳನ್ನು ಬ್ಯಾಕ್ ಟು ಬ್ಯಾಕ್ ಪೆವಿಲಿಯನ್​ಗೆ ಕಳುಹಿಸಿದರು. ಪರಿಣಾಮ ಜೋಬರ್ಗ್ ಸೂಪರ್ ಕಿಂಗ್ಸ್​ 15.2 ಓವರ್​ಗಳಲ್ಲಿ ಕೇವಲ 78 ರನ್​ಗಳಿಸಿ ಆಲೌಟ್ ಆಯಿತು.

ಸನ್​ರೈಸರ್ಸ್​ ಈಸ್ಟರ್ನ್​ ಕೇಪ್​ ತಂಡದ ಪರ ಡೇನಿಯಲ್ ವೊರಾಲ್ 4 ಓವರ್​ಗಳಲ್ಲಿ 20 ರನ್ ನೀಡಿ 3 ವಿಕೆಟ್ ಪಡೆದರೆ, ಪ್ಯಾಟ್ರಿಕ್ ಕ್ರುಗರ್ 2 ಓವರ್​ಗಳಲ್ಲಿ 8 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇನ್ನು ಮಾರ್ಕೊ ಯಾನ್ಸೆನ್ ಹಾಗೂ ಬೇಯರ್ಸ್ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.

ಸನ್​ರೈಸರ್ಸ್​​ಗೆ ಸೂಪರ್ ಜಯ:

79 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಡೇವಿಡ್ ಮಲಾನ್ (40) ಉತ್ತಮ ಆರಂಭ ಒದಗಿಸಿದ್ದರು. ಆದರೆ ಮೊದಲ ವಿಕೆಟ್​ಗೆ 29 ರನ್​ಗಳ ಜೊತೆಯಾಟವಾಡಿ ಜೋರ್ಡನ್ ಹರ್ಮನ್ (11) ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಾಮ್ ಅಬೆಲ್ ಅಜೇಯ 26 ರನ್​ ಬಾರಿಸುವ ಮೂಲಕ 11 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

5.4 ಓವರ್​ಗಳಲ್ಲಿ 98 ರನ್ ಬಾರಿಸಿದ್ದ JSK:

ಇದಕ್ಕೂ ಮುನ್ನ ಎಂಐ ಕೇಪ್​ಟೌನ್ ವಿರುದ್ಧದ ಪಂದ್ಯದಲ್ಲಿ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡವು ಕೇವಲ 5.4 ಓವರ್​ಗಳಲ್ಲಿ 98 ರನ್ ಚೇಸ್ ಮಾಡಿ ಇತಿಹಾಸ ನಿರ್ಮಿಸಿದ್ದರು. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ 8 ಓವರ್​ಗಳಲ್ಲಿ 80 ರನ್ ಬಾರಿಸಿತ್ತು.

ಡಕ್​​ವರ್ಥ್​ ಲೂಯಿಸ್ ನಿಯಮದ ಪ್ರಕಾರ 8 ಓವರ್​ಗಳಲ್ಲಿ 98 ರನ್​ಗಳ ಟಾರ್ಗೆಟ್ ಪಡೆದ ಜೋಬರ್ಗ್ ಸೂಪರ್ ಕಿಂಗ್ಸ್ ಪರ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಲೆಯುಸ್ ಡು ಪ್ಲೂಯ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಲೆಯುಸ್ ಡು ಪ್ಲೂಯ್ 14 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 41 ರನ್ ಬಾರಿಸಿದರೆ, ಫಾಫ್ ಡುಪ್ಲೆಸಿಸ್ 20 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ ಅರ್ಧಶತಕ ಸಿಡಿಸಿದರು. ಈ ಮೂಲಕ ಕೇವಲ 5.4 ಓವರ್​ಗಳಲ್ಲಿ 98 ರನ್​ಗಳನ್ನು ಚೇಸ್ ಮಾಡಿ ಜೋಬರ್ಗ್ ಸೂಪರ್ ಕಿಂಗ್ಸ್ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

ಇದನ್ನೂ ಓದಿ: ICC Test Rankings: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯದಿದ್ದರೂ ಟಾಪ್-10 ನಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ

ಆದರೆ ಇದೀಗ ಕೇವಲ 78 ರನ್​ಗಳಿಗೆ ಆಲೌಟ್ ಆಗುವ ಮೂಲಕ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ 2ನೇ ತಂಡ ಎನಿಸಿಕೊಂಡಿದೆ. ಈ ಪಟ್ಟಿಯಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನದಲ್ಲಿದ್ದು, ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ವಿರುದ್ಧದ ಪಂದ್ಯದಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ 52 ರನ್​ಗಳಿಗೆ ಆಲೌಟ್ ಆಗಿತ್ತು. ಇದೀಗ 78 ರನ್​ಗಳಿಗೆ ಆಲೌಟ್ ಆಗಿ ಈ ಪಟ್ಟಿಯಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ.

ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ