ENG vs NZ, 1st Test: ಇಂಗ್ಲೆಂಡ್ ಬೌಲರ್​ಗಳ ಬಿರುಗಾಳಿಗೆ ತಬ್ಬಿಬ್ಬಾದ ನ್ಯೂಜಿಲೆಂಡ್: ಗೆಲುವಿನತ್ತ ಆಂಗ್ಲರು

England vs New Zealand, 1st Test: ಆಂಗ್ಲರ ಗೆಲುವಿಗೆ ಇನ್ನು ಕೇವಲ 61 ರನ್​ಗಳ ಅವಶ್ಯಕತೆ ಮಾತ್ರ ಇದೆ. ಹೀಗಾಗಿ ಬಹುತೇಕ ಗೆಲುವಿನ ಅಂಚಿನಲ್ಲಿ ಸ್ಟೋಕ್ಸ್ ಪಡೆ ಇದೆ. ಇತ್ತ ನ್ಯೂಜಿಲೆಂಡ್ ಗೆಲ್ಲಬೇಕಾದರೆ 61 ರನ್​ಗು ಮುನ್ನ ಆಂಗ್ಲರ 5 ವಿಕೆಟ್ ಕೀಳಬೇಕಿದೆ.

ENG vs NZ, 1st Test: ಇಂಗ್ಲೆಂಡ್ ಬೌಲರ್​ಗಳ ಬಿರುಗಾಳಿಗೆ ತಬ್ಬಿಬ್ಬಾದ ನ್ಯೂಜಿಲೆಂಡ್: ಗೆಲುವಿನತ್ತ ಆಂಗ್ಲರು
Joe Root ENG vs NZ 1st Test
Follow us
| Updated By: Vinay Bhat

Updated on:Jun 05, 2022 | 7:58 AM

ಇಂಗ್ಲೆಂಡ್ ಪ್ರವಾಸದಲ್ಲಿರುವ ನ್ಯೂಜಿಲೆಂಡ್ (England vs New Zealand) ಕ್ರಿಕೆಟ್ ತಂಡ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಲಂಡನ್​ನ ಲಾರ್ಡ್ಸ್ (Lords)​ ಮೈದಾನದಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ನಾಲ್ಕನೇ ದಿನಕ್ಕೆ ಮುಕ್ತಾಯಗೊಳ್ಳುವ ಎಲ್ಲ ಲಕ್ಷಣಗಳಿವೆ. ಆಂಗ್ಲರ ಗೆಲುವಿಗೆ ಇನ್ನು ಕೇವಲ 61 ರನ್​ಗಳ ಅವಶ್ಯಕತೆ ಮಾತ್ರ ಇದೆ. ಹೀಗಾಗಿ ಬಹುತೇಕ ಗೆಲುವಿನ ಅಂಚಿನಲ್ಲಿ ಸ್ಟೋಕ್ಸ್ ಪಡೆ ಇದೆ. ಇತ್ತ ನ್ಯೂಜಿಲೆಂಡ್ ಗೆಲ್ಲಬೇಕಾದರೆ 61 ರನ್​ಗು ಮುನ್ನ ಆಂಗ್ಲರ 5 ವಿಕೆಟ್ ಕೀಳಬೇಕಿದೆ. ಗೆಲುವಿಗೆ 277 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ಜೋ ರೂಟ್ (Joe Root) ಅವರ ಅಜೇಯ 77 ರನ್​ಗಳ ನೆರವಿನಿಂದ ಮೂರನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 216 ರನ್ ಗಳಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಬ್ಯಾಟಿಂಗ್ ಆರಂಭಿಸಿದ ಕಿವೀಸ್ ಪಡೆ ಭಾರೀ ಆಘಾತಕ್ಕೆ ಒಳಗಾಗಿ ಅಗ್ರ ಕ್ರಮಾಂಕದ ಆರು ಆಟಗಾರರು ಶೀಘ್ರವಾಗಿ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿದರು. ಇಂಗ್ಲೆಂಡ್ ತಂಡಕ್ಕೆ ಅನುಭವಿ ಜೇಮ್ಸ್ ಆಂಡರ್ಸನ್ ಹಾಗೂ ಚೊಚ್ಚಲ ಪಂದ್ಯವಾಡುತ್ತಿರುವ ಮ್ಯಾಟಿ ಪಾಟ್ಸ್ ತಲಾ 4 ವಿಕೆಟ್ಸ್ ಪಡೆದು ಮಿಂಚಿದರು. ಪ್ರಮುಖ ಬ್ಯಾಟರ್​ಗಳ ವೈಫಲ್ಯದ ನಡುವೆಯೂ ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕಾಲಿನ್ ಡಿಗ್ರ್ಯಾಂಡ್ಹೊಮ್ 42(50), ಟಿಮ್ ಸೌಥಿ 26(23) ಉಪಯುಕ್ತ ಬ್ಯಾಟಿಂಗ್ ಮೂಲಕ ನೆರವಾದರು. ಪರಿಣಾಮ ಶತಕದ ಗಡಿದಾಟಿದ ಕಿವೀಸ್ 132 ರನ್​ಗಳಿಗೆ ಸರ್ವಪತನ ಕಂಡಿತು.

French Open 2022 Mens Final: ಗುರು ಶಿಷ್ಯರ ನಡುವೆ ಫೈನಲ್ ಕಾಳಗ! ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ

ಇದನ್ನೂ ಓದಿ
Image
Deepak Chahar Wedding: ನಿನ್ನ ಬೆನ್ನು ಹುಷಾರು.. ವಿಶ್ವಕಪ್ ಇದೆ; ಹನಿಮೂನ್​ಗೆ ಹೊರಟ ದೀಪಕ್​ ಕಾಲೆಳೆದ ತಂಗಿ
Image
French Open 2022: ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಗೆದ್ದ ಪೋಲೆಂಡ್‌ನ ಇಗಾ ಸ್ವಿಟೆಕ್..!
Image
IND vs SA: ಭಾರತ- ಆಫ್ರಿಕಾ ಟಿ20 ಪಂದ್ಯದ ಟಿಕೆಟ್ ನಾಳೆಯಿಂದ ಲಭ್ಯ! ಟಿಕೆಟ್ ಬುಕ್ ಮಾಡುವುದು ಹೇಗೆ?
Image
T20 Blast: 63 ರನ್‌, 9 ವಿಕೆಟ್! ಟಿ20 ಬ್ಲಾಸ್ಟ್​ನಲ್ಲಿ ಮಿಂಚಿದ ರಾಜಸ್ಥಾನ್ ರಾಯಲ್ಸ್‌ ಬೌಲರ್

ನಂತರ ತನ್ನ ಮೊದಲ ಇನ್ನಿಂಗ್ಸ್​ ಶುರುಮಾಡಿದ ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದ ಅಲೆಕ್ಸ್ ಲೀಸ್ 25(77) ಹಾಗೂ ಜ್ಯಾಕ್ ಕ್ರಾವ್ಲೆ 43(56) ಮೊದಲ ವಿಕೆಟ್​​ಗೆ 59 ರನ್ ಗಳ ಭರ್ಜರಿ ಆರಂಭ ನೀಡಿದರು. ಆದರೆ ನಂತರದಲ್ಲಿ ನಾಟಕೀಯ ಕುಸಿತ ಕಂಡ ಆಂಗ್ಲರ ಪಡೆ, ಕೇವಲ 25 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡು ಭಾರೀ ಆಘಾತ ಕಂಡಿತು. ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕ ಬೆನ್ ಸ್ಟೋಕ್ಸ್(1) ಸೇರಿದಂತೆ ಯಾವುದೇ ಆಟಗಾರರು ನೆಲಕಚ್ಚಿ ಆಡಲಿಲ್ಲ. ಮೊದಲ ದಿನದಂತ್ಯಕ್ಕೆ ಇಂಗ್ಲೆಂಡ್​ 7 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು.

ಎರಡನೇ ದಿನದಾಟ ಆರಂಭಿಸಿದ ಇಂಗ್ಲೆಂಡ್ 20 ರನ್‌ಗಳನ್ನು ಸೇರಿಸುವಲ್ಲಿ ಮಾತ್ರವೇ ಯಶಸ್ವಿಯಾಗಿ 141 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 9 ರನ್‌ಗಳ ಅಲ್ಪ ಮುನ್ನಡೆಯನ್ನು ಪಡೆಯಿತು. ಅದಾದ ಬಳಿಕ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಮತ್ತೊಮ್ಮೆ ಕುಸಿತ ಕಾಣುತ್ತಾ ಸಾಗಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಟಾಮ್‌ ಲಾಥಂ(14), ವಿಲ್‌ ಯಂಗ್(1), ಕೇನ್‌ ವಿಲಿಯಂಸನ್(15)‌ ಹಾಗೂ ಡ್ವೇನ್‌ ಕಾನ್ವೆ(13) ನಿರೀಕ್ಷಿತ ಬ್ಯಾಟಿಂಗ್‌ ಪ್ರದರ್ಶಿಸುವಲ್ಲಿ ವಿಫಲರಾದರು. ಪರಿಣಾಮ ಕಿವೀಸ್‌ ಪಡೆ 56 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು.

ಆದರೆ, 5ನೇ ವಿಕೆಟ್‌ಗೆ ಜೊತೆಯಾದ ಟಾಮ್‌ ಬ್ಲಂಡೆಲ್‌(90*) ಹಾಗೂ ಡ್ಯಾರಿ ಮಿಚೆಲ್(97*)‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಟಾಪ್‌ ಆರ್ಡರ್ ವೈಫಲ್ಯದ ನಡುವೆಯೂ ಜವಾಬ್ದಾರಿಯುತ ಆಟವಾಡಿದ ಈ ಜೋಡಿ 5ನೇ ವಿಕೆಟ್‌ಗೆ ಅಜೇಯ 180 ರನ್‌ಗಳ ಜೊತೆಯಾಟದಿಂದ ತಂಡಕ್ಕೆ ಆಸರೆಯಾದರು. ಪರಿಣಾಮ 2ನೇ ದಿನದ ಅಂತ್ಯಕ್ಕೆ ನ್ಯೂಜಿಲೆಂಡ್‌ 4 ವಿಕೆಟ್‌ ನಷ್ಟಕ್ಕೆ 236 ರನ್‌ಗಳಿಸಿ, 227 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು.

ಮೂರನೇ ದಿನದಾಟ ನ್ಯೂಜಿಲೆಂಡ್ ಬೇಗನೆ ಎಲ್ಲ ವಿಕೆಟ್ ಕಳೆದುಕೊಂಡಿತು. ಡ್ಯಾರಿ ಮಿಚೆಲ್‌ (107) ಶತಕ ಗಳಿಸಿ ಔಟಾದರೆ ಟಾಮ್‌ ಬ್ಲಂಡೆಲ್‌ 96 ರನ್​ಗೆ ಬ್ಯಾಟ್ ಕೆಳಗಿಟ್ಟರು. ಪರಿಣಾಮ ನ್ಯೂಜಿಲೆಂಡ್ 285 ರನ್‌ ಗಳಿಸಿ ಆಲೌಟ್ ಆಗಿ ಎದುರಾಳಿಗೆ ಗೆಲ್ಲಲು 277 ರನ್​ಗಳ ಟಾರ್ಗೆಟ್ ನೀಡಿತು. ಇಂಗ್ಲೆಂಡ್ ಪರ ಮ್ಯಾಟಿ ಪೋಟ್ಸ್ ಹಾಗೂ ಬ್ರಾಡ್ ತಲಾ 3 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ಕೂಡ 69 ರನ್​ಗೆ 4 ವಿಕೆಟ್  ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ, ಜೋ ರೂಟ್ ಹಾಗೂ ನಾಯಕ ಬೆನ್ ಸ್ಟೋಕ್ಸ್​ ಎಚ್ಚರಿಕೆಯ ಆಟವಾಡಿ 90 ರನ್​ಗಳ ಕಾಣಿಕೆ ನೀಡಿದರು. ಸ್ಟೋಕ್ಸ್ 110 ಎಸೆತಗಳಲ್ಲಿ 54 ರನ್​ಗೆ ಔಟಾದರು. ಸದ್ಯ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು 216 ರನ್ ಗಳಿಸಿದೆ. ರೂಟ್ 77 ರನ್ ಗಳಿಸಿ ಹಾಗೂ ಬೆನ್ ಫೋಕ್ಸ್ 9 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:58 am, Sun, 5 June 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ