AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs ENG: ಜೋ ರೂಟ್ ಆಕರ್ಷಕ ಶತಕ: ದ್ವಿತೀಯ ಟೆಸ್ಟ್​ನಲ್ಲಿ ಬೃಹತ್ ಮೊತ್ತದತ್ತ ಇಂಗ್ಲೆಂಡ್

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ಆರಂಭದಲ್ಲೇ ಕೇವಲ 4 ರನ್​ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜ್ಯಾಕ್ ಕ್ರೋಲೆ ಖಾತೆ ತೆರೆಯದೆ ಜೇಡನ್ ಸೀಲ್ಸ್ ಬೌಲಿಂಗ್​ನಲ್ಲಿ ಔಟಾದರು. ಎರಡನೇ ವಿಕೆಟ್​ಗೆ ನಾಯಕ ರೂಟ್ ಜೊತೆಯಾದ ಅಲೆಕ್ಸ್ ಲೀಸ್ 76 ರನ್​ಗಳ ಕಾಣಿಕೆ ನೀಡಿದರು. ಲೀಸ್ 138 ಎಸೆತಗಳಲ್ಲಿ 30 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

WI vs ENG: ಜೋ ರೂಟ್ ಆಕರ್ಷಕ ಶತಕ: ದ್ವಿತೀಯ ಟೆಸ್ಟ್​ನಲ್ಲಿ ಬೃಹತ್ ಮೊತ್ತದತ್ತ ಇಂಗ್ಲೆಂಡ್
WI vs ENG 2nd Test
TV9 Web
| Edited By: |

Updated on: Mar 17, 2022 | 11:56 AM

Share

ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಿ ಟೆಸ್ಟ್ ಸರಣಿಯನ್ನು ಆಡುತ್ತಿರುವ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ (West Indies vs England) ವಿರುದ್ಧದ ಮೊದಲ ಟೆಸ್ಟ್ ಅನ್ನು ಡ್ರಾ ಮಾಡಿಕೊಂಡಿದ್ದರೆ, ದ್ವಿತೀಯ ಟೆಸ್ಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದೆ. ಬಾರ್ಬಡೊಸ್​ನ ಕೆನ್ಸಿಂಗ್​ಟಾನ್​ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್​ ಪಂದ್ಯದಲ್ಲಿ ನಾಯಕ ಜೋ ರೂಟ್ (Joe Root) ಅವರ ಆಕರ್ಷಕ ಶತಕದ ನೆರವಿನಿಂದ ಆಂಗ್ಲರು ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದ್ದಾರೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಇಂಗ್ಲೆಂಡ್ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 244 ರನ್ ಕಲೆಹಾಕಿದೆ. ರೂಟ್ ಶತಕ ಸಿಡಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇವರಿಗೆ ಅತ್ಯುತ್ತಮ ಸಾಥ್ ನೀಡಿದ ಡೆನಿಯಲ್ ಲಾರೆನ್ಸ್ (Dan Lawrence) 91 ರನ್ ಗಳಿಸಿ ಔಟಾದಾಗ ದಿನದಾಟವನ್ನು ಕೊನೆಗೊಳಿಸಲಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ಆರಂಭದಲ್ಲೇ ಕೇವಲ 4 ರನ್​ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜ್ಯಾಕ್ ಕ್ರೋಲೆ ಖಾತೆ ತೆರೆಯದೆ ಜೇಡನ್ ಸೀಲ್ಸ್ ಬೌಲಿಂಗ್​ನಲ್ಲಿ ಔಟಾದರು. ಎರಡನೇ ವಿಕೆಟ್​ಗೆ ನಾಯಕ ರೂಟ್ ಜೊತೆಯಾದ ಅಲೆಕ್ಸ್ ಲೀಸ್ 76 ರನ್​ಗಳ ಕಾಣಿಕೆ ನೀಡಿದರು. ಲೀಸ್ 138 ಎಸೆತಗಳಲ್ಲಿ 30 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ಹೀಗೆ 100 ರನ್​ಗೂ ಮೊದಲೇ 2 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್​ಗೆ ನಾಯಕನ ಜೊತೆ ಡೆನಿಯಲ್ ಲಾರೆನ್ಸ್ ಇನ್ನಿಂಗ್ಸ್ ಕಟ್ಟಿದರು. ಎಚ್ಚರಿಕೆಯ ಆಟ ಪ್ರದರ್ಶಿಸಿದ ಈ ಜೋಡಿ ತಂಡಕ್ಕೆ ಆಧಾರವಾಗಿ ನಿಂತಿತು. ಬರೋಬ್ಬರಿ 164 ರನ್​ಗಳ ಜೊತೆಯಾಟ ಆಡಿದ ಇವರಿಬ್ಬರು ತಂಡದ ಮೊತ್ತವನ್ನು 250ರ ಅಂಚಿಗೆ ತಂದಿಟ್ಟರು. ಶತಕದ ಅಂಚಿನಲ್ಲಿ ಎಡವಿದ ಲಾರೆನ್ಸ್ 150 ಎಸೆತಗಳಲ್ಲಿ 13 ಬೌಂಡರಿ, 1 ಸಿಕ್ಸರ್​ನೊಂದಿಗೆ 91 ರನ್ ಗಳಿಸಿ ಜೇಸನ್ ಹೋಲ್ಡರ್​ಗೆ ವಿಕೆಟ್ ಒಪ್ಪಿಸಿದರು.

ರೂಟ್ 246 ಎಸೆತಗಳಲ್ಲಿ 12 ಬೌಂಡರಿಯೊಂದಿಗೆ 119 ರನ್ ಸಿಡಿಸಿ ಅಜೇಯರಾಗಿ ಉಳಿದಿದ್ದಾರೆ. ಇಂಗ್ಲೆಂಡ್ ಮೊದಲ ದಿನದಾಟದ ಅಂತ್ಯಕ್ಕೆ 89.5 ಓವರ್​ನಲ್ಲಿ 3 ವಿಕೆಟ್ ಕಳೆದುಕೊಂಡು 244 ರನ್ ಬಾರಿಸಿದೆ. ವೆಸ್ಟ್ ಇಂಡೀಸ್ ಪರ ಜೇಡನ್ ಸೀಲ್ಸ್, ವೀರಸ್ವಾಮಿ ಪೆರುಮಾಲ್ ಹಾಗೂ ಜೇಸನ್ ಹೋಲ್ಡರ್ ತಲಾ 1 ವಿಕೆಟ್ ಕಿತ್ತಿದ್ದಾರೆ.

ಮೊದಲ ಟೆಸ್ಟ್​ನಲ್ಲಿ ಏನಾಯಿತು?:

ಅಂಟಿಗಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಕಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ  ಜಾನಿ ಬೈರ್​ಸ್ಟೋ ಅವರ 140 ರನ್​ಗಳ ನೆರವಿನಿಂದ 311 ರನ್​ ಗಳಿಸಿತ್ತು. ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಅಲ್ಪ ಮುನ್ನಡೆ ಸಾಧಿಸಿ 375 ರನ್ ಕಲೆಹಾಕಿತ್ತು. ಬಳಿಕ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್​ನಲ್ಲಿ ನಾಯಕ ಜೋ ರೂಟ್ ಹಾಗೂ ಜ್ಯಾಕ್ ಕ್ರೋಲೆ ಅವರ ಶತಕದ ನೆರವಿನಿಂದ 349 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಅಂತಿಮ ದಿನದಾಟದ ಅಂತ್ಯಕ್ಕೆ 147 ರನ್ ಗಳಿಸಿದ ಕಾರಣ ಪಂದ್ಯ ಡ್ರಾ ಎಂದು ಘೋಷಿಸಲಾಯಿತು.

IPL 2022: ಈ ವರ್ಷದ ಆರೆಂಜ್ ಕ್ಯಾಪ್​ಗೆ 4 ಭಾರತೀಯ ಮತ್ತು ಒಬ್ಬ ವಿದೇಶಿ ಆಟಗಾರನ ನಡುವೆ ಪೈಪೋಟಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?