AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ಸಾವಿರ ರನ್… ಸಚಿನ್ ದಾಖಲೆಯತ್ತ ದಾಪುಗಾಲಿಟ್ಟ ಜೋ ರೂಟ್!

Joe Root: ಟೆಸ್ಟ್ ಕ್ರಿಕೆಟ್​ನಲ್ಲಿ ಜೋ ರೂಟ್ ಪ್ರಚಂಡ ಪ್ರದರ್ಶನ ಮುಂದುವರೆದಿದೆ. ಈ ಪ್ರದರ್ಶನದೊಂದಿಗೆ ರೂಟ್ ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿಕ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ 14 ಸಾವಿರ ರನ್​ಗಳ ಗಡಿದಾಟಿದ ಏಕೈಕ ಬ್ಯಾಟ್ಸ್​ಮನ್ ಆಗಿ ಸಚಿನ್ ತೆಂಡೂಲ್ಕರ್ ಗುರುತಿಸಿಕೊಂಡಿದ್ದರು. ಇದೀಗ ಈ ಪಟ್ಟಿಗೆ ಜೋ ರೂಟ್ ಎಂಟ್ರಿ ಕೊಟ್ಟಿದ್ದಾರೆ.

14 ಸಾವಿರ ರನ್... ಸಚಿನ್ ದಾಖಲೆಯತ್ತ ದಾಪುಗಾಲಿಟ್ಟ ಜೋ ರೂಟ್!
Joe Root Image Credit source: GettyImages
ಝಾಹಿರ್ ಯೂಸುಫ್
|

Updated on: Jun 21, 2026 | 12:58 PM

Share

ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಿದಾಗ, ಈ ರನ್ ಶಿಖರವನ್ನೇರಲು ಮತ್ತೊಬ್ಬ ಬ್ಯಾಟರ್​ಗೆ ಸಾಧ್ಯವೇ ಇಲ್ಲ ಎನ್ನಲಾಗಿತ್ತು. ಆದರೀಗ ಕ್ರೀಡಾ ವಿಶ್ಲೇಷಕರ ಈ ಲೆಕ್ಕಾಚಾರವನ್ನು ಇಂಗ್ಲೆಂಡ್​ನ ಜೋ ರೂಟ್ ತಲೆಕೆಳಗಾಗಿಸಿದ್ದಾರೆ. ಅದು ಸಹ 14000+ ರನ್ ಕಲೆಹಾಕುವ ಮೂಲಕ..!

ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಜೋ ರೂಟ್ 75 ರನ್ ಬಾರಿಸಿದ್ದಾರೆ. ಈ ಎಪ್ಪತ್ತೈದು ರನ್​ಗಳೊಂದಿಗೆ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ 14 ಸಾವಿರ ರನ್​ಗಳ ಗಡಿದಾಟಿದ್ದಾರೆ.

ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ 14000 ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.

  • ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕೇವಲ 279 ಇನಿಂಗ್ಸ್‌ಗಳಲ್ಲಿ (171 ಟೆಸ್ಟ್‌ಗಳು) 14 ಸಾವಿರ ರನ್ ಕಲೆಹಾಕಿದ್ದರು. ತಲುಪುವ ಮೂಲಕ ಇಂದಿಗೂ ಅತಿ ವೇಗವಾಗಿ 14,000 ರನ್ ಗಳಿಸಿದ ದಾಖಲೆಯನ್ನು
  • ಜೋ ರೂಟ್: ಇಂಗ್ಲೆಂಡ್‌ನ ಟೆಸ್ಟ್​ ಸ್ಪೆಷಲಿಸ್ಟ್ ಜೋ ರೂಟ್ ತಮ್ಮ 302ನೇ ಇನಿಂಗ್ಸ್‌ನಲ್ಲಿ (165 ನೇ ಟೆಸ್ಟ್ ಪಂದ್ಯ) ಈ ಸಾಧನೆ ಮುಟ್ಟಿದ್ದಾರೆ.

ಅಂದರೆ ಸಚಿನ್ ತೆಂಡೂಲ್ಕರ್ ಅವರು ಆಡಿದ ಇನಿಂಗ್ಸ್​ಗಿಂತ ಹೆಚ್ಚಿನ ಇನಿಂಗ್ಸ್​ಗಳ ಮೂಲಕ ಜೋ ರೂಟ್ 14 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ರಿಕಿ ಪಾಂಟಿಂಗ್ ಮತ್ತು ರಾಹುಲ್ ದ್ರಾವಿಡ್ ಅವರಂತಹ ದಂತಕಥೆಗಳನ್ನು ಹಿಂದಿಕ್ಕಿ ಸಾರ್ವಕಾಲಿಕ ರನ್‌ ಸರದಾರರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ.

  • ಸಚಿನ್ ತೆಂಡೂಲ್ಕರ್: ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಮಾಸ್ಟರ್ ಬ್ಲಾಸ್ಟರ್ ಒಟ್ಟು 15,921 ರನ್​ ಕಲೆಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
  • ಜೋ ರೂಟ್: ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಈ ದಾಖಲೆ ಮುರಿಯಲು ಜೋ ರೂಟ್ ಇನ್ನೂ 1,848 ರನ್‌ ಕಲೆಹಾಕಬೇಕಿದೆ. ಸದ್ಯ 14072* ರನ್​​ಗಳಿಸಿರುವ ರೂಟ್ ಮುಂಬರುವ ಸರಣಿಗಳಲ್ಲೂ ಉತ್ತಮ ಪ್ರದರ್ಶನ ನೀಡಿದರೆ ಈ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಬಹುದು.

ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಟಾಪ್-5 ಬ್ಯಾಟರ್​ಗಳು:

ಸ್ಥಾನ ಆಟಗಾರ ಇನಿಂಗ್ಸ್ ಒಟ್ಟು ರನ್ಸ್
1 ಸಚಿನ್ ತೆಂಡೂಲ್ಕರ್ (ಭಾರತ) 329 15,921
2 ಜೋ ರೂಟ್ (ಇಂಗ್ಲೆಂಡ್)* 302 14,073
3 ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) 287 13,378
4 ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ) 280 13,289
5 ರಾಹುಲ್ ದ್ರಾವಿಡ್ (ಭಾರತ) 286 13,288

ಇದನ್ನೂ ಓದಿ: ಪೊಲಾರ್ಡ್​ ಪವರ್​ಗೆ ಗೇಲ್ ಸಾರ್ವಕಾಲಿಕ ವಿಶ್ವ ದಾಖಲೆ ಉಡೀಸ್!

ಸದ್ಯ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಜೋ ರೂಟ್ ಮುಂದಿನ ವರ್ಷದವರೆಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇದರ ನಡುವೆ ಅವರು 1,848  ರನ್ ಕಲೆಹಾಕಿ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?