AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಇಂಡಿಯನ್ಸ್ ಫ್ಯಾನ್ಸ್​ಗೆ ಗುಡ್​ ನ್ಯೂಸ್: ಮೈದಾನಕ್ಕಿಳಿದ ಜೋಫ್ರಾ ಆರ್ಚರ್

IPL 2022 Jofra Archer: IPL 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯವನ್ನು ಮಾರ್ಚ್ 27 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

IPL 2022: ಮುಂಬೈ ಇಂಡಿಯನ್ಸ್ ಫ್ಯಾನ್ಸ್​ಗೆ ಗುಡ್​ ನ್ಯೂಸ್: ಮೈದಾನಕ್ಕಿಳಿದ ಜೋಫ್ರಾ ಆರ್ಚರ್
Mumbai Indians
TV9 Web
| Updated By: ಝಾಹಿರ್ ಯೂಸುಫ್|

Updated on:Mar 10, 2022 | 3:54 PM

Share

ಐಪಿಎಲ್ ಸೀಸನ್ 15 (IPL 2022) ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಸಿಹಿ ಸುದ್ದಿ ಸಿಕ್ಕಿದೆ. ಏಕೆಂದರೆ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ (Jofra Archer) ಹಲವು ತಿಂಗಳುಗಳ ಬಳಿಕ ಅಭ್ಯಾಸ ಆರಂಭಿಸಿದ್ದಾರೆ. ಜೋಫ್ರಾ ಆರ್ಚರ್ ಕಳೆದ ಸೀಸನ್​ ಐಪಿಎಲ್​ನಲ್ಲಿ ದ್ವಿತಿಯಾರ್ಧದಲ್ಲಿ ಕಣಕ್ಕಿಳಿದಿರಲಿಲ್ಲ. ಗಾಯದ ಕಾರಣ ಹೊರಗುಳಿದಿದ್ದ ಆರ್ಚರ್ ಆ ಬಳಿಕ ಆ್ಯಶಸ್ ಸರಣಿ, ಟಿ20 ವಿಶ್ವಕಪ್​ ಸೇರಿದಂತೆ ಇಂಗ್ಲೆಂಡ್ ತಂಡದ ಪ್ರಮುಖ ಸರಣಿಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಈ ಬಾರಿ ಜೋಫ್ರಾ ಆರ್ಚರ್ ಐಪಿಎಲ್​ನಲ್ಲಿ ಹೆಸರು ನೀಡಿದ್ದರು. ನಿರೀಕ್ಷೆಯಂತೆ ಆರ್ಚರ್ ಖರೀದಿಗೆ ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬಂದಿತ್ತು. ಅಂತಿಮವಾಗಿ 8 ಕೋಟಿ ರೂ. ನೀಡಿ ಮುಂಬೈ ಇಂಡಿಯನ್ಸ್ ಜೋಫ್ರಾ ಆರ್ಚರ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆದರೆ ಗಾಯದ ಕಾರಣ ಆರ್ಚರ್ ಈ ಬಾರಿ ಐಪಿಎಲ್ ಆಡುವುದಿಲ್ಲ ಎನ್ನಲಾಗಿತ್ತು.

ಆದರೀಗ ಐಪಿಎಲ್ ಆರಂಭಕ್ಕೆ ವಾರಗಳು ಮಾತ್ರ ಉಳಿದಿರುವಾಗ ಜೋಫ್ರಾ ಮತ್ತೆ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಬೌಲಿಂಗ್​ ಅಭ್ಯಾಸ ನಡೆಸಿದ್ದಾರೆ. ಇದರೊಂದಿಗೆ ಈ ಸೀಸನ್​ನಲ್ಲಿ ಜೋಫ್ರಾ ಆಡ್ತಾರಾ? ಎಂಬ ಪ್ರಶ್ನೆಗೆ ಉತ್ತರವಂತು ಸಿಕ್ಕಿದೆ. ಕಠಿಣ ಅಭ್ಯಾಸದಲ್ಲಿ ನಿರತರಾಗಿರುವ ಜೋಫ್ರಾ ಆರ್ಚರ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಜೋಫ್ರಾ ಆರ್ಚರ್ ಹಂಚಿಕೊಂಡಿದ್ದು, ಈ ಮೂಲಕ ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳುವ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿರುವುದನ್ನು ಈ ವಿಡಿಯೋ ಮೂಲಕ ಆರ್ಚರ್ ಸ್ಪಷ್ಟಪಡಿಸಿದ್ದಾರೆ.

View this post on Instagram

A post shared by Jofra Archer (@jofraarcher)

IPL 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯವನ್ನು ಮಾರ್ಚ್ 27 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಸದ್ಯ ನೆಟ್ಸ್‌ಗೆ ಇಳಿದಿರುವ ಜೋಫ್ರಾ ಆರ್ಚರ್ ಆರಂಭಿಕ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ಬೆಸಿಲ್ ಥಂಪಿ, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಾಂಡೆ, ಎನ್ ತಿಲಕ್ ವರ್ಮಾ, ಸಂಜಯ್ ಯಾದವ್, ಜೋಫ್ರಾ ಆರ್ಚರ್, ಡೇನಿಯಲ್ ಸಾಮ್ಸ್, ಟೈಮಲ್ ಮಿಲ್ಸ್, ಟಿಮ್ ಮಿಲ್ಸ್ , ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್, ರಮಣದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಫ್ಯಾಬಿಯನ್ ಅಲೆನ್, ಆರ್ಯನ್ ಜುಯಲ್.

ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Jofra Archer practice VIDEO ahead of IPL 2022, give hints to play for Mumbai Indians)

Published On - 3:40 pm, Thu, 10 March 22

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ