
ಏಕದಿನ ಕ್ರಿಕೆಟ್‌ನಲ್ಲಿ ಜೋ ರೂಟ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಪಾಕಿಸ್ತಾನದ ಮಾಜಿ ಆಟಗಾರ ಜಾವೆದ್ ಮಿಯಾಂದಾದ್ ಹೆಸರಿನಲ್ಲಿದ್ದ ವರ್ಲ್ಡ್ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.ಭಾರತದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೂಟ್ ಒಮ್ಮೆಯೂ ಔಟ್ ಆಗಿರಲಿಲ್ಲ. ಆಡಿದ ಮೂರು ಇನಿಂಗ್ಸ್ಗಳ ಮೂಲಕ ಕಲೆಹಾಕಿದ್ದು ಬರೋಬ್ಬರಿ 249 ರನ್ಗಳು.
ಈ 249 ರನ್ಗಳೊಂದಿಗೆ ದ್ವಿಪಕ್ಷೀಯ ಏಕದಿನ ಸರಣಿಯೊಂದರಲ್ಲಿ ಒಮ್ಮೆಯೂ ಔಟಾಗದೆ ಅತಿ ಹೆಚ್ಚು ರನ್ ಕಲೆಹಾಕಿದ ಜಗತ್ತಿನ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ರೂಟ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ಜಾವೆದ್ ಮಿಯಾಂದಾದ್ ಹೆಸರಿನಲ್ಲಿತ್ತು.
ಈ ಮೂಲಕ ಮೂರು ಮ್ಯಾಚ್ಗಳ ಸರಣಿಯ ಮೂರು ಇನಿಂಗ್ಸ್ಗಳಲ್ಲೂ ಅಜೇಯರಾಗಿ ಉಳಿದು ಗರಿಷ್ಠ ಸ್ಕೋರ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಜೋ ರೂಟ್ ಅಳಿಸಿ ಹಾಕಿದ್ದಾರೆ.
ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅಜೇಯರಾಗಿ ಉಳಿದು ಗರಿಷ್ಠ ಸ್ಕೋರ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಜೋ ರೂಟ್ ಪಾಲಾಯಿತು.
ಅಷ್ಟೇ ಅಲ್ಲದೆ ದ್ವಿಪಕ್ಷೀಯ ಸರಣಿಯೊಂದರಲ್ಲಿ ಅಜೇಯರಾಗಿ ಉಳಿದು ಗರಿಷ್ಠ ಸ್ಕೋರ್ ಗಳಿಸಿದ ವಿಶ್ವ ದಾಖಲೆಯನ್ನು ಕೂಡ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.ಈ ಹಿಂದೆ ಈ ದಾಖಲೆ ಇಂಗ್ಲೆಂಡ್ ತಂಡದ ಮತ್ತೊಬ್ಬ ಸ್ಟಾರ್ ಆಟಗಾರ ಜೋಸ್ ಬಟ್ಲರ್ ಹೆಸರಿನಲ್ಲಿತ್ತು.
ಈ ಅದ್ಭುತ ಸರಣಿಯ ಮೂಲಕ ಜೋ ರೂಟ್ ಇಂಗ್ಲೆಂಡ್ ಕ್ರಿಕೆಟ್ ಇತಿಹಾಸದಲ್ಲೇ ಮತ್ತೊಂದು ಅಪರೂಪದ ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಸತತ 6 ಅರ್ಧಶತಕಗಳನ್ನು (61, 75, 111*, 76*, 99*, 74*) ಬಾರಿಸಿದ ಇಂಗ್ಲೆಂಡ್‌ನ ಮೊದಲ ಬ್ಯಾಟರ್ ಎಂಬ ಕೀರ್ತಿಗೂ ರೂಟ್ ಭಾಜನರಾಗಿದ್ದಾರೆ.
ಇದನ್ನೂ ಓದಿ: ರೋಹಿತ್ ಶರ್ಮಾ ಸೆಂಚುರಿಗೆ ಸಚಿನ್ ಸಾರ್ವಕಾಲಿಕ ದಾಖಲೆ ಉಡೀಸ್
ಜೋ ರೂಟ್ ಅವರ ಈ ಅಸಾಧಾರಣ ಬ್ಯಾಟಿಂಗ್ ಪ್ರದರ್ಶನವು ಕೇವಲ ಅವರ ರನ್ ಗಳಿಸುವ ಸಾಮರ್ಥ್ಯವನ್ನು ಮಾತ್ರವಲ್ಲ, ಅವರ ಅದ್ಭುತ ಸ್ಥಿರತೆ ಮತ್ತು ಸುದೀರ್ಘ ಕಾಲ ಕ್ರೀಸ್‌ನಲ್ಲಿ ನಿಲ್ಲುವ ದಕ್ಷತೆಯನ್ನು ಜಗತ್ತಿಗೆ ಮತ್ತೊಮ್ಮೆ ಸಾಬೀತುಪಡಿಸಿರುವುದು ಸುಳ್ಳಲ್ಲ.
Published On - 1:28 pm, Mon, 20 July 26