Joe Root: ಟೆಸ್ಟ್​ನಲ್ಲಿ ತಂಡದ ಕಳಪೆ ಪ್ರದರ್ಶನ; ಇಂಗ್ಲೆಂಡ್ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದ ಜೋ ರೂಟ್!

Joe Root: ಜೋ ರೂಟ್ ನಾಯಕತ್ವದಲ್ಲಿ ಇಂಗ್ಲೆಂಡ್ ತಂಡ ಕಳೆದ 18 ಟೆಸ್ಟ್ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಭಾರತ ವಿರುದ್ಧದ ಲೀಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡಕ್ಕೆ ಕೊನೆಯ ಗೆಲುವು ಸಿಕ್ಕಿತ್ತು.

Joe Root: ಟೆಸ್ಟ್​ನಲ್ಲಿ ತಂಡದ ಕಳಪೆ ಪ್ರದರ್ಶನ; ಇಂಗ್ಲೆಂಡ್ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದ ಜೋ ರೂಟ್!
ಜೋ ರೂಟ್
Follow us
TV9 Web
| Updated By: ಪೃಥ್ವಿಶಂಕರ

Updated on: Apr 15, 2022 | 3:15 PM

ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜೋ ರೂಟ್ (Joe Root) ಇಂಗ್ಲೆಂಡ್ ಟೆಸ್ಟ್ ನಾಯಕತ್ವ ತೊರೆಯುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜೋ ರೂಟ್ ಇಂಗ್ಲೆಂಡ್‌ನ ಟೆಸ್ಟ್ ತಂಡದ ನಾಯಕರಾಗಿದ್ದು, ಅವರ ನಾಯಕತ್ವದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ತಂಡದ ಪ್ರದರ್ಶನವು ತುಂಬಾ ಕಳಪೆಯಾಗಿತ್ತು. ಆಶಸ್ ಸರಣಿಯ ಸೋಲಿನ ನಂತರ ಜೋ ರೂಟ್ ನಾಯಕತ್ವವನ್ನು ತೊರೆಯುವಂತೆ ಒತ್ತಡ ಹೆಚ್ಚಾಗಿತ್ತು. ಆದರೆ ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಸರಣಿ ಕಳೆದುಕೊಂಡ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. 2017 ರಲ್ಲಿ ಜೋ ರೂಟ್ ಇಂಗ್ಲೆಂಡ್‌ನ ಟೆಸ್ಟ್ ನಾಯಕತ್ವ (Test captain of England) ವಹಿಸಿಕೊಂಡಿದ್ದರು. ಅಲೆಸ್ಟರ್ ಕುಕ್ ನಂತರ ರೂಟ್ ಇಂಗ್ಲೆಂಡ್‌ನ ಟೆಸ್ಟ್ ತಂಡದ ನಾಯಕರಾಗಿದ್ದರು. ನಾಯಕನಾಗಿ ಜೋ ರೂಟ್ ಮೊದಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ್ದರು. ರೂಟ್ ದಕ್ಷಿಣ ಆಫ್ರಿಕಾ ವಿರುದ್ಧ 190 ರನ್‌ಗಳ ಇನಿಂಗ್ಸ್ ಆಡಿದರು. ಇದೀಗ 5 ವರ್ಷಗಳ ನಂತರ ಜೋ ರೂಟ್ ಟೆಸ್ಟ್ ನಾಯಕತ್ವ ತೊರೆದಿದ್ದಾರೆ.

ಜೋ ರೂಟ್ ನಾಯಕತ್ವದಲ್ಲಿ ಇಂಗ್ಲೆಂಡ್ ತಂಡ ಕಳೆದ 18 ಟೆಸ್ಟ್ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಭಾರತ ವಿರುದ್ಧದ ಲೀಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡಕ್ಕೆ ಕೊನೆಯ ಗೆಲುವು ಸಿಕ್ಕಿತ್ತು. ಇದಾದ ಬಳಿಕ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಈ ತಂಡ 1-2ರಲ್ಲಿ ಹಿನ್ನಡೆ ಕಂಡಿತ್ತು. ಆಶಸ್ ಸರಣಿಯಲ್ಲೂ ಹೀನಾಯ ಸೋಲು ಕಂಡಿತ್ತು. ಇದರ ಜೊತೆಗೆ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್ ತಂಡಕ್ಕೆ ಸಾಧ್ಯವಾಗಲಿಲ್ಲ. ಕಳೆದ 18 ಟೆಸ್ಟ್‌ಗಳಲ್ಲಿ 11ರಲ್ಲಿ ಇಂಗ್ಲೆಂಡ್ ಸೋತಿದೆ. ಇದೇ ಕಾರಣಕ್ಕೆ ಜೋ ರೂಟ್ ನಾಯಕತ್ವ ತೊರೆಯಬೇಕಾಯಿತು.

ನಾಯಕನಾಗಿ ಜೋ ರೂಟ್ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು ಜೋ ರೂಟ್ ಇಂಗ್ಲೆಂಡ್‌ಗೆ ಅತಿ ಹೆಚ್ಚು ಪಂದ್ಯಗಳ ನಾಯಕತ್ವ ವಹಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ರೂಟ್ 64 ಟೆಸ್ಟ್‌ಗಳಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದ್ದಾರೆ. ಅದರಲ್ಲಿ 27 ಪಂದ್ಯಗಳನ್ನು ಗೆದ್ದಿದ್ದರೆ 26 ಪಂದ್ಯಗಳಲ್ಲಿ ಸೋಲು ಕಂಡಿದೆ. ಜೊತೆಗೆ 11 ಟೆಸ್ಟ್ ಪಂದ್ಯಗಳು ಡ್ರಾಗೊಂಡಿವೆ. ಜೋ ರೂಟ್ ಟೆಸ್ಟ್ ನಾಯಕನಾಗಿ ಉತ್ತಮವಾಗಿ ಬ್ಯಾಟ್ ಬೀಸಿದ್ದಾರೆ. ಅವರ ಬ್ಯಾಟ್‌ನಿಂದ ಒಟ್ಟು 14 ಶತಕಗಳು ಬಂದಿವೆ. 64 ಟೆಸ್ಟ್‌ಗಳಲ್ಲಿ, ಜೋ ರೂಟ್ 46 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 5295 ರನ್ ಗಳಿಸಿದ್ದಾರೆ.

ನಾಯಕತ್ವ ತೊರೆದ ಮೇಲೆ ರೂಟ್ ಹೇಳಿದ್ದೇನು? ಜೋ ರೂಟ್ ಮೊದಲಿನಿಂದಲೂ ರಕ್ಷಣಾತ್ಮಕ ನಾಯಕ ಎಂದು ಪರಿಗಣಿಸಲ್ಪಟ್ಟರು. ಆಶಸ್ ಸರಣಿಯ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಇಯಾನ್ ಚಾಪೆಲ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಇದೀಗ ಜೋ ರೂಟ್ ನಾಯಕತ್ವ ತೊರೆದಿದ್ದು, ಈ ವಿಚಾರವಾಗಿ ನಾಯಕತ್ವ ತೊರೆಯುವುದು ತಮಗೆ ದೊಡ್ಡ ಸವಾಲಾಗಿದೆ ಎಂದಿದ್ದಾರೆ. ನಾಯಕತ್ವ ತೊರೆಯುವ ನಿರ್ಧಾರ ನನಗೆ ತುಂಬಾ ಕಷ್ಟಕರವಾಗಿತ್ತು ಎಂದು ಜೋ ರೂಟ್ ಹೇಳಿದ್ದಾರೆ. ನಾನು ಈ ನಿರ್ಧಾರವನ್ನು ತೆಗೆದುಕೊಳ್ಳವ ಮೊದಲು ನಾನು ಸ್ನೇಹಿತರು ಮತ್ತು ಕುಟುಂಬದೊಂದಿಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನಾಯಕತ್ವ ತೊರೆಯಲು ಇದು ಸರಿಯಾದ ಸಮಯ ಎಂದು ನನಗೆ ತಿಳಿದಿದೆ ಎಂದಿದ್ದಾರೆ.

ಇದನ್ನೂ ಓದಿ:Big news: ದೀಪಕ್ ಚಹರ್ 4 ತಿಂಗಳು ಕ್ರಿಕೆಟ್‌ನಿಂದ ದೂರ! ಐಪಿಎಲ್ ಜೊತೆಗೆ ಟಿ 20 ವಿಶ್ವಕಪ್​ಗೂ ಗೈರು?

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ