AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ಸರ್ವಶ್ರೇಷ್ಠ ದಾಖಲೆಯನ್ನು ಜೋ ರೂಟ್ ಮುರೀತಾರೆ: ಮಾಜಿ ನಾಯಕನ ಭವಿಷ್ಯ

Joe Root: ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಜೋ ರೂಟ್ 2ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಸೆಂಚುರಿ ಬಾರಿಸಿದ ಇಂಗ್ಲೆಂಡ್​ನ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದೀಗ ಮೊದಲ ಸ್ಥಾನಕ್ಕೇರುವ ಹೊಸ್ತಿಲಲ್ಲಿರುವ ಜೋ ರೂಟ್ ಮುಂಬರುವ ದಿನಗಳಲ್ಲಿ ಸಚಿನ್ ತೆಂಡೂಲ್ಕರ್ ಅವರ ಸರ್ವಶ್ರೇಷ್ಠ ದಾಖಲೆ ಮೇಲೆ ಕಣ್ಣಿಡಲಿದ್ದಾರೆ.

ಸಚಿನ್ ಸರ್ವಶ್ರೇಷ್ಠ ದಾಖಲೆಯನ್ನು ಜೋ ರೂಟ್ ಮುರೀತಾರೆ: ಮಾಜಿ ನಾಯಕನ ಭವಿಷ್ಯ
Joe Root - Sachin Tendulkar
ಝಾಹಿರ್ ಯೂಸುಫ್
|

Updated on: Jul 24, 2024 | 9:01 AM

Share

ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ದಾಖಲೆಗಳ ಸರದಾರ ಸಚಿನ್ ತೆಂಡೂಲ್ಕರ್ ಅವರ ಸರ್ವಶ್ರೇಷ್ಠ ದಾಖಲೆ ಮುರಿಯಲಿದ್ದಾರೆ. ಹೀಗೆ ಹೇಳಿದ್ದು ಮತ್ಯಾರೂ ಅಲ್ಲ, ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್. ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ 32ನೇ ಟೆಸ್ಟ್ ಶತಕ ಪೂರೈಸಿರುವ ಜೋ ರೂಟ್ ಈಗ ರನ್ ಸರದಾರರ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ. ಅತ್ತ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲು ಇಂಗ್ಲೆಂಡ್ ಬ್ಯಾಟರ್​ಗೆ ಅತ್ಯುತ್ತಮ ಅವಕಾಶವಿದೆ ಎಂದು ಮೈಕೆಲ್ ವಾನ್ ಹೇಳಿದ್ದಾರೆ.

ವಾನ್ ಅವರ ಪ್ರಕಾರ, ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ ಸಚಿನ್ ತೆಂಡೂಲ್ಕರ್ ಅವರು ಬರೆದಿಟ್ಟಿರುವ ಅತೀ ಹೆಚ್ಚು ರನ್​ಗಳ ದಾಖಲೆಯನ್ನು ಮುರಿಯುವುದು ಬಹುತೇಕ ಖಚಿತ. ಏಕೆಂದರೆ ಪ್ರಸ್ತುತ ರೂಟ್ ಅವರ ಫಾರ್ಮ್​ ಗಮನಿಸಿದರೆ ಇದು ಅಸಾಧ್ಯವಂತು ಅಲ್ಲ ಎಂದೆನಿಸುತ್ತದೆ.

  • ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್​ನಲ್ಲಿ 329 ಇನಿಂಗ್ಸ್​ ಆಡಿ ಒಟ್ಟು 15921 ರನ್ ಕಲೆಹಾಕಿದ್ದಾರೆ.
  • ಜೋ ರೂಟ್ 260 ಇನಿಂಗ್ಸ್​ಗಳ ಮೂಲಕ ಈವರೆಗೆ 11940 ರನ್ ಪೇರಿಸಿದ್ದಾರೆ.

ಜೋ ರೂಟ್ ಅವರು ಅದ್ಭುತ ಫಾರ್ಮ್​ನಲ್ಲಿದ್ದಾರೆ. ಇದೇ ಫಾರ್ಮ್​ನಲ್ಲಿ ಬ್ಯಾಟಿಂಗ್ ಮುಂದುವರೆಸಿದರೆ, ಖಂಡಿತವಾಗಿಯೂ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಬಹುದು. ಇತ್ತೀಚಿನ ದಿನಗಳಲ್ಲಿ ಅವರು ಅತ್ಯಂತ ಜಾಗರೂಕರಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಬೇಗನೆ ಸ್ಕೋರ್ ಮಾಡುತ್ತಿದ್ದಾರೆ. ಹೀಗಾಗಿ ಮುಂಬರುವ ಸರಣಿಗಳ ಮೂಲಕ ಸಚಿನ್ ಅವರ ಸರ್ವಶ್ರೇಷ್ಠ ದಾಖಲೆಯನ್ನು ರೂಟ್ ತಮ್ಮದಾಗಿಸಿಕೊಳ್ಳುವುದನ್ನು ಎದುರು ನೋಡಬಹುದು ಎಂದು ಮೈಕೆಲ್ ವಾನ್ ಹೇಳಿದ್ದಾರೆ.

ರೂಟ್ ಕ್ಲಿಯರ್:

33 ವರ್ಷದ ಜೋ ರೂಟ್​ಗೆ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ಟೆಸ್ಟ್ ರನ್​ಗಳ ದಾಖಲೆ ಮುರಿಯಲು ಬೇಕಿರುವುದು ಕೇವಲ 3,982 ರನ್ಸ್ ಮಾತ್ರ. ಈಗಾಗಲೇ 32 ಶತಕ ಸಿಡಿಸಿರುವ ಜೋ ರೂಟ್ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದು, ಹೀಗಾಗಿ ಮುಂಬರುವ ಸರಣಿಗಳ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯತ್ತ ದಾಪುಗಾಲಿಟ್ಟರೂ ಅಚ್ಚರಿಪಡಬೇಕಿಲ್ಲ.

ದಾಖಲೆ ಹೊಸ್ತಿಲಲ್ಲಿ ರೂಟ್:

ಇದೀಗ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ಜೋ ರೂಟ್ ಇಂಗ್ಲೆಂಡ್ ಪರ ಹೊಸ ಇತಿಹಾಸ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಳ್ಳಲು ರೂಟ್​ಗೆ ಬೇಕಿರುವುದು ಕೇವಲ 532 ರನ್​ಗಳು ಮಾತ್ರ.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಜಿ ನಾಯಕ ಅಲಿಸ್ಟರ್ ಕುಕ್. ಇಂಗ್ಲೆಂಡ್ ಪರ 291 ಇನಿಂಗ್ಸ್ ಆಡಿರುವ ಕುಕ್ ಒಟ್ಟು 12472 ರನ್ ಬಾರಿಸಿದ್ದಾರೆ. ಇದೀಗ 11940 ರನ್ ಕಲೆಹಾಕಿರುವ ರೂಟ್​ಗೆ ಮುಂಬರುವ ಸರಣಿಗಳ ಮೂಲಕ ಜೋ ರೂಟ್ ಹೊಸ ಇತಿಹಾಸ ನಿರ್ಮಿಸುವ ನಿರೀಕ್ಷೆಯಿದೆ.

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..